Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು

ಬೆಂಗಳೂರು, ಜುಲೈ 03: ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಬುಡಕಟ್ಟು ಸಮುದಾಯದ ಜನತೆಯೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಗೌರವಾನ್ವಿತ ರಾಷ್ಟ್ರಪತಿಗಳಾದ‌ ದ್ರೌಪದಿ ಮುರ್ಮು ಅವರು ಇಂದು ಮಧ್ಯಾಹ್ನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಗೌರವಾನ್ವಿತ ರಾಷ್ಟ್ರಪತಿಗಳನ್ನು ರಾಜ್ಯದ ಗೌರವಾನ್ವಿತ ರಾಜ್ತಪಾಲರಾದ ಥಾವರಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಮಯದಲ್ಲಿ ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್,ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಬೆಂಗಳೂರು ಪ್ರಾದೇಶಿಕ ಆಯುಕ್ತರಾದ ಆಮ್ಲನ್ ಆದಿತ್ಯ ಬಿಸ್ವಾಸ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ. ಮಣಿವಣ್ಣನ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತರಾದ ಬಿ. ದಯಾನಂದ್, ಬೆಂಗಳೂರು ಜಿಲ್ಲಾಧಿಕಾರಿ ಕೆ‌ ದಯಾನಂದ್, ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಇನ್ಹಿನಿತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ನಂತರ ಗೌರವಾನ್ವಿತ ರಾಷ್ಟ್ರಪತಿಯವರು ಚಿಕ್ಕಬಳ್ಳಾಪುರದ‌ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ವಿಶ್ವವಿದ್ಯಾಲಯದಿಂದ ಆಯೋಜಿಸಿರುವ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಚಿಕ್ಕಬಳ್ಳಾಪುರಕ್ಕೆ ಪ್ರಯಾಣಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ