Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ತಡೆ; ಜಿಲ್ಲಾ ಮಟ್ಟದ ತರಬೇತಿ ಮಹಿಳೆಯರ, ಮಕ್ಕಳ ಸಾಗಣೆ ತಡೆಗೆ ಮುಂದಾಗಿ : ನ್ಯಾ.ಹೆಚ್.ಎ.ಸಾತ್ವಿಕ್

ಸುದ್ದಿಮೂಲ ವಾರ್ತೆ ರಾಯಚೂರು, ೆ.17:
ಮಹಿಳೆಯರ ಮತ್ತು ಮಕ್ಕಳನ್ನು ಸಾಗಣೆ ಮಾಡುವ ಅನೈತಿಕ ಚಟುವಟಿಕೆಯನ್ನು ತೊಲಗಿಸುವ ಕಾರ್ಯಕ್ಕೆೆ ಸಾರ್ವಜನಿಕರು ಸಹಕರಿಸಬೇಕು. ಆಗ ಮಾತ್ರ ಅಮಾನವೀಯ ಕೃತ್ಯ ನಿಯಂತ್ರಿಿಸಲು ಸಾಧ್ಯ ಎಂದು ಹಿರಿಯ ಶ್ರೇೇಣಿಯ ದಿವಾಣಿ ನ್ಯಾಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಾಧಿಕಾರದ ಸದಸ್ಯ ಕಾರ್ಯದರ್ಶಿ ಗೌರವಾನ್ವಿಿತ ನ್ಯಾಾ.ಹೆಚ್.ಎ.ಸಾತ್ವಿಿಕ್ ಅವರು ಹೇಳಿದರು.
ೆ.17ರ ಮಂಗಳವಾರ ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಮೊದಲನೆ ಮಹಡಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಿ ಇಲಾಖೆ ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ರಾಯಚೂರು ಇವರ ಸಂಯುಕ್ತಾಾಶ್ರಯದಲ್ಲಿ ವಿವಿಧ ಭಾಗೀಧಾರ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವ ಕುರಿತು ಹಾಗೂ ಐಟಿಪಿಎ-1956ರ ಕಾಯ್ದೆೆಯ ಬಗ್ಗೆೆ ಜಿಲ್ಲಾ ಮಟ್ಟದಲ್ಲಿ ಒಂದು ದಿನದ ತರಬೇತಿ ಕಾರ್ಯಕ್ರಮಕ್ಕೆೆ ಚಾಲನೆ ನೀಡಿ ಅವರು ಮಾತನಾಡಿದರು.
ಮಾನವ ಕಳ್ಳ ಸಾಗಾಣೆಯಂತಹ ದುಷ್ಕೃತ್ಯ ಸಮಾಜಕ್ಕೆೆ ಮಾರಕವಾಗಿದೆ. ಜತೆಗೆ ಮೂಲ ಹಕ್ಕುಗಳ ಉಲ್ಲಂಘನೆ ಕುರಿತು ಅನೇಕ ದೂರುಗಳು ದಾಖಲಾಗುತ್ತಿಿವೆ. ಆದ್ದರಿಂದ ಉತ್ತಮ ಸಮಾಜ ನಿರ್ಮಾಣಕ್ಕಾಾಗಿ ಜವಾಬ್ದಾಾರಿ ಅರಿತು ಸಾರ್ವಜನಿಕರು ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಇದಕ್ಕೂ ಮೊದಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಿ ಇಲಾಖೆ ಉಪ ನಿರ್ದೇಶಕರಾದ ನವೀನ್ ಕುಮಾರ್ ಅವರು ಮಾತನಾಡಿ, ಸಮಾಜದಲ್ಲಿ ನಡೆಯುವಂಥ ಕಾನೂನು ಬಾಹಿರ ಘಟನೆಗಳಿಗೆ ಮೌನವಹಿಸಿದರೆ, ಪರೋಕ್ಷವಾಗಿ ಅಪರಾಧಿಗಳಾದಂತೆ. ಆದ್ದರಿಂದ ಕಣ್ಣ ಮುಂದೆ ದುಷ್ಕೃತ್ಯಗಳು ನಡೆದಾಗ ಅದನ್ನು ತಪ್ಪಿಿಸಬೇಕಾದ್ದು, ಪ್ರತಿಯೊಬ್ಬರ ಕರ್ತವ್ಯವಾಗಿದೆ. ಮಹಿಳೆಯರ ಅಭಿವೃದ್ಧಿಿಗಾಗಿ ಸರ್ಕಾರ ಜಾರಿ ತಂದಿರುವ ಯೋಜನೆಗಳ ಸದುಪಯೋಗವಾಗುವಂತೆ ಮಾಡಿ, ಸಮಾಜದ ಬದಲಾವಣೆಗೆ ಶ್ರಮಿಸಬೇಕು ಎಂದರು.
ಪ್ರತಿಜ್ಞಾವಿಧಿ ಬೋಧನೆ: ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವ ಕುರಿತು ತರಬೇತಿ ಕಾರ್ಯಕ್ರಮದಲ್ಲಿ ಕರ್ನಾಟಕವನ್ನು ಮಾನವ ಕಳ್ಳ ಸಾಗಾಣಿಕೆಯಿಂದ ವಿಮುಕ್ತಗೊಳಿಸಲು, ಸಂಕಷ್ಟದಲ್ಲಿರುವ ಜನರನ್ನು ರಕ್ಷಿಸಲು ಹಾಗೂ ಸಾಗಾಣಿಕೆಗೆ ಒಳಪಟ್ಟವರಿಗೆ ಸೂಕ್ತ ನ್ಯಾಾಯ ಒದಗಿಸಲು ನನ್ನ ಸೇವೆಯನ್ನು ಮುಡುಪಾಗಿಡುತ್ತೇನೆ, ಸಂವಿಧಾನದಲ್ಲಿ ನೀಡಿರುವ ಸಮಾನತೆಯನ್ನು ಸಾಧಿಸಲು ಪ್ರಾಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಜೆ.ಕುಮಾರಸ್ವಾಾಮಿ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಾಣ ಇಲಾಖೆಯ ಉಪ ನಿರ್ದೇಶಕರಾದ ಸಿಂಧೂ, ಕಾರ್ಮಿಕ ಇಲಾಖೆ ಅಧಿಕಾರಿ ಆರತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅಮರೇಶ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಾಣಾಧಿಕಾರಿ ಶಿವಮಾನಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಿ ಅಧಿಕಾರಿ ಶರಣಮ್ಮ ಕಾರನೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಕುಮಾರ, ಅಲ್ಪಸಂಖ್ಯಾಾತರ ಕಲ್ಯಾಾಣ ಇಲಾಖೆಯ ತಾಲೂಕು ಅಧಿಕಾರಿ ಮೈಬೂಬ್ ಸಾಬ್ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ಶಿಶು ಅಭಿವೃದ್ಧಿಿ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.
ಮಹಿಳಾ ಮತ್ತು ಮಕ್ಕಳ ಇಲಾಖೆಯ ತಜ್ಞರಾದ ಗಿರಿಜವ್ವ ಅವರು ಕಾರ್ಯಕ್ರಮದ ನಿರೂಪಣೆ ಮಾಡಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ