Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರೀಯ ಯುವ ಜನೋತ್ಸವ: ಹುಬ್ಬಳ್ಳಿಗೆ ಪ್ರಧಾನಿ ಮೋದಿ ಆಗಮನ

ಬೆಂಗಳೂರು, ಜ.12: ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಹುಬ್ಬಳ್ಳಿಗೆ ಆಗಮಿಸಿದ್ದಾರೆ.

ಕಾರ್ಯಕ್ರಮ ಉದ್ಘಾಟನೆಗೆ ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಲ್ಹೋತ್, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಹಾಜರಿದ್ದರು.

ದೇಶ ಹಾಗೂ ರಾಜ್ಯದ ಯುವಕರಲ್ಲಿ ಉತ್ಸಾಹ ತುಂಬಲಿದೆ:

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುವಜನೋತ್ಸವವನ್ನು ಉದ್ಘಾಟಿಸುವುದರಿಂದ ದೇಶ ಹಾಗೂ ರಾಜ್ಯದ ಯುವಕರಲ್ಲಿ ಹುರುಪು ಹಾಗೂ ಉತ್ಸಾಹ ತುಂಬಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಅಖಿಲ ಭಾರತ ಯುವಜನೋತ್ಸವ ಪ್ರಥಮ ಬಾರಿಗೆ ಈ ಭಾಗದಲ್ಲಿ ಒಂದು ವಾರಗಳ ಕಾಲ ನಡೆಯಲಿದೆ. ಭಾರತದ ಜನಸಂಖ್ಯಾ ಲಾಭವನ್ನು ಪ್ರಧಾನಿಗಳು ತಿಳಿಸಿದ್ದಾರೆ. ಜನಸಂಖ್ಯೆ ಅಭಿವೃದ್ಧಿಗೆ ಮಾರಕ ಎನ್ನುತ್ತಿದ್ದುದನ್ನು ಪರಿವರ್ತಿಸಿ ಜನಸಂಖ್ಯೆಯನ್ನು ಬಳಸಿಕೊಂಡು ದೇಶ ಕಟ್ಟಬಹುದು. ಶೇ 40 ರಷ್ಟು ಯುವಜನಾಂಗವಿರುವ ದೇಶದಲ್ಲಿ ಅವರಿಗೆ ಕೌಶಲ್ಯ ತರಬೇತಿ ನೀಡಿ ಅವಕಾಶ ಕಲ್ಪಿಸಿದರೆ ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಸಾಧ್ಯ ಎಂದು ಮನಗಂಡು ಯುವಕರಿಗೆ ಅಗತ್ಯ ಕ್ಷೇತ್ರಗಳಲ್ಲಿ ಹೊಸ ಯೋಜನೆಗಳನ್ನು ಪ್ರಧಾನಮಂತ್ರಿ ಗಳು ರೂಪಿಸಿದ್ದಾರೆ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರಥಮ ಬಾರಿಗೆ ಮೂರು ವರ್ಷಗಳ ಲ್ಲಿ ಹಲವಾರು ಡಿಗ್ರಿಗಳನ್ನು ಪಡೆಯಬಹುದಾಗಿದೆ. ಬಹುಮಾಧ್ಯಮ ಶಿಕ್ಷಣವನ್ನು ದೇಶದಲ್ಲಿ ಅನುಷ್ಠಾನಕ್ಕೆ ತರಲಾಗಿದೆ ಎಂದರು.

ಕೌಶಲ್ಯಾಭಿವೃದ್ಧಿಗೆ ಒತ್ತು

ಕೌಶಲ್ಯಾಭಿವೃದ್ಧಿಗೆ ಸ್ಕಿಲ್ ಇಂಡಿಯಾ, ಮುದ್ರಾ ಯೋಜನೆ, ಖೇಲೋ ಇಂಡಿಯಾ, ಫಿಟ್ ಇಂಡಿಯಾ, ಜೀತೋ ಇಂಡಿಯಾ ಮೂಲಕ ಒಲಂಪಿಕ್ಸ್ ನಲ್ಲಿ ಪ್ರಥಮ ಬಾರಿಗೆ ದೊಡ್ಡ ಪ್ರಮಾಣದ ಸಾಧನೆಯಾಗಿದೆ. ಸಂಸ್ಕೃತಿ ವಲಯದಲ್ಲಿಯೂ ಯುವಕರಿಗೆ ಸಮಗ್ರ ಅವಕಾಶ ನೀಡುವ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಅವರು ಹುಬ್ಬಳಿಗೆ ಆಗಮಿಸುವುದರಿಂದ ಯುವಜನೋತ್ಸವ ಯಶಸ್ವಿಯಾಗುವುದು ನಿಶ್ಚಿತ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ