Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚುನಾವಣಾ ಕರಪತ್ರದಲ್ಲಿ ಮುದ್ರಕರ ಹೆಸರು ಕಡ್ಡಾಯ

ಸುದ್ದಿಮೂಲ ವಾರ್ತೆ
ತುಮಕೂರು, ಏ.11: ಚುನಾವಣಾ ಕರಪತ್ರಗಳು, ಪೋಸ್ಟರ್‌ಗಳ ಮೇಲೆ ಮುದ್ರಕನ ಹೆಸರು, ವಿಳಾಸ, ಪ್ರಕಾಶಕರ ಹೆಸರು ಮತ್ತು ವಿಳಾಸ ಹೊಂದಿರುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ಸೂಚನೆ ನೀಡಿದ್ದಾರೆ.

ಚುನಾವಣೆಗೆ ಸಂಬಂಧಿಸಿದಂತೆ ಕೈಯಿಂದ ನಕಲು ಮಾಡುವುದನ್ನು ಹೊರತುಪಡಿಸಿ ಮುದ್ರಿಸುವ ಅಥವಾ ಯಾವುದೇ ಪ್ರಕ್ರಿಯೆಯಿಂದ ಬಹುಗ್ರಾಫ್ ಮಾಡಲಾದ ಚುನಾವಣಾ ಕರಪತ್ರ, ಕೈ-ಬಿಲ್, ಫಲಕ(ಪ್ಲಕಾರ್ಡ್), ಪೋಸ್ಟರ್‌ಗಳ ಮುಂಭಾಗದಲ್ಲಿ ಮುದ್ರಕನ ಹೆಸರು ಮತ್ತು ವಿಳಾಸ, ಪ್ರಕಾಶಕನ ಹೆಸರು ಮತ್ತು ವಿಳಾಸ ಮುದ್ರಿಸುವುದು ಕಡ್ಡಾಯವೆಂದು ಚುನಾವಣಾ ಆಯೋಗ ನಿರ್ದೇಶನ ನೀಡಿದೆ. ಈ ನಿರ್ದೇಶನವನ್ನು ಉಲ್ಲಂಘಿಸಿದವರಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ ಎರಡು ಸಾವಿರ ರೂ.ಗಳವರೆಗೆ ದಂಡ
ಅಥವಾ ಎರಡನ್ನೂ ವಿಧಿಸಬಹುದಾಗಿದ ಎಂದರು.

ಚುನಾವಣಾ ಕರಪತ್ರ, ಪೋಸ್ಟರ್‌ಗಳನ್ನು ಮುದ್ರಿಸುವ ಮುದ್ರಕರು ಪ್ರಕಾಶಕರಿಂದ ಘೋಷಣಾ ಪತ್ರ (ಪ್ರಕಾಶಕರು ವೈಯಕ್ತಿಕವಾಗಿ ತಿಳಿದಿರುವ ಇಬ್ಬರು ವ್ಯಕ್ತಿಗಳಿಂದ ದೃಢೀಕರಿಸಿದ)ವನ್ನು ದ್ವಿಪ್ರತಿಯಲ್ಲಿ ಪಡೆದು
ಘೋಷಣೆಯ ಒಂದು ಪ್ರತಿ ಹಾಗೂ ಉದ್ದೇಶಿತ ಮುದ್ರಣದ ಪ್ರತಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು. ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಮುದ್ರಕರ
ಸಭೆಯನ್ನು ಕರೆದು ಈ ಕುರಿತು ಮಾಹಿತಿ ತಿಳಿಸಬೇಕು.

ಚುನಾವಣಾ ಆಯೋಗ ಸೂಚಿಸಿರುವ ನಮೂನೆಯಲ್ಲಿ ಮುದ್ರಕರು ಮುದ್ರಿತ ವಿಷಯದ ಪ್ರತಿ, ಘೋಷಣೆ,
ಕರಪತ್ರಗಳ ಪ್ರತಿಗಳ ಸಂಖ್ಯೆ, ಮುದ್ರಿಸಲು ತಗಲುವ ವೆಚ್ಚ ಸೇರಿದಂತೆ ಮತ್ತಿತರ ವಿವರಗಳನ್ನು ಒದಗಿಸಬೇಕೆಂದು ಮುದ್ರಕರಿಗೆ ಮನವರಿಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ