Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರಾಗೃಹಗಳು ಖೈದಿಗಳ ಮನ ಪರಿವರ್ತನೆಗೆ ವೇದಿಕೆ

ಸುದ್ದಿಮೂಲ ವಾರ್ತೆ

ಮೈಸೂರು, ಅ.20 : ಇತ್ತೀಚಿನ ಕಾರಾಗೃಹಗಳು ಅಪರಾಧಿಗಳಿಗೆ ಮನಃಪರಿವರ್ತನೆಗೆ ಅವಕಾಶ ಮಾಡಿಕೊಟ್ಟು ಸಮಾಜದಲ್ಲಿ ಶಾಂತಿಯನ್ನು ನಡೆಸುವಂತಹ ಕೆಲಸಗಳನ್ನು ಕಾರಾಗೃಹಗಳು ಮಾಡುತ್ತಿವೆ ಎಂದು ಮೈಸೂರು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಅಧೀಕ್ಷಕ ಬಿ.ಎಸ್ ರಮೇಶ್ ಹೇಳಿದರು.

ಶುಕ್ರವಾರ ದಸರಾ ಮಹೋತ್ಸವದ ಅಂಗವಾಗಿ ಜಿಲ್ಲಾ ಕಾರಾಗೃಹದಲ್ಲಿ ಯೋಗ ದಸರಾ ಉಪ ಸಮಿತಿಯಿಂದ ಆಯೋಜಿಸಿದ್ದ ಕಾರಾಗೃಹ ವಾಸಿಗಳಿಗೆ ವಿಶಿಷ್ಟ ಯೋಗಭ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,0 ಆರೋಗ್ಯ ತನ್ನಿಂದ ತಾನೇ ಬರುವಂತಹ ವಸ್ತುವಲ್ಲ ಅದಕ್ಕೆ ನಿರ್ವಹಣೆಯ ಅವಶ್ಯಕತೆ ಇದೆ ಎಂದರು.

ನಮ್ಮ ದೇಹ ಮತ್ತು ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಯೋಗ ಅತಿ ಅವಶ್ಯಕ. ನಾಡ ಹಬ್ಬ ಮೈಸೂರು ದಸರಾ ಸವಿ ನೆನಪು ಕಟ್ಟಿಕೊಳ್ಳಲು ಇಂದು ನಮ್ಮ ಕಾರಾಗೃಹದಲ್ಲಿ ವಿಶಿಷ್ಟ ಯೋಗ ಅಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಒಂದು ವಿನೂತನ ಪ್ರಯತ್ನ ಎಂದು ಅಭಿಪ್ರಾಯಪಟ್ಟರು.

ಯಾವುದು ಕ್ಷಣಾರ್ಧದಲ್ಲಿ ಮಾಡಿದ ತಪ್ಪಿಗೆ ಸೆರೆಮನೆಯ ವಾಸವನ್ನು ಅನುಭವಿಸುತ್ತಿದ್ದೀರಿ. ಇಲ್ಲಿಂದ ಹೊರಡುವ ಮುನ್ನ ಮನಃಪರಿವರ್ತನೆ ಮಾಡಿಕೊಂಡು ಪ್ರತಿಯೊಬ್ಬರು ಸಮಾಜಕ್ಕೆ ಒಳ್ಳೆಯದನ್ನು ಬಯಸುವಂತಹ ಮನಸ್ಸನ್ನು ಇಟ್ಟು ಹೊರಡಬೇಕು. ವಿವಿಧ ಸಂಘ ಸಂಸ್ಥೆಗಳ ಅಡಿಯಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ ನಿಮ್ಮಲ್ಲಿರುವ ಒಳ್ಳೆಯ ಗುಣಗಳನ್ನು ಪೋಷಣೆ ಮಾಡಿ ಸಮಾಜಕ್ಕೆ ಉತ್ತಮ ನಾಗರಿಕರನ್ನಾಗಿ ಮಾಡುವ ಪ್ರಯತ್ನವನ್ನು ಇಂದಿನ ಕಾರಾಗೃಹಗಳು ಮಾಡುತ್ತಿವೆ ಎಂದರು.

ಯೋಗದಸರಾ ಉಪ ಸಮಿತಿ ಅಧ್ಯಕ್ಷ ದೇವರಾಜ ಮಾತನಾಡಿ, ನಿಮ್ಮ ಜೀವನದ ಯಾವುದೋ ಒಂದು ಕಹಿ ಘಟನೆಯಿಂದ ನೀವೆಲ್ಲರೂ ಸೆರೆಮನೆ ವಾಸವನ್ನು ಅನುಭವಿಸುತ್ತಿದ್ದೀರಾ. ಮನುಷ್ಯನಾದವನು ಕಹಿ ಘಟನೆ ಮತ್ತು ಕಹಿ ಕ್ಷಣಗಳನ್ನು ಮರೆತು ಮುಂದೆ ಸಾಗಬೇಕು ಎಂದು ಕಿವಿಮಾತು ಹೇಳಿದರು.

ಯೋಗಭ್ಯಾಸದ ಕುರಿತು ಅಭಿಪ್ರಾಯ ಹಂಚಿಕೊಂಡ ಕಾರಾಗೃಹದ ವಾಸಿಗಳು ಯೋಗದಿಂದ ನಮ್ಮ ಮನಸ್ಸು ದೇಹ ಸಮ ಸ್ಥಿತಿಯಲ್ಲಿರುತ್ತದೆ. ಧ್ಯಾನದ ಮೂಲಕ ನಮ್ಮ ಮಾನಸಿಕ ಚಿಂತೆಯನ್ನು ದೂರ ಮಾಡಬಹುದು. ಯೋಗವು ಸಕಲ ರೋಗಗಳಿಂದ ಸಂರಕ್ಷಣೆಯ ಮಂತ್ರವಾಗಿದೆ. ಮುಂದಿನ ದಿನಗಳಲ್ಲಿ ಯೋಗವನ್ನು ಚಿಕ್ಕ ವಯಸ್ಸಿನಿಂದ ಅಭ್ಯಾಸ ಮಾಡುವುದು ಉತ್ತಮ. ಹೀಗೆ ಮಾಡಿದರೆ ದೀರ್ಘಾಯುಷಿಯಾಗಿ ಬದುಕಬಹುದು. ಪೂಜೆಗೆ ಒಂದು ದೇವಾಲಯ, ಓದಿಗೊಂದು ಗ್ರಂಥಾಲಯ, ಅದೇ ರೀತಿಯಾಗಿ ಉತ್ತಮ ಆರೋಗ್ಯಕ್ಕಾಗಿ ಒಂದು ಯೋಗಾಲಯವಿರಬೇಕು ಎಂದು ತಿಳಿಸಿದರು.

ಮೈಸೂರು ಕಾರಾಗೃಹದ ಕಾರ್ಯನಿರ್ವಾಹದ ದಾಮೋದರ್ ,ಯೋಗ ದಸರಾ ಉಪ ಸಮಿತಿ ಉಪಾಧ್ಯಕ್ಷ ಮಹೇಶ್, ಭೂ ದಾಖಲೆಗಳ ಉಪ ನಿರ್ದೇಶಕಿ ಕೆ ರಮ್ಯಾ, ಯೋಗ ದಸರಾ ಉಪ ಸಮಿತಿಯ ಕಾರ್ಯಧ್ಯಕ್ಷ ಡಿ.ಎಂ ರಾಣಿ, ಹಾಗೂ ಕಾರ್ಯದರ್ಶಿ ಡಾ.ಪುಷ್ಪಾ, ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸದಸ್ಯರು, ಯೋಗ ಶಿಕ್ಷಣ ಮತ್ತು ಸಂಶೋಧನೆಯ ಸದಸ್ಯರು, ಮತ್ತು ಯೋಗ ದಸರಾ ಉಪ ಸಮಿತಿಯ ಸದಸ್ಯರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ