Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪ್ರಸಾರ, ಕಡಿವಾಣಕ್ಕೆ ಕ್ರಮ-ಪ್ರಿಯಾಂಕ್ ಖರ್ಗೆ

 

ಕಲಬುರಗಿ,ಜೂ.11: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ, ರಾಷ್ಟ್ರ ನಾಯಕರ ಬಗ್ಗೆ ಇಲ್ಲ ಸಲ್ಲದ ಪೋಸ್ಟ್ ಮಾಡುವುದಕ್ಕೆ ಕಡಿವಾಣ ಹಾಕಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ‌ ಪ್ರಿಯಾಂಕ ಖರ್ಗೆ ಹೇಳಿದರು.

ಕಲಬುರಗಿ ಕೇಂದ್ರ ಬಸ್ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ಪ್ರಮುಖ 5 ಉಚಿತ ಗ್ಯಾರಂಟಿ ಯೋಜನೆಯಲ್ಲಿ ಒಂದಾದ "ಶಕ್ತಿ" ಯೋಜನೆಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸಮಾಜದ ಸ್ವಾಸ್ಥ್ಯಕಗಕರ ಧಕ್ಕೆ ತರುವಂತಹ ಪೋಸ್ಟ್ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಸಮಾಜದ ಅಶಾಂತಿಗೆ ಕಾರಣಾಗುವುದನ್ನು ಕಂಡು ನಮ್ಮ ಸರ್ಕಾರ ಸುಮ್ಮನೆ ಕೂಡುವುದಿಲ್ಲ ಎಂದರು.

ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರವೇ ಸಮಾಜಿಕ‌ ಜಾಲತಾಣಗಳಲ್ಲಿ ಪ್ರಸಾರವಾಗುವ ಪೋಸ್ಟ್ ಗೆ ಕಡಿವಾಣ ಹಾಕಲಾಗುವುದು. ಇದು ತಮ್ಮ ಇಲಾಖೆಯ ವ್ಯಾಪ್ತಿಗೆ ಬರಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ವಿದ್ಯುತ್ ದರ ಹೆಚ್ಚಿಸಿದ್ದು ನಾವಲ್ಲ:

ಜೂನ್ ಮಾಹೆಯ ವಿದ್ಯುತ್‌ ಬಿಲ್ಲಿನಲ್ಲಿ ಡಬಲ್ ಬಿಲ್ ಬಂದಿದೆ ಎಂದು ಸುದ್ದಿಗಾರರು ಸಚಿವರ‌ ಗಮನ ಸೆಳೆದಾಗ, ವಿದ್ಯುತ್ ದರ‌ ಹೆಚ್ಚಿಸಿದ್ದು, ನಮ್ಮ ಸರ್ಕಾರ ಅಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲೇ ಕೆ.ಇ.ಆರ್.ಸಿ. ವಿದ್ಯುತ್ ದರ ಪರಿಷ್ಕರಿಸಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಅದು ಜಾರಿಗೆ ಬಂದಿರಲಿಲ್ಲ. ಇದೀಗ ಜಾರಿಗೆ ಬಂದಿದೆ ಅಷ್ಟೆ. ಇದರ ಹೊರತಾಗಿ ತಾಂತ್ರಿಕ ಕಾರಣದಿಂದ ಹೆಚ್ಚಿನ ಬಿಲ್ಲು ಬಂದಲ್ಲಿ ಅಧಿಕಾರಿಗಳು ಅದನ್ನು ನೋಡಿಕೊಳ್ಳಲಿದ್ದಾರೆ ಎಂದರು. ಶಾಸಕ ಅಲ್ಲಮಪ್ರಭು ಪಾಟೀಲ ಜೊತೆಗಿದ್ದರು‌.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ