ವಿವಿಧ ಇಲಾಖೆ ಅಧಿಕಾರಿಗಳ ಪ್ರಗತಿ ಪರಿಶೀಲನೆ
ಸುದ್ದಿಮೂಲ ವಾರ್ತೆ
ಮೈಸೂರು, ಜು.10 : ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಂಸದೀಯ ಸಮಿತಿಯು, ಸಮಿತಿ ಅಧ್ಯಕ್ಷೆ ರಮಾದೇವಿ ಅವರ ನೇತೃತ್ವದಲ್ಲಿ ಮಂಗಳವಾರ ನಗರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.,
ರಾಷ್ಟ್ರೀಯ ಪರಿಶಿಷ್ಟ ಜಾತಿ ಹಣಕಾಸು ಅಭಿವೃದ್ಧಿ ನಿಗಮ, ರಾಷ್ಟ್ರೀಯ ಸಫಾಯಿ ಕರ್ಮಚಾರಿ ಹಣಕಾಸು ಅಭಿವೃದ್ಧಿ ನಿಗಮ, ರಾಷ್ಟ್ರೀಯ ಹಿಂದುಳಿದ ವರ್ಗಗಳ ಹಣಕಾಸು ಅಭಿವೃದ್ಧಿ ನಿಗಮ ಸೇರಿದಂತೆ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಯಿತು.
ಸಮಿತಿ ಅಧ್ಯಕ್ಷೆ ರಮಾದೇವಿ ಅವರು ಮಾತನಾಡಿ, ಸಮಾಜದ ಹಿಂದುಳಿದ ವರ್ಗಗಳಾದ ಎಸ್ಸಿ, ಎಸ್ಟಿ ಹಾಗೂ ಸಪಾಯಿ ಕರ್ಮಚಾರಿಗಳು ಮುಂತಾದವರಿಗೆ ಉತ್ತಮ ಯೋಜನೆಗಳನ್ನು ಹಮ್ಮಿಕೊಂಡು ಸಮಿತಿಗೆ ವರದಿ ಸಲ್ಲಿಸುವಂತೆ ಸೂಚಿಸಿದರು.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.