ಪಾವಗಡ: ನಾಮಪತ್ರ ಸಲ್ಲಿಕೆ ವೇಳೆ ನಿಷೇಧಾಜ್ಞೆ
ಸುದ್ದಿಮೂಲ ವಾರ್ತೆ
ತುಮಕೂರು, ಏ.10: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಏ. 13 ರಿಂದ 20ರವರೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಪಾವಗಡ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯ ಸುತ್ತಮುತ್ತ ನೂರು ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶದಲ್ಲಿ ನಿಷೇಧಾಜ್ಞೆ ಹೊರಡಿಸಿ ಪಾವಗಡ ತಾಲ್ಲೂಕು ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿ ಕೆ.ಎನ್.ಸುಜಾತ ಅವರು ಆದೇಶ ಹೊರಡಿಸಿದ್ದಾರೆ.
ನಾಮಪತ್ರ ಸಲ್ಲಿಸುವ ವೇಳೆ ಜನಸಂದಣಿ ಹೆಚ್ಚಾಗುವುದರಿಂದ ಸಾರ್ವಜನಿಕರ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ನಿಷೇಧಾಜ್ಞೆ ವಿಧಿಸಲಾಗುತ್ತದೆ. ಏ.13ರಿಂದ 20ರವರೆಗೆ ಬೆ.10ರಿಂದ ಸಂಜೆ 4ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ನಿಷೇಧಾಜ್ಞೆ ಜಾರಿ ಅವಧಿಯಲ್ಲಿ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸುವ ಅಭ್ಯರ್ಥಿ ಮತ್ತು ಅವರೊಂದಿಗೆ 4 ಮಂದಿಗೆ ಮಾತ್ರ ಕಚೇರಿಯನ್ನು ಪ್ರವೇಶಿಸಲು ಅನುಮತಿ ಇರುತ್ತದೆ. ಈ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ. ನಿಷೇಧಾಜ್ಞೆಯನ್ನು ಉಲ್ಲಂಘಿಸಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸೂಚಿಸಿದ್ದಾರೆ.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.