Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಂಪೇಗೌಡ ಬಡಾವಣೆಯಲ್ಲಿ 25 ಕೋಟಿ ಮೌಲ್ಯದ ಆಸ್ತಿ ವಶ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.17: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಬೆಳ್ಳಂಬೆಳಗ್ಗೆ ನಡೆದ ಕಾರ್ಯಾಚರಣೆಯಲ್ಲಿ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಅನಧಿಕೃತವಾಗಿ ತಲೆ ಎತ್ತಿದ್ದ ನಿರ್ಮಾಣಗಳನ್ನು ತೆರವುಗೊಳಿಸಿ ಪ್ರಾಧಿಕಾರದ ಆಸ್ತಿಯನ್ನು ಮರುವಶ ಮಾಡಿಕೊಂಡಿದೆ.

ಕೊಡಿಗೇಹಳ್ಳಿ ಗ್ರಾಮದ ಸರ್ವೆ ನಂ. 108ರಲ್ಲಿನ 5 ಎಕರೆ ಪ್ರದೇಶವನ್ನು ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಭೂಸ್ವಾಧೀನಪಡಿಸಿಕೊಂಡಿದ್ದು, ಈ ಪ್ರದೇಶದ ಪೈಕಿ 3 ಎಕರೆ 35 ಗುಂಟೆಯಲ್ಲಿ ರೆವಿನ್ಯೂ ನಿವೇಶನಗಳನ್ನು ರಚಿಸಲಾಗುತ್ತಿತ್ತು. ಇದಕ್ಕೆ ಸಂಬಂಧಪಟ್ಟಂತೆ ಅನೇಕ ಬಾರಿ ನೋಟೀಸ್ ಗಳನ್ನು ನೀಡಿದ್ದರೂ ಸಹ ಅನಧಿಕೃತ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿತ್ತು. ಇಂದು ಬೆಳಿಗ್ಗೆ 3 ಎಕರೆ 35 ಗುಂಟೆ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡಿದ್ದ 7 ಶೆಡ್ ಹಾಗೂ 3 ಕಾಂಕ್ರೀಟ್ ಕಟ್ಟಡವನ್ನು ತೆರವುಗೊಳಿಸಿ, ಪ್ರಾಧಿಕಾರವು ಸುಮಾರು 25 ಕೋಟಿ ರೂ. ಮೌಲ್ಯದ ಆಸ್ತಿಯನ್ನು ತನ್ನ ವಶಕ್ಕೆ ತೆಗೆದುಕೊಂಡಿತು. ಅಲ್ಲದೇ ಇವರ ವಿರುದ್ಧ ಭೂಕಬಳಿಕೆ ಕೇಸನ್ನು ದಾಖಲಿಸಲಾಗಿದೆ.

ಈ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾನ್ಯ ಆಯುಕ್ತರ ನಿರ್ದೇಶನದಂತೆ ಪ್ರಾಧಿಕಾರದ ಆರಕ್ಷಕ ಅಧೀಕ್ಷಕ ಕೆ. ನಂಜುಂಡೇಗೌಡ ಅವರ ನೇತೃತ್ವದಲ್ಲಿ ಪಶ್ಚಿಮ ವಿಭಾಗದ ಕಾರ್ಯಪಾಲಕ ಅಭಿಯಂತರ ಅಶೋಕ್, ಸಹಾಯಕ ಕಾರ್ಯಪಾಲಕ ಅಭಿಯಂತರರುಗಳನ್ನೊಳಗೊಂಡಂತೆ ತಾವರೆಕೆರೆಯ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನೆರವೇರಿಸಲಾಯಿತು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ