Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇವಸೂಗೂರಲ್ಲಿ ಶಾಲೆ ವಿಲೀನ ವಿರೋಧಿಸಿ ಪ್ರತಿಭಟನೆ

 ಸುದ್ದಿಮೂಲ ವಾರ್ತೆ ರಾಯಚೂರು, ಜ.07:
ತಾಲೂಕಿನ ದೇವಸೂಗೂರಿನ ಜನತಾ ಕಾಲೋನಿ ಸರ್ಕಾರಿ ಶಾಲೆಯನ್ನು ಉಳಿಸಲು ಎಐಡಿಎಸ್‌ಓ ನೇತೃತ್ವದಲ್ಲಿ ಪ್ರತಿಭಟನಾ ಸಭೆ ಜರುಗಿತು.
ಇಂದು ವಿದ್ಯಾಾರ್ಥಿ ಹಾಗೂ ಪೋಷಕರ ಪ್ರತಿಭಟನಾ ಸಭೆಯಲ್ಲಿ ಎಐಡಿಎಸ್‌ಓ ಅಧ್ಯಕ್ಷ ಹಯ್ಯಳಪ್ಪ ಮಾತನಾಡಿ, ಸರ್ಕಾರ ದೇವಸೂಗೂರಿನಲ್ಲಿ ಕೆಪಿಎಸ್ ಮ್ಯಾಾಗ್ನೆೆಟ್ ಶಾಲೆಯನ್ನು ಆರಂಭಿಸಿ ಅದರ ನೆಪದಲ್ಲಿ ಸುತ್ತಮುತ್ತಲಿನ 5-6 ಕಿಲೋಮೀಟರ್ ವ್ಯಾಾಪ್ತಿಿಯಲ್ಲಿರುವ 4 ಸರ್ಕಾರಿ ಶಾಲೆಗಳನ್ನು ವಿಲೀನ ಮಾಡಲು ಹೊರಟಿದೆ. ದೇವಸೂಗುರಿನ ಜನತಾ ಕಾಲೋನಿ ಶಾಲೆಯಲ್ಲಿ 70ಕ್ಕೂ ಹೆಚ್ಚು ಮಕ್ಕಳು ಓದುತ್ತಿಿದ್ದಾರೆ. ಆದರೆ, ಈ ಶಾಲೆಯನ್ನು ವಿಲೀನಗೊಳಿಸುವುದರಿಂದ ಇಲ್ಲಿನ ಮಕ್ಕಳಿಗೆ ತೀವ್ರ ಅನ್ಯಾಾಯವಾಗಲಿದೆ ಎಂದು ಆಕ್ರೋೋಶ ವ್ಯಕ್ತಪಡಿಸಿದರು.
ಸರ್ಕಾರ ಈ ಶಾಲೆಯನ್ನು ಮುಚ್ಚಿಿ, ಇಲ್ಲಿನ ಮಕ್ಕಳನ್ನು ಬೇರೆ ಕಡೆ ಕಳುಹಿಸಲು ಅನುಮತಿ ನೀಡಿದ್ದು ಸರಿಯಲ್ಲಘಿ ಎಂದರು.
ಊರಿನ ಮುಖಂಡ ವೀರೇಶ್ ಮಾತನಾಡಿ, ನಮ್ಮ ಸರ್ಕಾರಿ ಶಾಲೆಗೆ ಬೇಕಿರುವುದು ನಮ್ಮ ಮಕ್ಕಳಿಗೆ ಜ್ಞಾನ, ನೀತಿ ಮತ್ತು ಗೌರವ ಕಲಿಸುವ ಒಳ್ಳೆೆಯ ಶಿಕ್ಷಕರು ಹಾಗೂ ಮೂಲಸೌಕರ್ಯಗಳೇ ಹೊರತು ವಿಲೀನವಲ್ಲ. ಯಾವುದೇ ಕಾರಣಕ್ಕೂ ನಮ್ಮ ಸರ್ಕಾರಿ ಶಾಲೆಯನ್ನು ಮುಚ್ಚಲು ಬಿಡುವುದಿಲ್ಲ. ಶಾಲೆ ಮುಚ್ಚುವ ವಿಷಯದಲ್ಲಿ ಸರ್ಕಾರಕ್ಕೆೆ ನಮ್ಮ ಇಡೀ ಹಳ್ಳಿಿಯ ಸಂಪೂರ್ಣ ವಿರೋಧವಿದೆ ಎಂದು ಎಚ್ಚರಿಸಿದರು.
ಜಿಲ್ಲಾ ಕಾರ್ಯದರ್ಶಿ ಬಸವರಾಜ್ ಹಾಗೂ ಗ್ರಾಾಮಸ್ಥರಾದ ತಿಮ್ಮಪ್ಪ, ರಫೀಕ್, ಹಂಪಣ್ಣ, ಸುರೇಶ, ಶರಣಮ್ಮ, ಜಯಮ್ಮ, ಭೀಮವ್ವ, ಶಾಲೆಯ ಹಳೆ ವಿದ್ಯಾಾರ್ಥಿಗಳು ಮತ್ತು ಶಾಲಾ ಮಕ್ಕಳು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ