Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಳಚೆ ನಿರ್ಮೂಲನ ಮಂಡಳಿ ವಸತಿ ಸಮುಚ್ಚಯದಲ್ಲಿ ಸ್ಥಳೀಯರಿಗೆ ಅವಕಾಶ ನೀಡುವಂತೆ ಪ್ರತಿಭಟನೆ

ಸುದ್ದಿಮೂಲ ವಾರ್ತೆ

ಕೆ.ಆರ್.ಪುರ, ಜು 26 : ಮಹದೇವಪುರ ಕ್ಷೇತ್ರದ ಸೂಲಿಕುಂಟೆ ಸಮೀಪವಿರುವ ಕೊಳಚೆ ನಿರ್ಮೂಲನ ಮಂಡಳಿಯು ನಿರ್ಮಾಣ ಮಾಡಿರುವ ವಸತಿ ಸಮುಚ್ಚಯದಲ್ಲಿ ಸ್ಥಳೀಯರಿಗೆ ಅವಕಾಶ ಕಲ್ಪಿಸದಿರುವ ರಾಜ್ಯ ಸರಕಾರದ ನಡೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ, ಮಹದೇವಪುರ ಕ್ಷೇತ್ರದ ಕೊಡತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂಲಿಕುಂಟೆ ಗ್ರಾಮದಲ್ಲಿ 50:50 ಅನುಪಾತದಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆಯ ಅನುದಾನದಲ್ಲಿ ಕೊಳಚೆ ನಿರ್ಮೂಲನ ಮಂಡಳಿಯು 900 ಮನೆಗಳನ್ನು ನಿರ್ಮಾಣ ಮಾಡಲು ಭೂಮಿ ಪಡೆದಿದೆ. ಮನೆಗಳ ನಿರ್ಮಾಣದ ನಂತರ ಕ್ಷೇತ್ರದ ಫಲಾನುಭವಿಗಳಿಗೆ ನೀಡಬೇಕಿದ್ದ 450 ಮನೆಗಳನ್ನು ಸಹ ಅನ್ಯ ಕ್ಷೇತ್ರದವರಿಗೆ ನೀಡುವ ಮೂಲಕ ರಾಜ್ಯ ಸರಕಾರ ಮಹದೇವಪುರದ ಜನತೆಗೆ ಮೋಸ ಮಾಡುತ್ತಿದೆ ಎಂದು ಹೇಳಿದರು.

ಸ್ಥಳೀಯ ವಸತಿ ನಿರ್ಗತಿಕರಿಗೆ ಮನೆಗಳನ್ನು ನೀಡದೆ ಹೋದರೆ ಮುಂದಿನ ದಿನಗಳಲ್ಲಿ ರಾಜ್ಯ ಸರಕಾರದ ವಿರುದ್ಧ ಉಗ್ರ ಹೊರಟ ಮಾಡುವುದಾಗಿ ತಿಳಿಸಿದರು.

ಇದೇ ವೇಳೆ ಸ್ಥಳೀಯ ಶಾಸಕರಿಗೆ ಹಾಗೂ ಗ್ರಾಮ ಪಂಚಾಯತಿ ಗಮನಕ್ಕೆ ತರದೆ ಮನೆಗಳ ಹಕ್ಕು ಪತ್ರ ವಿತರಣೆ ಮಾಡಲು ಮುಂದಾಗಿರುವ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಈ ವೇಳೆ ಕ್ಷೇತ್ರದ ನಗರ ಮಂಡಲ ಅಧ್ಯಕ್ಷ‌ ಮನೋಹರ ರೆಡ್ಡಿ, ಟಾಸ್ಕ್ ಫೋರ್ಸ್‌ನ ಸಾಮಾಜಿಕ ಮತ್ತು ಸಬಲೀಕರಣ ಅಧ್ಯಕ್ಷ ವೆಂಕಟಸ್ವಾಮಿ ರೆಡ್ಡಿ, ಪಾಲಿಕೆ ಮಾಜಿ ಸದಸ್ಯೆ ಪುಷ್ಪ ಮಂಜುನಾಥ್, ಗ್ರಾ.ಪಂ ಸದಸ್ಯರಾದ ಬಾಬುರೆಡ್ಡಿ, ನಾರಾಯಣಸ್ವಮಿ ಮುಖಂಡರಾದ ಬಿ.ಎಸ್ ಶ್ರೀದರ್, ಕಬ್ಬಡಿಪಿಳ್ಳಪ್ಪ ಇದ್ದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ