Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಜಮೀನುಗಳನ್ನು ಉಳಿಸುವಂತೆ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಸುದ್ದಿಮೂಲ ವಾರ್ತೆ

ಮಾಲೂರು, ಜೂ 20 :ತಾಲ್ಲೂಕಿನ ಸರ್ಕಾರಿ ಜಮೀನುಗಳನ್ನು ಉಳಿಸುಕೊಳ್ಳುವಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಆಡಳಿತ ವಿಫಲವಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸoಚಾಲಕ ಚವ್ವೇನಹಳ್ಳಿ ವಿಜಿ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿ ಮುಂದೆ ಅನಿರ್ಧಿಷ್ಟಾವಧಿಯ

ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಸಂಘಟನಾ ಸಂಚಾಲಕ ಸೂಲಿಕುಂಟೆ ರಮೇಶ್‌ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ, ಇತ್ತೀಚೆಗೆ ಭೂಮಿ ಬೆಲೆ ಹೆಚ್ಚಾಗಿದ್ದು ರಿಯಲ್ ಎಸ್ಟೇಟ್ ಮತ್ತು ಭೂಮಾಫಿಯಗಳ ಜೊತೆಗೆ ಕಂದಾಯ ಇಲಾಖೆ ಅಧಿಕಾರಿಗಳು ಸೇರಿಕೊಂಡು ನಕಲಿ ದಾಖಲಾತಿಗಳನ್ನು ಸೃಷ್ಠಿಮಾಡಿ ಸರ್ಕಾರಿ ಗೋಮಾಳ ಕೆರೆ ಕುಂಟೆ ತೋಪುಗಳನ್ನು ಅಕ್ರಮವಾಗಿ ಪರಬಾರಿ ಮಾಡಿಕೊಳ್ಳಲು ಮುಂದಾಗಿದ್ದಾರೆ ಕೆಲವು ಕಡೆ ಸರ್ಕಾರಿ ಜಮೀನುಗಳು ಮಾಯವಾಗಿ ಅಂತಸ್ತಿನ ಮಹಡಿಗಳು, ಬಡಾವಣೆಗಳು ನಿರ್ಮಾಣವಾಗಿವೆ ಇಂತಹವುಗಳಿಗೆ ಕುಮ್ಮಕ್ಕು ನೀಡುವ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಕೈ ಗೊಳ್ಳಬೇಕು ಎಂದು ಒತ್ತಾಯಿಸಿದರು.

ಮಾಲೂರು ತಾಲೂಕಿನಲ್ಲಿ ಅಕ್ರಮ ಸರ್ಕಾರಿ ಜಮೀನು ಒತ್ತುವರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಯಿಂದ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ನಾಗನಾಳ ಮುನಿಯಪ್ಪ ಉದ್ದೇಶಿಸಿ ಮಾತನಾಡಿ, ಮಾಲೂರು ತಾಲ್ಲೂಕಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕೆಗಳು ಹೆಚ್ಚುತ್ತಿದ್ದು ಪರಿಣಾಮಕಾರಿಯಾಗಿ ಬೆಳೆಯುತ್ತಿರುವುದ ರಿಂದ ಭೂ ಮಾಫಿಯಾಗಳು ಮತ್ತು ಪ್ರಭಾವಿಗಳು ಸರ್ಕಾರಿ ಜಮೀನುಗಳನ್ನು ಅಕ್ರಮ ಪಡಿಸಿಕೊಳ್ಳುತ್ತಿದ್ದಾರೆ. ವರ್ಷಗಳಿಂದ ನೆನೆ ಗುದಿಗೆ ಬಿದ್ದಿರುವ ಡಾ. ಬಿ ಆರ್ ಅಂಬೇಡ್ಕರ್ ವಿದ್ಯಾರ್ಥಿನಿಲಯದ ಕಾಮಗಾರಿಯನ್ನು ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡಬೇಕು. ಕಸಬಾ ಹೋಬಳಿ ನೀಲಕಂಠ ಅಗ್ರಹಾರ ಬಳಿ ಸಂತೆ ಮೈದಾನ ದಿಂದ ಪುರಸಭೆ ಒಕ್ಕಲೆಬ್ಬಿಸಿ ಸ್ಥಳ ಸೂಚಿಸಿರುವ ನಿರಾಶ್ರಿತ ಗುಡಿಸಿಲು ನಿವಾಸಿಗಳಿಗೆ ಹಕ್ಕು ಪತ್ರ

ನೀಡಬೇಕು. ಅಕ್ರಮ ಸಕ್ರಮಕ್ಕೆ ಸಲ್ಲಿಸಿರುವ 50, 53,57ಅರ್ಜಿಗಳಲ್ಲಿ ಅರ್ಹ ಎಸ್ಸಿ ಎಸ್ಟಿ ಫಲಾನುಭವಿಗಳಿಗೆ ಜಮೀನು ಮಂಜೂರು ಸೇರಿದಂತೆ ತಾಲ್ಲೂಕಿನ ನಮ್ಮ ಸಂಘಟನೆಯು ಬೇಡಿಕೆ ಇಟ್ಟಿರುವ ಸಮಸ್ಯೆಗಳಿಗೆ ತಾಲ್ಲೂಕು ಆಡಳಿತ ಸ್ಪಂದನೆ ನೀಡಿ ಹಂತ ಹಂತವಾಗಿ ಬಗೆಹರಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಸಂಚಾಲಕ ಎಸ್.ಎಂ.ವೆಂಕಟೇಶ್, ಸಂಘಟಿಕರಾದ ದೊಡ್ಡಕಲ್ಲಹಳ್ಳಿ ನಾರಾಯಣಸ್ವಾಮಿ, ತಿರುಮಲೇಶ್, ಅಂಗಶೆಟ್ಟಿಹಳ್ಳಿ ನಾರಾಯಣಸ್ವಾಮಿ, ನೀಲಕಂಠ ಅಗ್ರಹಾರ ಶಾಮಣ್ಣ, ವೆಂಕಟೇಶಪ್ಪ, ಹನುಮಂತನಗರ ಶಂಕರ್, ಯಶವಂತಪುರ ಮುನಿರಾಜಪ್ಪ, ಉಳ್ಳೇರಹಳ್ಳಿ ಮುನಿರಾಜು, ಹಾರೋಹಳ್ಳಿ ಮುನಿರಾಜು, ರಾಹುಲ್ ಚಂದ್ಇತರರು ಭಾಗವಹಿಸಿದ್ದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ