Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ - ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಸುದ್ದಿಮೂಲ ವಾರ್ತೆ ಬೀದರ, ೆ.12:
ರೈತರು ಮತ್ತು ಕಾರ್ಮಿಕರ ಸಮಸ್ಯೆೆಗಳನ್ನು ನಿರ್ಲಕ್ಷಿಸುತ್ತಿಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡೆ ಖಂಡಿಸಿ ಸಂಯುಕ್ತ ಕಿಸಾನ ಮೋರ್ಚಾ (ಕರ್ನಾಟಕ ರಾಜ್ಯ ರೈತ ಸಂಘ, ಅಖಿಲ ಭಾರತ ಕಿಸಾನ ಸಭಾ, ದಲಿತ ಸಂಘರ್ಷ ಸಮಿತಿ) ಹಾಗೂ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ರಾಷ್ಟ್ರ ಮಟ್ಟದಲ್ಲಿ ರೈತ-ಕಾರ್ಮಿಕರ ಬೇಡಿಕೆ ಒತ್ತಾಾಯಿಸಿ ನಡೆದ ಮುಷ್ಕರದ ನಂತರವೂ ಸರ್ಕಾರಗಳು ನೀಡಿದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಸಂಘಟನೆಗಳ ಮುಖಂಡರು ಆರೋಪಿಸಿದರು. ವಿಶೇಷವಾಗಿ ಮೂರು ಕೃಷಿ ಕಾಯ್ದೆೆಗಳನ್ನು ಹಿಂಪಡೆಯುವ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ಕೇಂದ್ರ ಸರ್ಕಾರ ಪಾಲಿಸಿಲ್ಲ ಎಂದು ಟೀಕಿಸಿದರು.
ಕನಿಷ್ಠ ಬೆಂಬಲ ಬೆಲೆಗೆ ಕಾನೂನು ರೂಪಿಸುವುದು, ರೈತರ ಎಲ್ಲಾ ಸಾಲಗಳನ್ನು ಸಂಪೂರ್ಣ ಮನ್ನಾಾ ಮಾಡುವುದು, ವಿದೇಶಿ ಕಂಪನಿಗಳಿಗೆ ಅನುಕೂಲವಾಗುವ ಮುಕ್ತ ವ್ಯಾಾಪಾರ ಒಪ್ಪಂದಗಳನ್ನು ರದ್ದುಪಡಿಸುವುದು, ಅಮೆರಿಕಾ ಸೇರಿದಂತೆ ಇತರೆ ದೇಶಗಳೊಂದಿಗೆ ಮಾಡಿಕೊಂಡಿರುವ ವಾಣಿಜ್ಯ ಒಪ್ಪಂದಗಳನ್ನು ಹಿಂಪಡೆಯುವುದು ಎಂಬ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟರು.
ಭಾರತದ ಕೃಷಿ ವಲಯಕ್ಕೆೆ ಹಾನಿಕಾರಕವಾಗುವ ಕಾರ್ಪೊರೇಟ್ ಪರ ನೀತಿಗಳನ್ನು ಕೇಂದ್ರ ಸರ್ಕಾರ ತಕ್ಷಣ ಕೈಬಿಡಬೇಕು ಎಂದು ಒತ್ತಾಾಯಿಸಿದರು. ಅಲ್ಲದೆ ಬ್ಯಾಾಂಕ್‌ಗಳಿಂದ ಸಾವಿರಾರು ಕೋಟಿ ಸಾಲ ಪಡೆದು ವಿದೇಶಗಳಿಗೆ ಪರಾರಿಯಾಗಿರುವ ಶ್ರೀಮಂತರಿಂದ ಸಾಲ ವಸೂಲಿ ಮಾಡುವ ಬದಲು, ರೈತರ ಸಾಲಮನ್ನಾಾ ನಿರ್ಲಕ್ಷಿಸಲಾಗುತ್ತಿಿದೆ ಎಂದು ಪ್ರತಿಭಟನಾಕಾರರು ಆಕ್ರೋೋಶ ವ್ಯಕ್ತಪಡಿಸಿದರು.
ಜನಪ್ರತಿನಿಧಿಗಳ ಹೆಚ್ಚುತ್ತಿಿರುವ ಭತ್ಯೆೆ ಹಾಗೂ ನಿವೃತ್ತಿಿ ಪಿಂಚಣಿಯನ್ನೂ ಪ್ರಶ್ನಿಿಸಿದ ಪ್ರತಿಭಟನಾಕಾರರು, ರೈತರು ಮತ್ತು ಕಾರ್ಮಿಕರಿಗೆ ಸಾಮಾಜಿಕ ನ್ಯಾಾಯ ಹಾಗೂ ಆರ್ಥಿಕ ಭದ್ರತೆ ಒದಗಿಸುವಂತೆ ಆಗ್ರಹಿಸಿದರು.
ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ರಾಷ್ಟ್ರಪತಿ ಮತ್ತು ಕರ್ನಾಟಕ ಮುಖ್ಯಮಂತ್ರಿಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಸರ್ಕಾರಗಳು ತಕ್ಷಣ ಸ್ಪಂದಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ಇನ್ನಷ್ಟು ತೀವ್ರಗೊಳಿಸುವುದಾಗಿ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ವಿವಿಧ ರೈತ ಹಾಗೂ ಕಾರ್ಮಿಕ ಸಂಘಟನೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿಿನ ಸಂಖ್ಯೆೆಯಲ್ಲಿ ಭಾಗವಹಿಸಿದ್ದರು.
ಪ್ರತಿಭಟನೆಯಲ್ಲಿ ಬಾಬುರಾವ ಹೊನ್ನಾಾ ಮಲ್ಲಿಕಾರ್ಜುನ ಸ್ವಾಾಮಿ, ನಜೀರ ಅಹ್ಮದ ಎಂ.ಡಿ. ಖಮರ್ ಪಟೇಲ್, ಶೇಖ ನವಾಜ್ ಮುಂತಾದವರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ