Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂಲಭೂತ ಸೌಕರ್ಯಕ್ಕಾಗಿ ಪ್ರತಿಭಟನೆ

ಸುದ್ದಿಮೂಲ ವಾರ್ತೆ

ಮಹದೇವಪುರ,ನ.22 : ಕ್ಷೇತ್ರದ ಬಿಬಿಎಂಪಿ ಭಾಗದ ಜನರಿಗೆ ವಿವಿಧ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಕರ್ನಾಟಕ ರಿಪಬ್ಲಿಕನ್ ಸೇನೆ ,ಕರ್ನಾಟಕ ಜನಾಂದೋಲನ ಪಕ್ಷ,ಹಾಗೂ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ನೂರಾರು ನಾಗರೀಕರು ಬಿಬಿಎಂಪಿ ಮಹದೇವಪುರ ವಲಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಅನುಸೂಚಿತ ಜಾತಿಗಳ ಐಕ್ಯತಾ ಸಮಿತಿ ರಾಜ್ಯಾದ್ಯಕ್ಷ ಬಿ.ಕೃಷ್ಣಪ್ಪ ಮಾತನಾಡಿ, ಸರ್ಕಾರ ನೀಡಿರುವ ವಿಶೇಷ ಅನುದಾನ ಯಾರ ಜೇಬಿಗೆ ಹೋಗುತ್ತಿದೆ ಅಧಿಕಾರಿಗಳು ಸ್ಪಷ್ಟಪಡಿಸಬೇಕು, ಕುಡಿಯುವ ನೀರು, ವಿದ್ಯುತ್ ಚರಂಡಿ,ರಸ್ತೆ ವಿವಿಧ ಮೂಲಭೂತ ಸೌಕರ್ಯ ಕಲ್ಪಿಸುವ ಕಡೆಗೆ ಗಮನ ನೀಡದೆ ಬಂಡವಾಳಶಾಹಿಗಳ ಜೊತೆ ಸೇರಿಕೊಂಡು ಭ್ರಷ್ಟಾಚಾರ ತೊಡಗಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರತಿಭಟನೆಯಲ್ಲಿ ಕೆ.ಆರ್.ಎಸ್. ಕಾರ್ಮಿಕ ಘಟಕದ ರಾಜ್ಯಾದ್ಯಕ್ಷ ಬೆಳತ್ತೂರು ವೆಂಕಟೇಶ ಮಾತನಾಡಿ ಕಳೆದ ಆರು ತಿಂಗಳಿಂದ ವೈಟ್ ಫೀಲ್ಡ್,ಬೆಳತ್ತೂರು ಕಾಡುಗುಡಿ, ಹೂಡಿ ಸೇರಿದಂತೆ ಬಹುತೇಕ ಪ್ರದೇಶದಲ್ಲಿ ಜನರಿಗೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ, ಕುಡಿಯುವ ನೀರಿಲ್ಲದೆ ಜನಸಾಮಾನ್ಯರ ಬದುಕು ಸಾಗಿಸುವುದು ಕಷ್ಟಕರವಾಗಿದೆ ಎಂದು ದೂರಿದರು.

ನೀರಿನ ಸಮಸ್ಯೆ ಪರಿಹರಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಕೇಳಿದರೆ ಕೊಳವೆ ಬಾವಿಗಳಲ್ಲಿ ನೀರಿಲ್ಲ ಎಂದು ಹಾರಿಕೆ ಉತ್ತರ ನೀಡುತ್ತಿರುವುದು ನಾಚೀಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕುಡಿಯುವ ನೀರಿನ ಸಮಸ್ಯೆ ಇರುವ ಭಾಗಗಳಲ್ಲಿ ಜನರಿಗೆ ಟ್ಯಾಂಕರ್ ಮೂಲಕ ನೀರು ಪೂರೈಸುವಂತೆ ಸರ್ಕಾರದ ಕಟ್ಟಾಜ್ಞೆಯನ್ನು ಪಾಲನೆ ಮಾಡದೆ ನಿರ್ಲಕ್ಷ್ಯ ತೋರಿದ್ದಾರೆ ಎಂದರು.

ಈ ಸಂಧರ್ಭದಲ್ಲಿ ಡಿ.ಎಸ್.ಎಸ್. ಜೈಭೀಮ ಘರ್ಜನೆ ರಾಜ್ಯ ಯುವ ಅದ್ಯಕ್ಷ ಕ್ರಿಸ್ತೂರಾಜ್, ಕೆ.ಜೆ.ಜೆ. ಎಸ್. ರಾಜ್ಯಾದ್ಯಕ್ಷ ಎಂ.ಎನ್.ರತ್ನಂ, ಪ್ರಧಾನ ಕಾರ್ಯದರ್ಶಿ ಸುಭ್ರಮಣಿ, ಕೆ.ಜೆ‌.ಎಸ್. ರಾಜ್ಯಾದ್ಯಕ್ಷ ಸುಹೇಲ್ ಮುಖಂಡರಾದ ಚಿಕ್ಕನಾರಾಯಣ, ಕಾವೇರಪ್ಪ, ಸಿರಿಷಾ, ನಾಗರಾಜು, ಸಂತೋಷ್,ರಂಜಿತ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ