Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಣಿಪುರ ಹಿಂಸಾಚಾರ ಖಂಡಿಸಿ ಆನೇಕಲ್‌ ನಲ್ಲಿ ಪ್ರತಿಭಟನೆ

ಸುದ್ದಿಮೂಲ ವಾರ್ತೆ

ಆನೇಕಲ್‌,ಜು.25: ಮಣಿಪುರದಲ್ಲಿ ನಡೆದ ಮಹಿಳೆಯರ ಬೆತ್ತಲೆ ಮೆರವಣಿಗೆಯನ್ನು ಖಂಡಿಸಿ ಆನೇಕಲ್ ಪಟ್ಟಣದ ಅತ್ತಿಬೆಲೆ ಸರ್ಕಲ್ ನಲ್ಲಿ ದಲಿತ ಸಂಘರ್ಷ ಸಮಿತಿ, ಸಮಾನ ಮನಸ್ಕರ ಒಕ್ಕೂಟ ಮತ್ತು ಮಹಿಳಾ ಮೇಲಿನ ಅತ್ಯಾಚಾರ ವಿರೋಧಿ ಒಕ್ಕೂಟ ಸಹಯೋಗದಲ್ಲಿ ಸಾಂಕೇತಿಕ ಧರಣಿಯನ್ನು ಹಮ್ಮಿಕೊಳ್ಳಲಾಗಿತ್ತು.

ಅತ್ತಿಬೆಲೆ ಸರ್ಕಲ್ ನಲ್ಲಿ ಮಣಿಪುರ ಸರ್ಕಾರ ಮತ್ತು ಪ್ರಧಾನ ಮಂತ್ರಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು. ಆರೋಪಿಗಳಿಗೆ ಗಲ್ಲು ಶಿಕ್ಷೆ ಗೆ ಒತ್ತಾಯಿಸಿ ಧಿಕ್ಕಾರ ಕೂಗಿದರು.

ದಲಿತ ಸಂಘಟನೆ ಒಕ್ಕೂಟದ ಅಧ್ಯಕ್ಷ ರಾವಣ ಮಾತನಾಡಿ, ಸಂವಿಧಾನದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನವಿದೆ. ಮಣಿಪುರದಲ್ಲಿ ಅತ್ಯಾಚಾರ ಮಾಡಲು ಕಾರಣ ಆರ್ ಎಸ್ ಎಸ್ ಸಂಘಟನೆ. ಬಹಿರಂಗವಾಗಿ ಅವರ ಮೇಲೆ ಅತ್ಯಾಚಾರವನ್ನು ಎಸಗಿದ್ದಾರೆ. ಪ್ರಧಾನಮಂತ್ರಿ ಕೂಡ ಮೌನ ವಹಿಸಿರುವುದು ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮ ರಾಜ್ಯದ ಸರ್ಕಾರದ ವಿರುದ್ಧ ಕ್ರಮವನ್ನು ಕೈಗೊಳ್ಳಬೇಕು. ಅತ್ಯಾಚಾರ ಎಸಗಿರುವ ಆರೋಪಿಗಳಿಗೆ ಗಲ್ಲು ಶಿಕ್ಷೆಯನ್ನು ವಿಧಿಸಬೇಕು ಎಂದು ಒತ್ತಾಯಿಸಿದರು.

ಮಹಿಳಾ ಹೋರಾಟಗಾರ್ತಿ ಪಾಪಮ್ಮ ಮಾತನಾಡಿ, ಬೆತ್ತಲೆಗೊಳಿಸಿ ಅವಮಾನಗೊಳಿಸಿದವರನ್ನು ಗಲ್ಲು ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹ ಮಾಡಿದರು.

ಕಾರ್ಯಕ್ರಮದಲ್ಲಿ ದಲಿತ ಪರ ಸಂಘಟನೆ ಒಕ್ಕೂಟ ದಲಿತ ಸಂಘರ್ಷ ಸಮಿತಿ ಸಮಾನ ಮನಸ್ಕರ ಒಕ್ಕೂಟ ಮುಖಂಡರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು..
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ