Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಂಜಾಬ್ ಸಿಎಂ ಭಗವಂತ್ ಮಾನ್ ಭರ್ಜರಿ ರೋಡ್ ಶೋ

ಸುದ್ದಿಮೂಲ ವಾರ್ತೆ

ಬೆಂಗಳೂರು,ಮೇ.1: ಬೆಂಗಳೂರಿನ ದಾಸರಹಳ್ಳಿಯ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಪಂಜಾಬ್ ಮುಖ್ಯಮಂತ್ರಿ ಶ್ರೀ ಭಗವಂತ್ ಮಾನ್ ರವರು ಆಮ್ ಆದ್ಮಿ ಪಕ್ಷದ ಆಭ್ಯರ್ಥಿ ಪರವಾಗಿ ಬೃಹತ್ ರೋಡ್ ಶೋ ನಡೆಸಿದ್ದಾರೆ.

ಬೆಳಗ್ಗೆ 11.00 ಗಂಟೆಗೆ ಬೆಂಗಳೂರಿನ ದಾಸರಹಳ್ಳಿಯ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿ ಕೀರ್ತನ್ ಕುಮಾರ್ ಅವರು ಬೃಹತ್ ರೋಡ್ ಶೋ ನಡೆಸಿದ್ದಾರೆ. ಬೆಂಗಳೂರಿನ ದಾಸರಹಳ್ಳಿ ಬಳಿಯ ಹೆಗ್ಗೇನಹಳ್ಳಿಯ ಇಂದಿರಾ ಕ್ಯಾಂಟೀನ್ ನಿಂದ ಪೀಣ್ಯ 2ನೇ ಹಂತದ ಬಸ್ ನಿಲ್ದಾಣ, ರಾಜಗೋಪಾಲ ನಗರ ಪೊಲೀಸ್ ಠಾಣೆ ರಸ್ತೆ ಮಾರ್ಗವಾಗಿ ದುಗುಲಮ್ಮ ದೇವಸ್ಥಾನದವರೆಗೆ ಬೃಹತ್ ರೋಡ್ ಶೋ ಮೂಲಕ ಚುನಾವಣಾ ಪ್ರಚಾರವನ್ನ ನಡೆಸಿದ್ದಾರೆ.

ಕರ್ನಾಟಕದಲ್ಲಿ 40 ಪರ್ಸೆಂಟ್‌ ಕಮಿಷನ್‌ ಡಬಲ್ ಇಂಜಿನ್ ಸರ್ಕಾರವಿದ್ದು, ಈ ಹಿಂದಿನ ಕಾಂಗ್ರೆಸ್‌ ಸರ್ಕಾರಕ್ಕಿಂತ ಭ್ರಷ್ಟಾಚಾರ ಡಬಲ್‌ ಆಗಿದೆ. ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ಹೊಂದಾಣಿಕೆ ರಾಜಕಾರಣವಿದೆ. ಕರ್ನಾಟಕಕ್ಕೆ ಡಬಲ್‌ ಇಂಜಿನ್‌ ಸರ್ಕಾರದ ಅಗತ್ಯವಿಲ್ಲ ಹೊಸ ಇಂಜಿನ್‌ 'ಕೇಜ್ರಿವಾಲ್‌ ಮಾದರಿ' ಸರ್ಕಾರ ಬೇಕಾಗಿದೆ. ಈಗಾಗಲೇ ದೆಹಲಿ ಮತ್ತು ಪಂಜಾಬ್‌ನಲ್ಲಿ ರಾಜಕೀಯ ಸ್ವಚ್ಛತೆಯನ್ನ ಮಾಡಲಾಗಿದೆ ಈಗ ಕರ್ನಾಟಕದಲ್ಲಿ ಸ್ವಚ್ಛತೆ ಮಾಡಬೇಕು ಎಂದು ಭಗವಂತ್ ಮಾನ್ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.

ಈ ವೇಳೆ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಕೀರ್ತನ್ ಕುಮಾರ್, ಆಮ್ ಆದ್ಮಿ ಪಾರ್ಟಿಯ ರಾಜ್ಯಾದ್ಯಕ್ಷ ಪೃಥ್ವಿ ರೆಡ್ಡಿ ಸೇರಿದಂತೆ ಪಕ್ಷದ ಅನೇಕ ಮುಖಂಡರು, ಕಾರ್ಯಕರ್ತರು, ಸಾವಿರಾರು ಆಪ್ ಬೆಂಬಲಿಗರು ಬೃಹತ್ ರೋಡ್ ಶೋನಲ್ಲಿ ಭಾಗವಹಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ