Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೋವಿಂದರಾಜನಗರ ಕ್ಷೇತ್ರದಲ್ಲಿ ಬಸವಣ್ಣನ ಪುತ್ಥಳಿ: ಶಾಸಕ ಪ್ರಿಯಕೃಷ್ಣ

ಸುದ್ದಿಮೂಲ ವಾರ್ತೆ

ಬೆಂಗಳೂರು,ಅ.8:ಗೋವಿಂದರಾಜ ನಗರ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಯಕ ಯೋಗಿ, ಜಗಜ್ಯೋತಿ ಬಸವಣ್ಣ ಅವರ ಪುತ್ಥಳಿ ಸ್ಥಾಪಿಸಲು ಅಗತ್ಯ ನೆರವು ನೀಡಲಾಗುವುದು ಎಂದು ಕ್ಷೇತ್ರದ ಶಾಸಕ ಪ್ರಿಯಕೃಷ್ಣ ಶನಿವಾರ ಹೇಳಿದ್ದಾರೆ.

ವಿಜಯನಗರದ ಪಾಲಿಕೆ ಸೌಧದ ಡಾ.ಎಂ.ಚಿದಾನಂದ ಮೂರ್ತಿ ಸಭಾಂಗಣದಲ್ಲಿ ಶನಿವಾರ ರಾಷ್ಟ್ರೀಯ ಬಸವತತ್ವ ಪರಿಷತ್ತು ವತಿಯಿಂದ ನಡೆದ 67ನೇ ತಿಂಗಳ ಶರಣ ಸಂಗಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಈ ಭಾಗದಲ್ಲಿ ಅನೇಕ ಮಹನಿಯರ ಪುತ್ಥಳಿ ಗಳನ್ನು ಸ್ಥಾಪಿಸಲು ಅಗತ್ಯವಾದ ಎಲ್ಲಾ ನೆರವು ಮತ್ತು ಸಹಕಾರ ನೀಡಿದ್ದೇವೆ. ಮಹಾನ್ ದಾರ್ಶನಿಕರಾದ ಬಸವೇಶ್ವರರ ಪುತ್ಥಳಿ ಅನಾವರಣಕ್ಕೂ ಅವಕಾಶ ಕಲ್ಪಿಸುತ್ತೇವೆ ತಮ್ಮ ತಂದೆ ವಿಜಯನಗರ ಶಾಸಕ ಕೃಷ್ಣಪ್ಪ ಹಾಗೂ ತಮ್ಮ ಪರವಾಗಿ ವಾಗ್ದಾನ ನೀಡಿದರು.

ಇದಕ್ಕೂ ಮೊದಲು ವಿಷಯ ಪ್ರಸ್ತಾಪಿ, ನಂತರ ಶಾಸಕರಿಗೆ ಕೃತಜ್ಞತೆ ಸಲ್ಲಿಸಿದ ಪರಿಷತ್ತಿನ ರಾಜ್ಯಾಧ್ಯಕ್ಷ ಡಿ.ಟಿ.ಅರುಣ್ ಕುಮಾರ್ ಪ್ರತಿ ತಿಂಗಳು ಹಮ್ಮಿಕೊಂಡು ಬರುತ್ತಿರುವ ಶರಣ ಸಂಗಮ ಕಾರ್ಯಕ್ರಮದ ಯಶಸ್ಸಿನ ಬಗ್ಗೆ ಹರ್ಷ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಥಣಿ ಗಚ್ಚಿನ ಮಠದ ಶಿವ ಬಸವಸ್ವಾಮೀಜಿ ಅವರು, ಪರಿಷತ್ತಿನ ಪರವಾಗಿ ಬಸವೇಶ್ವರ ಪುತ್ಥಳಿ ಸ್ಥಾಪನೆ ಹಾಗೂ ವಿಜಯನಗರ ಮೆಟ್ರೋ ನಿಲ್ದಾಣಕ್ಕೆ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಹೆಸರಿಡುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ 'ಸಮಾನತೆಯ ಹರಿಕಾರ ಬಸವಣ್ಣ' ವಿಷಯ ಕುರಿತು ಮಾತನಾಡಿದ ಬೆಂಗಳೂರಿನ ಮಾರತ್ ಹಳ್ಳಿ ಭಾಗದ ಎಸಿಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಅವರು, ಬಸವತತ್ವ ಕೊರಳಿನ ಧರ್ಮವಲ್ಲ, ಕರುಳಿನ ಧರ್ಮ. ಪೋಷಕರು ತಮ್ಮ ಮಕ್ಕಳಿಗೆ ಮನೆಯಿಂದಲೇ ಹೆಣ್ಣು-ಗಂಡು ಎಂಬ ಬೇಧವಿಲ್ಲದೆ ಸಮಾನತೆಯ ಅಭ್ಯಾಸ ಮಾಡಿಸಬೇಕು ಎಂದು ಬಸವತತ್ವದ ಮಹತ್ವವನ್ನು ವಚನಗಳ ಉಲ್ಲೇಖ ದೊಂದಿಗೆ ಕಿಕ್ಕಿರಿದು ತುಂಬಿದ್ದ ಸಭಿಕರ ಮುಂದೆ ಎಳೆಎಳೆಯಾಗಿ ತೆರೆದಿಟ್ಟರು.

ಸಮಾರಂಭದಲ್ಲಿ ವೇದಿಕೆ ಮೇಲಿದ್ದ ಎಸಿಪಿ ಪ್ರಿಯದರ್ಶಿನಿ ಮತ್ತು ಅರುಣ್ ಕುಮಾರ್ ಅವರ ಮಾತೃಶ್ರೀ ಅವರು ಸೇರಿದಂತೆ ಅತಿಥಿಗಳನ್ನು ಸನ್ಮಾನಿಸಲಾಯಿತು. ಪ್ರೇಮಶಾಂತವೀರಯ್ಯ ಮತ್ತು ತಂಡದಿಂದ ವಚನ ಗಾಯನ ಸಭಿಕರ ಮನ ಸೆಳೆಯಿತು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ