Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಬೂನು ಕಾರ್ಖಾನೆಗೆ ತ್ವರಿತ ಗತಿಯಲ್ಲಿ ಕಾರ್ಪೊರೇಟ್ ರೂಪ

ಸುದ್ದಿಮೂಲ ವಾರ್ತೆ

ಬೆಂಗಳೂರು, ಸೆ.22: ಲಾಭದಲ್ಲಿದ್ದರೂ ಸಮಕಾಲೀನ ಮಾರುಕಟ್ಟೆಗೆ ತಕ್ಕಂತೆ ಇಲ್ಲದಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್‌ಡಿಎಲ್‌)ಕ್ಕೆ ಸಂಪೂರ್ಣ ಹೊಸ ರೂಪ ಕೊಟ್ಟು, ಕಾರ್ಪೊರೇಟ್ ಶೈಲಿಯಲ್ಲಿ ಅದರ ಚಟುವಟಿಕೆಗಳು ಇರುವ ಹಾಗೆ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.

ಶುಕ್ರವಾರ ಇಲ್ಲಿ ನಡೆದ ಕಾರ್ಖಾನೆಯ ಆಡಳಿತ ಮಂಡಳಿ ಸಭೆಯಲ್ಲಿ ಮಾತನಾಡಿದ ಕಾರ್ಖಾನೆ ಅಧ್ಯಕ್ಷರೂ ಸಚಿವರು, ‘ಕೆಎಸ್‌ಡಿಎಲ್‌ ಅನ್ನು ಕೇವಲ ಸರಕಾರಿ ಉದ್ದಿಮೆಯಾಗಿ ನೋಡುವ ದೃಷ್ಟಿಕೋನಕ್ಕೆ ವಿದಾಯ ಹೇಳಲಾಗುವುದು. ಈ ಸಂಸ್ಥೆ ತಯಾರಿಸುವ ಮೈಸೋಪು, ಊದುಗಡ್ಡಿ ಸೇರಿದಂತೆ ಪ್ರತಿಯೊಂದು ಉತ್ಪನ್ನವೂ ಸಾಮಾನ್ಯ ಕಿರಾಣಿ ಅಂಗಡಿಯಿಂದ ಹಿಡಿದ ಸೂಪರ್ ಸ್ಪೆಷಾಲಿಟಿ ಮಾಲ್ ವರೆಗೆ ಎಲ್ಲೆಡೆಯೂ ಸಿಗುವಂತೆ ಮಾಡಲಾಗುವುದು. ಒಟ್ಟಿನಲ್ಲಿ, ಇಡೀ ಭಾರತದಾದ್ಯಂತ ಮಾರುಕಟ್ಟೆ ಸೃಷ್ಟಿಸಿಕೊಳ್ಳಬೇಕು ಎನ್ನುವುದು ಈಗಿನ ಗುರಿಯಾಗಿದೆ” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೆಎಸ್‌ಡಿಎಲ್‌ ಈಗ ಹಲವು ಬ್ರ್ಯಾಂಡ್ ಗಳನ್ನು ಹೊಂದಿದೆ. ಇವುಗಳ ಜತೆಗೆ ಹೊಸಹೊಸ ಬ್ರ್ಯಾಂಡ್ ಉತ್ಪನ್ನಗಳನ್ನೂ ತಯಾರಿಸಲಾಗುವುದು. ಲ್ಯಾವೆಂಡರ್, ಬೇವು, ಗುಲಾಬಿ, ಹರಿಶಿಣ ಇತ್ಯಾದಿ ವಿಧದ ರೀತಿಯ ಸಾಬೂನುಗಳನ್ನು ಮಾರುಕಟ್ಟೆಗೆ ಹೊಸದಾಗಿ ಪರಿಚಯಿಸಲಾಗುವುದು. ಗುಣಮಟ್ಟ, ದಕ್ಷ ಆಡಳಿತ, ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆ ವಿಸ್ತರಣೆ ಇವು ಈಗ ನಮ್ಮ ಮುಂದಿನ ಉಪಕ್ರಮಗಳಾಗಿವೆ ಎಂದು ಅವರು ತಿಳಿಸಿದರು.

ಕೆಎಸ್‌ಡಿಎಲ್ ಉತ್ಪನ್ನಗಳು ಉತ್ಕೃಷ್ಟ ಗುಣಮಟ್ಟದಿಂದ ಕೂಡಿವೆ. ಆದರೆ, ಮಾರುಕಟ್ಟೆಯಲ್ಲಿ ಡಾಬರ್, ಹಿಂದೂಸ್ಥಾನ್ ಯೂನಿಲಿವರ್ ಲಿಮಿಟೆಡ್ ತರಹದ ಕಂಪನಿಗಳು ಸಿಂಹಪಾಲು ಹೊಂದಿವೆ. ಜತೆಗೆ ಕೆಎಸ್ಡಿಎಲ್ ಕರ್ನಾಟಕವನ್ನು ದಾಟಿ ಆಚೆಗೆ ಹೆಚ್ಚಾಗಿ ಹೋಗಿಲ್ಲ. ಸ್ಪರ್ಧಾತ್ಮಕ ಮಾರುಕಟ್ಟೆಯ ಈ ಯುಗದಲ್ಲಿ ಈ ರೀತಿಯ ಧೋರಣೆ ಸರಿ ಇಲ್ಲ. ಇನ್ನು ಮುಂದೆ ಕೆಎಸ್ಡಿಎಲ್ ರಾಜ್ಯದ ಜತೆಗೆ ಇಡೀ ದೇಶದ ಸಾಬೂನು ಮತ್ತು ಮಾರ್ಜಕಗಳ ಮಾರುಕಟ್ಟೆಯಲ್ಲಿ ಅತ್ಯಧಿಕ ಪಾಲು ಹೊಂದಬೇಕು ಎಂದು ಅವರು ವಿವರಿಸಿದರು.

ರಾಜ್ಯದ ಉದ್ದಗಲಕ್ಕೂ ಇರುವ ಸರಕಾರಿ ಕಚೇರಿಗಳು ಮತ್ತು ವಿದ್ಯಾರ್ಥಿ ನಿಲಯಗಳಿಗೆ ಇನ್ನು ಮುಂದೆ ಕೆಎಸ್ಡಿಎಲ್ ತಯಾರಿಸುವ ಸಾಬೂನು, ಲಿಕ್ವಿಡ್ ಸೋಪ್, ಹ್ಯಾಂಡ್ ವಾಶ್, ಡಿಶ್ ವಾಶ್ ಗಳನ್ನೇ ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಇದರ ಜತೆಗೆ ವ್ಯಾಪಕ ಸ್ವರೂಪದಲ್ಲಿ ಬ್ರ್ಯಾಂಡಿಂಗ್ ಚಟುವಟಿಕೆಗಳನ್ನು ಆಕರ್ಷಕವಾಗಿ ಹಮ್ಮಿಕೊಳ್ಳಲಾಗುವುದು ಎಂದು ಸಚಿವರು ನುಡಿದರು.

ಈ ಉದ್ದಿಮೆಯು ಮೈಸೂರು ಮಹಾರಾಜರ ಕಾಲದ ಹೆಗ್ಗುರುತುಗಳಲ್ಲಿ ಒಂದಾಗಿದೆ. ಇದಕ್ಕೆ ಸಮಕಾಲೀನ ಸ್ಪರ್ಶ ಕೊಡಬೇಕಾದ್ದು ಈಗಿನ ಜರೂರಾಗಿದೆ. ಲಾಭವನ್ನು ಹಿಗ್ಗಿಸಿಕೊಳ್ಳುವುದರೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡುವುದೊಂದೇ ಇದಕ್ಕಿರುವ ದಾರಿಯಾಗಿದೆ ಎಂದು ಪಾಟೀಲ ಹೇಳಿದರು.

ಸಭೆಯಲ್ಲಿ ಕೆಎಸ್ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್, ಎಂಎಸ್ಐಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜಕುಮಾರ್, ಕೈಗಾರಿಕಾ ಇಲಾಖೆಯ ನಿರ್ದೇಶಕ ರಮೇಶ್ ಮುಂತಾದವರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ