Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾ.25ರಂದು ಬೆಂಗಳೂರು ಹಬ್ಬ: ಆರ್. ಅಶೋಕ್

ಸುದ್ದಿಮೂಲ ವಾರ್ತೆ
ಬೆಂಗಳೂರು, ಮಾ, 21; ಕರ್ನಾಟಕ ಸಂಸ್ಕತಿ ಇತಿಹಾಸ ಹಾಗೂ ಪರಂಪರೆಗಳನ್ನು ಬೆಂಗಳೂರಿನಲ್ಲಿ ನೆಲೆಸಿರುವ ಭಾಷಿಕರನ್ನು ಒಳಗೊಂಡಂತೆ ನಾಡಿನ ಜನರಿಗೆ ಪರಿಚಯಿಸುವ ದೃಷ್ಟಿಯಿಂದ ಮಾರ್ಚ್ 25ರಂದು ಬೆಂಗಳೂರು ಹಬ್ಬ ಆಚರಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಮ್ಮ ಬೆಂಗಳೂರು ಹಬ್ಬ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಅವರು, ಕನ್ನಡ ಮತ್ತು ಸಂಸ್ಕತಿ ಇಲಾಖೆ ವತಿಯಿಂದ ಬೆಂಗಳೂರು ಹಬ್ಬವನ್ನು ಹಮ್ಮಿಕೊಂಡಿದ್ದು, ಅಂದು  ಬೆಳಿಗ್ಗೆ 10.00 ರಿಂದ ಸಂಜೆ 6.00 ರವರೆಗೆ ಕಬ್ಬನ್ ಪಾರ್ಕ್ ಆವರಣದ ವಿವಿಧ ಸ್ಥಳಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮೇಳಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದರು.

ಅಂದು ಸಂಜೆ 6 ಗಂಟೆಗೆ ವಿಧಾನಸೌಧದ ಮೆಟ್ಟಿಲುಗಳ ಮುಂಭಾಗದ ವೇದಿಕೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ನಂತರ ಅನನ್ಯ ಭಟ್, ನವೀನ್ ಸಜ್ಜು, ಜನಾರ್ಧನ್ ತಂಡದವರಿಂದ ಸಂಗೀತ ಕಾರ್ಯಕ್ರಮಗಳು ಜರುಗಲಿವೆ. ಕಬ್ಬನ್ ಪಾರ್ಕ್ ಆವರಣದಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ ಹಾಗೂ ಕರ್ನಾಟಕ ಲಲಿತಕಲಾ ಅಕಾಡೆಮಿಯ ಸಹಯೋಗದಲ್ಲಿ ಚಿತ್ರಸಂತೆಯ ಮಾದರಿಯಲ್ಲಿ ಕಬ್ಬನ್ ಪಾರ್ಕ್‍ನ ರಸ್ತೆಯಲ್ಲಿ ವೈವಿಧ್ಯಮಯ ಚಿತ್ರಕಲೆಗಳ ಪ್ರಾತ್ಯಕ್ಷಿಕೆ, ಪ್ರದರ್ಶನ ಮತ್ತು ಮಾರಾಟ ಹಾಗೂ ಶಿಲ್ಪಕಲಾ ಉತ್ಸವದಡಿ ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ವತಿಯಿಂದ ಜೇಡಿಮಣ್ಣು/ಶಿಲೆ/ಕಾಷ್ಠ ಶಿಲ್ಪಗಳ ಪ್ರಾತ್ಯಕ್ಷಿಕೆ, ಪ್ರದರ್ಶನ ಮತ್ತು ಮಾರಾಟಗಳನ್ನು ಏರ್ಪಡಿಸಲಾಗಿದೆ. ವಿವಿಧ ಇಲಾಖೆಗಳು, ಅಕಾಡೆಮಿಗಳು, ವಿವಿಧ ಸಂಘಟನೆಗಳ ವತಿಯಿಂದ ಕರಕುಶಲ ವಸ್ತುಗಳ ಮೇಳವನ್ನು ಆಯೋಜಿಸಲಾಗಿದೆ.

ಬಾಲಭವನ ಆವರಣದ ಆಂಪೀಕ್ ಥಿಯೇಟರ್‌ನಲ್ಲಿ ವಿವಿಧ ಅಕಾಡೆಮಿಗಳು, ರಂಗ ಶಂಕರ ಮತ್ತು ನೀನಾಸಂ ಸಂಸ್ಥೆಗಳ ಸಹಯೋಗದಲ್ಲಿ ನಾಟಕ, ಬೀದಿನಾಟಕಗಳು, ಗೊಂಬೆ ಪ್ರದರ್ಶನ, ಯಕ್ಷಗಾನ, ಗಾಯನ, ನೃತ್ಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದರು.

ಕಬ್ಬನ್ ಪಾರ್ಕ್ ಬ್ಯಾಂಡ್ ಸ್ಟಾಂಡ್ ವೇದಿಕೆಯಲ್ಲಿ ಪೊಲೀಸ್ ಬ್ಯಾಂಡ್ ವಾದನ, ನೃತ್ಯಜನಪದ ಗಾಯನ, ಯಕ್ಷಗಾನ, ನಾಟಕ ಹಾಗೂ ವಿವಿಧ ರಾಜ್ಯಗಳ ಸಂಘಟನೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನವಿರುತ್ತದೆ. ಬಾಲಭವನ ಸಭಾಂಗಣದಲ್ಲಿ ಮಾರ್ಚ್ 24 ರಿಂದ   25 ರವರೆಗೆ ಪ್ರತಿದಿನ 3 ಪ್ರದರ್ಶನಗಳ ಮಕ್ಕಳ ಚಲನಚಿತ್ರೋತ್ಸವವನ್ನು ಆಯೋಜಿಸಲಾಗಿದೆ ಎಂದರು.

ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಪುಸ್ತಕ ಪ್ರಾಧಿಕಾರ, ಕುವೆಂಪು ಭಾಷಾಭಾರತಿ ಪ್ರಾಧಿಕಾರ ಹಾಗೂ ಇತರೆ ಪ್ರಕಾಶನ ಸಂಸ್ಥೆಗಳ ಸಹಯೋಗದಲ್ಲಿ ಕಬ್ಬನ್ ಪಾರ್ಕ್ ಅವರಣದಲ್ಲಿ ಪುಸ್ತಕ ಮೇಳವನ್ನು ಏರ್ಪಡಿಸಲಾಗಿದೆ. ಹೊಟೇಲ್‍ಗಳ ಸಂಘ ಹಾಗೂ ಬೆಂಗಳೂರಿನಲ್ಲಿರುವ ವಿವಿಧ ರಾಜ್ಯಗಳ ಸಂಘಗಳ ಸಹಯೋಗದಲ್ಲಿ ಕಬ್ಬನ್ ಪಾರ್ಕ್‍ನಲ್ಲಿ ಆಹಾರ ಮೇಳವನ್ನು ಆಯೋಜಿಸಲಾಗಿದೆ. ಬೆಂಗಳೂರಿನ ಖ್ಯಾತ ಹೋಟೆಲ್‍ಗಳ ಎಲ್ಲಾ ತಿನಿಸುಗಳ ಪ್ರದರ್ಶನ ಮತ್ತು ಮಾರಾಟವನ್ನು ಒಂದೇ ಸ್ಥಳದಲ್ಲಿ ದೊರೆಯುವಂತೆ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು ಹಬ್ಬದ ಅಂಗವಾಗಿ ಮಾರ್ಚ್ 25 ಮತ್ತು 26ರಂದು ಬೆಂಗಳೂರಿನ ಆಯ್ಕೆ ಸಿನಿಮಾ ಮಂದಿರಗಳಲ್ಲಿ ಬೆಳಗಿನ ಆಟದಲ್ಲಿ ಹಳೆಯ ಕನ್ನಡ ಸಿನಿಮಾಗಳ ಉಚಿತ ವೀಕ್ಷಣೆಗೆ ಅವಕಾಶ ಮಾಡಲಾಗಿದೆ.

ಮಾರ್ಚ್ 26ರಂದು ಸಂಜೆ 05.00 ಗಂಟೆಗೆ ವಿಧಾನಸೌಧದ ಆವರಣದಲ್ಲಿ ಕೆಂಪೇಗೌಡರ ಪ್ರತಿಮೆ ಹಾಗೂ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ಅನಾವರಣಗೊಳಿಸಲಾಗುವುದು.  ನಂತರ ನಾಡಿನ ಪ್ರಸಿದ್ಧ ಸಂಗೀತಗಾರರಿಂದ  ಗಾಯನ ಕಾರ್ಯಕ್ರಮ ಹಾಗೂ ಪ್ರಭಾತ್ ಕಲಾವಿದರಿಂದ ನೃತ್ಯ ಪ್ರರ್ಶನ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಶಾಸಕರಾದ ಸತೀಶ್ ರೆಡ್ಡಿ, ಕೃಷ್ಣಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಾರ್ಯದರ್ಶಿ ಡಾ.ಎನ್. ಮಂಜುಳ. ಬಿ.ಬಿ.ಎಂ.ಪಿ. ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಪ್ರತಾಪ್ ರೆಡ್ಡಿ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ