Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಬೇರೆ ಪಕ್ಷಗಳು ಹಣ ನೀಡಿದರೂ ಎಎಪಿಗೆ ಮತ ನೀಡಿ: ರಾಘವ್‌ ಚಡ್ಡಾ

ಸುದ್ದಿಮೂಲ ವಾರ್ತೆ

ಬೆಂಗಳೂರು,ಏ.19:ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಎಷ್ಟೇ ಹಣ ನೀಡಿದರೂ ಕರ್ನಾಟಕದ ಜನತೆ ಈ ಚುನಾವಣೆಯಲ್ಲಿ ಆಮ್‌ ಆದ್ಮಿ ಪಾರ್ಟಿಗೆ ಮತ ಹಾಕಬೇಕೆಂದು ಪಕ್ಷದ ರಾಜ್ಯಸಭಾ ಸದಸ್ಯರಾದ ರಾಘವ್‌ ಚಡ್ಡಾ ಕರೆ ನೀಡಿದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ರಾಘವ್‌ ಚಡ್ಡಾ, ಕರ್ನಾಟಕದ ಚಿಕ್ಕಮಕ್ಕಳಿಂದ ಹಿರಿಯ ನಾಗರಿಕರ ತನಕ ಎಲ್ಲರಿಗೂ ಗುತ್ತಿಗೆ ಕಾಮಗಾರಿಗಳಲ್ಲಿ ಅಕ್ರಮವಾಗಿರುವುದು ಗಮನಕ್ಕೆ ಬರುತ್ತಿದೆ. ರಾಜ್ಯ ಅಭಿವೃದ್ಧಿಯಾಗಬೇಕು ಹಾಗೂ ಇಲ್ಲಿನ ಜನರು ನೆಮ್ಮದಿಯಿಂದ ಬದುಕಬೇಕಾದರೆ ಈ 40% ಕಮಿಷನ್‌ ಸರ್ಕಾರ ಹೋಗಬೇಕು. ಇಲ್ಲಿ ೦% ಕಮಿಷನ್‌ ಪಡೆಯುವ ಹಾಗೂ 100% ಪ್ರಾಮಾಣಿಕವಾಗಿ ಕೆಲಸ ಮಾಡುವ ಆಮ್‌ ಆದ್ಮಿ ಪಾರ್ಟಿ ಸರ್ಕಾರ ರಚನೆಯಾಗಬೇಕು. ರಾಜ್ಯದ ಅಭಿವೃದ್ಧಿಗಾಗಿ ಡಬಲ್‌ ಎಂಜಿನ್‌ ಸರ್ಕಾರ ಮುಂದುವರಿಯಬೇಕು ಎಂದು ಬಿಜೆಪಿ ನಾಯಕರೆಲ್ಲ ಪದೇಪದೇ ಹೇಳುತ್ತಿದ್ದಾರೆ. ಆದರೆ ಕಳೆದ ಮೂರು ವರ್ಷಗಳ ಡಬಲ್‌ ಎಂಜಿನ್‌ ಸರ್ಕಾರದಲ್ಲಿ ಅಭಿವೃದ್ಧಿ ಡಬಲ್‌ ಆಗುವ ಬದಲು ಕಮಿಷನ್‌ ಪರ್ಸೆಂಟೇಜ್‌ ಡಬಲ್‌ ಆಗಿದೆ ಎಂದು ಹೇಳಿದರು.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಮ್‌ ಆದ್ಮಿ ಪಾರ್ಟಿಯು ಹಲವು ಜನಪರ ಹಾಗೂ ಅಭಿವೃದ್ಧಿಪರ ಗ್ಯಾರಂಟಿಗಳನ್ನು ನೀಡಿದೆ. ಸರ್ಕಾರಿ ಶಾಲೆಗಳ ಅಭಿವೃದ್ಧಿ, ಆರೋಗ್ಯ ಕೇಂದ್ರಗಳ ನಿರ್ಮಾಣ, ಉದ್ಯೋಗ ಸೃಷ್ಟಿ, ಶುದ್ಧ ಹಾಗೂ ಉಚಿತ ಕುಡಿಯುವ ನೀರು, ದಿನವಿಡೀ ವಿದ್ಯುತ್‌ ಪೂರೈಕೆ ಹಾಗೂ 200 ಯೂನಿಟ್‌ ತನಕ ಉಚಿತ ವಿದ್ಯುತ್‌, ರೈತರಿಗೆ ಸಾಲಮನ್ನಾ ಹಾಗೂ ಬೆಂಬಲಬೆಲೆ – ಮುಂತಾದ ಅನೇಕ ಯೋಜನೆಗಳನ್ನು ಆಮ್‌ ಆದ್ಮಿ ಪಾರ್ಟಿ ಮಾತ್ರ ಸೂಕ್ತ ರೀತಿಯಲ್ಲಿ ಜಾರಿಗೆ ತರಬಲ್ಲದು” ಎಂದು ರಾಘವ್‌ ಚಡ್ಡಾ ಹೇಳಿದರು.

ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಜನರಿಗೆ ಹಣ ಹಾಗೂ ವಿವಿಧ ಆಮಿಷಗಳನ್ನು ಒಡ್ಡುತ್ತಿರುವುದನ್ನು ಮಾಧ್ಯಮಗಳಲ್ಲಿ ನೋಡುತ್ತಿದ್ದೇವೆ. ಜನರು ಅವುಗಳನ್ನು ತೆಗೆದುಕೊಳ್ಳಬಾರದು ಎಂದು ನಾನು ಹೇಳುವುದಿಲ್ಲ. ಏಕೆಂದರೆ ಜನರ ತೆರಿಗೆಯನ್ನು ಲೂಟಿ ಮಾಡಿದ ಹಣದಿಂದಲೇ ಈ ಅವೆಲ್ಲವನ್ನು ನೀಡಲಾಗುತ್ತಿದೆ. ಆದರೆ ಜನರು ಯಾರಿಂದ ಏನನ್ನೇ ತೆಗದುಕೊಂಡರೂ, ನಾಡಿನ ಅಭಿವೃದ್ಧಿಗಾಗಿ ಆಮ್‌ ಆದ್ಮಿ ಪಾರ್ಟಿಗೆ ಮತ ನೀಡಬೇಕು. ದೇಶದಲ್ಲಿ ಬಿಜೆಪಿ ಮಾತ್ರ ಇರಬೇಕು ಹಾಗೂ ವಿರೋಧಪಕ್ಷಗಳು ಇರಬಾರದೆಂದು ಬಿಜೆಪಿ ನಿರ್ಧರಿಸಿದೆ. ಆದ್ದರಿಂದಲೇ ಆಮ್‌ ಆದ್ಮಿ ಪಾರ್ಟಿ ನಾಯಕರ ಮೇಲೆ ಸುಳ್ಳು ಆರೋಪ ಹೊರಿಸಿ ಬಂಧಿಸಲಾಗುತ್ತಿದೆ. ದೆಹಲಿಯ ಶಿಕ್ಷಣ ಸಚಿವರಾಗಿದ್ದ ಮನೀಷ್‌ ಸಿಸೋದಿಯಾ ನಿವಾಸದಲ್ಲಿ ಕೇವಲ 10,000 ನಗದು ಸಿಕ್ಕಿದ್ದರೂ ಅವರನ್ನು ವಿಚಾರಣೆ ನೆಪದಲ್ಲಿ ಬಂಧಿಸಲಾಗಿದೆ” ಎಂದು ರಾಘವ್‌ ಚಡ್ಡಾ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಚುನಾವಣಾ ಉಸ್ತುವಾರಿ ದಾಮೋದರನ್‌, ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ, ವಕ್ತಾರರಾದ ಉಷಾ ಮೋಹನ್‌ ಮತ್ತಿತರರು ಭಾಗವಹಿಸಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ