Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಗಿ ಲಕ್ಷಣಯ್ಯ ಹೆಸರು ಚಿರಸ್ಥಾಯಿ: ಎನ್ ಚಲುವರಾಯಸ್ವಾಮಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಜು.15:ಕೃಷಿ ವಿಜ್ಞಾನಿ ರಾಗಿ ಲಕ್ಷ್ಮಣಯ್ಯ ಅವರ ಹೆಸರು ಭೂಮಂಡಲ ಇರುವವರೆಗೆ ಚಿರಸ್ಥಾಯಿಯಾಗಿರಲಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.

ಅವರು ಇಂದು ಕೃಷಿ ವಿಶ್ವವಿದ್ಯಾಲಯ ವಿ.ಸಿ ಫಾರಂ ನಲ್ಲಿ ನಡೆದ 27 ನೇ ವರ್ಷದ ರಾಗಿ ಲಕ್ಷ್ಮಣಯ್ಯ ಸ್ಮಾರಕ ಉಪನ್ಯಾಸ ಮತ್ತು ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು .

ರಾಗಿ ಲಕ್ಷ್ಮಣಯ್ಯ ಅವರು ರಾಗಿಯ ಹೊಸ ತಳಿಗಳನ್ನು ಜಗತ್ತಿಗೆ ಪರಿಚಯಿಸಿದವರು. ಅವರ ಹೆಸರಿನಲ್ಲಿ ಸ್ಮಾರಕ ಸಮಿತಿ ಕಟ್ಟಿಕೊಂಡು ಅವರನ್ನು ಜಗತ್ತಿಗೆ ಪರಿಚಯಿಸಿ 27ನೇ ವರ್ಷದ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ ಎಂದರು.

ಜಗತ್ತು ತನ್ನ ಎಲ್ಲಾ ಸ್ಥಾನಮಾನಗಳನ್ನು ಮೀರಿ ಮುಂದಕ್ಕೆ ದಾಪುಗಾಲು ಇಟ್ಟಿದೆ. ಆದರೆ ಜಗತ್ತಿಗೆ ಅನ್ನವನ್ನು ನೀಡುವ ರೈತರು ಮಾತ್ರ ತಮ್ಮ ಹೆಜ್ಜೆಯನ್ನು ಹಿಂದಕ್ಕೆಇಟ್ಟಿದ್ದಾನೆ. ಇದಕ್ಕೆ ಕಾರಣ ರೈತರಿಗೆ ಅವಕಾಶವಿಲ್ಲದಿರುವುದು. ನಮ್ಮ ಸರ್ಕಾರವು ರೈತರಿಗೆ ವಿಶೇಷ ಸ್ಥಾನಮಾನ ಕಲ್ಪಿಸಿ ರೈತರನ್ನು ಎತ್ತರಕ್ಕೆ ಹೊಯ್ಯಲಾಗುವುದು ಎಂದರು.

ರೈತರು ಬೆಳೆದ ಬೆಳೆಗಳು ಬರಗಾಲ ಅಥವಾ ವಿಪರೀತ ಮಳೆಯಿಂದ ಹಾನಿಗೊಳಗಾಗುತ್ತಿವೆ. ಆದ ಕಾರಣ ರೈತರು ಬೆಳೆದ ಬೆಳಗಳಿಗೆ ವಿಮೆ ಮಾಡಿಸಿ ಹಾನಿಗೊಳಗಾದ ಸಂದರ್ಭದಲ್ಲಿ ಸರ್ಕಾರದ ಸವಲತ್ತುಗಳನ್ನು ಪಡೆಯಿರಿ ಎಂದು ಹೇಳಿದರು.

ರಾಗಿ ಲಕ್ಷ್ಮಣಯ್ಯ ಅವರ ಹೆಸರಿನಲ್ಲಿ ಕೃಷಿ ವಿಶ್ವವಿದ್ಯಾಲಯಗಳಲ್ಲಿ ನವೊದ್ಯಮ ಯೋಜನೆಗಳು ಹಾಗೂ ಸಂಶೋಧನಾ ಕೇಂದ್ರಗಳನ್ನು ತೆರೆಯಲು ಯೋಜಿಸಲಾಗುವುದು ಎಂದರು.

ಕೃಷಿ ವಿವಿಯ‌ ನಿವೃತ್ತ ಸಂಶೋಧನಾ ನಿರ್ದೇಶಕರಾದ ಡಾ. ಪ್ರಭಾಕರ ಶೆಟ್ಟಿ ಟಿ.ಕೆ ರಾಗಿ ಲಕ್ಷ್ಮಣಯ್ಯ ಅವರ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ಬೆಂಗಳೂರಿನ ಕೃಷಿ ವಿವಿಯ ಕುಲಪತಿ ಡಾ.ಎಸ್ ವಿ ಸುರೇಶ್, ರಾಗಿ ಲಕ್ಷ್ಮಣಯ್ಯ ಸ್ಮಾರಕ ಸಮಿತಿಯ ಅಧ್ಯಕ್ಷ ಕೆ.ಬೋರಯ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ