Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಸಭಾ ಸದಸ್ಯ ಸ್ಥಾನಕ್ಕೆ ರಾಹುಲ್ ಗಾಂಧಿ ಅನರ್ಹ

ಸುದ್ದಿಮೂಲ ವಾರ್ತೆ

ನವದೆಹಲಿ,ಮಾ.24: ಲೋಕಸಭಾ ಸದಸ್ಯ ಸ್ಥಾನಕ್ಕೆ ರಾಹುಲ್ ಗಾಂಧಿ ಅನರ್ಹ ಎಂದು ಘೋಷಿಸಲಾಗಿದೆ. ಮೋದಿ ಉಪನಾಮದ ಹಿನ್ನೆಲೆಯಲ್ಲಿ ಗುಜರಾತ್‌ನ ಸೂರತ್‌ ಕೋರ್ಟ್ ನಲ್ಲಿ ದೋಷಿ ಎಂದು ಕರೆಸಿಕೊಂಡ ರಾಹುಲ್ ಗಾಂಧಿಯನ್ನುಲೋಕಸಭಾ ಸ್ವೀಕರ್‌ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹ ಗೊಳಿಸಿ ಆದೇಶಹೊರಡಿಸಿದ್ದಾರೆ.


ಪ್ರಜಾ ಪ್ರತಿನಿಧಿ ಕಾಯ್ದೆಯನ್ನು ಉಲ್ಲಂಘನೆಯಡಿ ರಾಹುಲ್ ಗಾಂಧಿಯನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹ ಗೊಳಿಸಲಾಗಿದೆ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿ 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದ್ದಾರೆ.


ಕರ್ನಾಟಕದ ಕೋಲಾರದಲ್ಲಿ 2019 ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ‘ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮವೇ ಏಕಿರುತ್ತದೆ’ ಎಂದು ರಾಹುಲ್‌ ವ್ಯಂಗ್ಯವಾಡಿದ್ದರು ಈ ಹಿನ್ನೆಲೆ ಗುಜರಾತ್‌ನ ಕೋರ್ಟ್ ನಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು.


ಈ ಸಂಬಂಧ ಗುಜರಾತ್‌ನ ಮಾಜಿ ಸಚಿವ ಪರ‍್ಣೇಶ್ ಮೋದಿ ಅವರು ನೀಡಿದ ದೂರಿನ ವಿಚಾರಣೆಯನ್ನು ಗುರುವಾರ ಕೈಗೆತ್ತಿಕೊಂಡ ಸೂರತ್ ನ್ಯಾಯಾಲಯ ರಾಹುಲ್‌ ಗಾಂಧಿ ಅವರನ್ನು ದೋಷಿ ಎಂದು ತಿರ್ಪೂ ನೀಡಿದೆ.


ಭಾರತೀಯ ದಂಡ ಸಂಹಿತೆ ಸೆಕ್ಷನ್ 499 ಮತ್ತು 500 (ಮಾನನಷ್ಟ ವ್ಯವಹರಿಸುವುದು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರಾಹುಲ್ ಗಾಂಧಿಯ ಅವರು ಕೊನೆಯದಾಗಿ 2021ರ ಅಕ್ಟೋಬರ್‌ನಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಸೂರತ್ ನ್ಯಾಯಾಲಯಕ್ಕೆ ಹಾಜರಾಗಿದ್ದರು


‌ನಾಲ್ಕು ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎರಡೂ ಕಡೆಯವರ ವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿ ಎಚ್‌ಎಚ್ ವರ್ಮಾ, ರಾಹುಲ್ ಗಾಂಧಿಗೆ 2 ವರ್ಷ ಗಳ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದ್ದಾರೆ. ಬಳಿಕ ಜಾಮೀನು ಮಂಜೂರು ಮಾಡಿ, 30 ದಿನಗಳ ಕಾಲ ಶಿಕ್ಷೆಯನ್ನು ಅಮಾನತುಗೊಳಿಸಿ ಆದೇಶ ನೀಡಿದರು

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ