Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಹುಲ್ ಗಾಂಧಿ ಜೋಡೊ ಯಾತ್ರೆ ರಾಜ್ಯದಲ್ಲಿ ಅಧಿಕಾರಕ್ಕೆ ಕಾರಣ

ಸುದ್ದಿಮೂಲವಾರ್ತೆ

ಕೊಪ್ಪಳ ಸೆ 07: ಕಳೆದ ಒಂದು ವರ್ಷದ ಹಿಂದೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಭಾರತ ಜೋಡೊ ಯಾತ್ರೆ ಮಾಡಿದ ರಾಹುಲ್ ಗಾಂಧಿಯವರಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಆಧಿಕಾರಕ್ಕೆ ಬರಲು ಕಾರಣವಾಗಿದೆ ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜಶೇಖರ ಹಿಟ್ನಾಳ ಹೇಳಿದರು.

ಭಾರತ ಜೋಡೊ ಯಾತ್ರೆಯ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೊಪ್ಪಳದಲ್ಲಿ ಜಿಲ್ಲಾ ಕಾಂಗೈನಿಂದ ಪಾದಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದರು. ದೇಶದ ಇತಿಹಾಸದಲ್ಲಿ 3700 ಕಿಮೀ ದೂರ ಪಾದಯಾತ್ರೆ ಮಾಡಿದ್ದು. ಈಗ ದೇಶದಲ್ಲಿ ಇಂಡಿಯಾ ಹೆಸರಿನಲ್ಲಿ ಸಂಘಟನೆಯಲ್ಲಿ ಪಕ್ಷಗಳು ಒಗ್ಗೂಡುತ್ತಿವೆ. ದೇಶವನ್ನು ಭಾಷೆ, ಜಾತಿ ಕೋಮು ಭಾವನೆಯಿಂದ ಜನರ ಮನಸ್ಸನ್ನು ಹಾಳು ಮಾಡುತ್ತಿರುವ ಮಧ್ಯೆ ರಾಹುಲ್ ಗಾಂಧಿ ದೇಶವನ್ನು ಒಗ್ಗೂಡುವ ಕೆಲಸ ಮಾಡಿದ್ದಾರೆ ಎಂದರು.

ಗಡಿಯಾರ ಕಂಬದಿಂದ ಅಶೋಕ ವೃತ್ತದವರೆಗೂ ಮೆರವಣಿಗೆ ನಡೆಸಿ ರಾಹುಲ್ ಗಾಂಧಿ ಪರ ಘೋಷಣೆ ಹಾಕಿದರು.

ಈ ಸಂದರ್ಭದಲ್ಲಿ ಗೂಳಪ್ಪ ಹಲಗೇರಿ, ಶಾಂತಣ್ಣ ಮುದಗಲ್, ನಿಂಗರಾಜ ಕಾಳೆ, ಮಲ್ಲು ಪೂಜಾರ, ಗಂಗಮ್ಮ, ಮಂಜುಳಾ, ಶ್ರೀನಿವಾಸ ಪಂಡಿತ್, ಮೈನುದ್ದಿನ್ ಮುಲ್ಲಾ, ಅಜೀಮ್ ಅತ್ತಾರ್, ರೇಶ್ಮಾ‌ ಖಾಜಾವಲಿ, ಸವಿತಾ ಗೋರಂಟ್ಲಿ, ಅಂಬಿಕಾ ನಾಗರಾಳ, ರಿಯಾಜ್ ಮಂಗಳಾಪೂರ, ಅಶೋಕ ಗೋರಂಟ್ಲಿ, ಶಿಲ್ಪಾ ಭಾಗ್ಯನಗರ, ವಿರುಪಾಕ್ಷಪ್ಪ ಮೋರನಾಳ ಇತರರು.

ಗೈರು ಆದ ನಾಯಕರು: ಭಾರತ ಜೊಡೊ ಯಾತ್ರೆ ವರ್ಷಾಚರಣೆಯ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲೆಯ ಜನಪ್ರತಿನಿಧಿಗಳು ಗೈರು ಆಗಿದ್ದರು. ಸಚಿವ ಶಿವರಾಜ ತಂಗಡಗಿ, ಶಾಸಕರಾದ ರಾಘವೇಂದ್ರ ಹಿಟ್ನಾಳ, ಬಸವರಾಜ ರಾಯರಡ್ಡಿ, ಮಾಜಿ ಶಾಸಕರು ಗೈರು ಆಗಿದ್ದರು. ಕಾಟಾಚಾರಕ್ಕೆ ಕಾರ್ಯಕ್ರಮ ಆಯೋಜಿಸಿದಂತೆ ಇತ್ತು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ