Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ರಾಹುಲ್ ಗಾಂಧಿ: ಸಿದ್ದರಾಮಯ್ಯ

ಬೆಳಗಾವಿ, ಆ.11: ಬೆಳಗಾವಿಯಲ್ಲಿ ಈ ತಿಂಗಳ 27ರಂದು ನಡೆಯುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾರ್ಯಕ್ರಮ ನಡೆಯಲಿರುವ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ಥಳ ಪರಿಶೀಲನೆ ನಡೆಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಈ ಜಾಗ ಗುರುತಿಸಲಾಗಿದೆ. ರಾಹುಲ್ ಗಾಂಧಿ ಅವರು ಆಗಮಿಸುತ್ತಿದ್ದಾರೆ. ಸೋನಿಯಾ ಗಾಂಧಿ ಅವರಿಗೂ ಆಹ್ವಾನ ನೀಡಿದ್ದೇವೆ. ಒಂದು ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ಒಂದೊಂದು ವಿಭಾಗದಲ್ಲಿ ಒಂದೊಂದು ಗ್ಯಾರಂಟಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಶಕ್ತಿ ಯೋಜನೆ, ಕಲಬುರ್ಗಿಯಲ್ಲಿ ಗೃಹ ಜ್ಯೋತಿ, ಮೈಸೂರಿನಲ್ಲಿ ಅನ್ನಭಾಗ್ಯ ಯೋಜನೆ, ಈಗ ಬೆಳಗಾವಿಯಲ್ಲಿ ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು. ಯುವನಿಧಿ ಯೋಜನೆಯನ್ನು ಡಿಸೆಂಬರ್ ಇಲ್ಲವೇ ಜನವರಿಯಲ್ಲಿ‌ ಪ್ರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಾಗಲು ಅರ್ಹರಿರುವ 1 ಕೋಟಿ 33 ಲಕ್ಷ ಕುಟುಂಬಗಳ ಪೈಕಿ ಈಗಾಗಲೇ 1 ಕೋಟಿ‌ 6 ಲಕ್ಷ ನೊಂದಣಿಯಾಗಿದೆ. ಬಡವರು, ಮಹಿಳೆಯರಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಸಿಎಂ ಹೇಳಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಮಾಡಬೇಕಾದ ಸಿದ್ಧತೆಗಳ ಕುರಿತು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಾಸಕ ಆಸೀಫ್ ಸೇಠ್ಮತ್ತಿತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ