Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಮೂರು ದಿನ ಮಳೆಯಾಗುವ ಮುನ್ಸೂಚನೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಸೆ.29: ವಾತಾವರಣದಲ್ಲಿ ಸಾಕಷ್ಟು ಬದಲಾವಣೆಗಳಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಅರಬ್ಬೀಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಸೇರಿದಂತೆ ವಾತಾವರಣದಲ್ಲಿ ಹಲವು ರೀತಿಯ ಬದಲಾವಣೆಗಳಾಗಿದ್ದು, ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಮಳೆಯಾಗಲಿದೆ. ಕಳೆದ ಎಂಟತ್ತು ದಿನಗಳಿಂದ ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇನ್ನೂ ಮೂರ್ನಾಲ್ಕು ದಿನಗಳ ಕಾಲ ಚದುರಿದಂತೆ ಮಳೆ ಸುರಿಯಲಿದೆ. ನೈಋತ್ಯ ಮುಂಗಾರು ಮರಳುವಿಕೆ ಪ್ರಕ್ರಿಯೆ ಆರಂಭವಾಗಿದೆ. ಅಲ್ಲದೆ, ಈಶಾನ್ಯ ಹಿಂಗಾರು ಆರಂಭದ ಪ್ರಕ್ರಿಯೆಗಳು ಶುರುವಾಗಿವೆ. ಈ ಪರ್ವ ಕಾಲದಲ್ಲಿ ಮಳೆಯಾಗುವುದು ಸಹಜ ಎಂದು ಹವಾಮಾನ ತಜ್ಞರು ಸ್ಪಷ್ಟಪಡಿಸಿದರು.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಕಳೆದ ಒಂದು ವಾರದಲ್ಲಿ ರಾಜ್ಯದಲ್ಲಿ ಶೇ. 5ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇ. 20ರಷ್ಟು ಉತ್ತರ ಒಳನಾಡಿನಲ್ಲಿ ಶೇ. 6ರಷ್ಟು, ಮಲೆನಾಡಿನಲ್ಲಿ ಶೇ. 34 ಹಾಗೂ ಕರಾವಳಿಯಲ್ಲಿ ಶೇ. 52ರಷ್ಟು ವಾಡಿಕೆಗಳಿಗಿಂತ ಕಡಿಮೆ ಮಳೆ ಕಳೆದ ಒಂದು ವಾರದಲ್ಲಿ ಬಿದಿದ್ದೆ.

ಸೆ. 1ರಿಂದ ನಿನ್ನೆಯವರೆಗೆ ರಾಜ್ಯದಲ್ಲಿ ಶೇ. 10ರಷ್ಟು ವಾಡಿಕೆಗಿಂತ ಕಡಿಮೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇ. 17, ಉತ್ತರ ಒಳನಾಡಿನಲ್ಲಿ ಶೇ. 18, ಮಲೆನಾಡಿನಲ್ಲಿ ಶೇ. 16 ಹಾಗೂ ಕರಾವಳಿ ಶೇ. 23ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾದ ವರದಿಯಾಗಿದೆ. ಜೂನ್ 1ರಿಂದ ನಿನ್ನೆಯವರೆಗೆ ರಾಜ್ಯದಲ್ಲಿ 631 ಮಿ.ಮೀಟರ್‍ ನಷ್ಟು ಮಳೆಯಾಗಿದ್ದು, ವಾಡಿಕೆಗಿಂತ ಶೇ. 25ರಷ್ಟು ಮಳೆಕೊರತೆ ಉಂಟಾಗಿದೆ.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ