Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರಪತಿ ಮುರ್ಮು, ಶಿಕ್ಷಣ ತಜ್ಞರಾದ ರಾಮಚಂದ್ರಯ್ಯ, ವೆಂಕಟಲಕ್ಷ್ಮೀರಾಜು ಅವರಿಗೆ ಮುಕ್ತ ವಿವಿ ಡಾಕ್ಟರೇಟ್‌ ಜುಲೈ 2 ರಂದು ಘಟಿಕೋತ್ಸವದಲ್ಲಿ ಪ್ರದಾನ

ಸುದ್ದಿಮೂಲ ವಾರ್ತೆ

ಮೈಸೂರು, ಜೂ. 30 : ರಾಷ್ಟ್ರಪತಿ ದ್ರೌಪದಿ ಮುರ್ಮು, ಶಿಕ್ಷಣ ತಜ್ಞರಾದ ಎನ್.ರಾಮಚಂದ್ರಯ್ಯ ಮತ್ತು ವೆಂಕಟ ಲಕ್ಷ್ಮಿನರಸಿಂಹರಾಜು ಅವರಿಗೆ ಪ್ರಸಕ್ತ ಸಾಲಿನ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ (ಡಿ.ಲಿಟ್) ನೀಡಲಾಗುತ್ತಿದೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕುಲಪತಿ ಪ್ರೊ. ಶರಣಪ್ಪ ಹಲಸೆ ಅವರು, ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಿರುವುದನ್ನು ರಾಷ್ಟ್ರಪತಿಗಳಿಗೆ ತಿಳಿಸಲಾಗಿದೆ. ಜುಲೈ 2ರಂದು ವಾರ್ಷಿಕ ಘಟಿಕೋತ್ಸವ ಮೈಸೂರಿನಲ್ಲಿ ನಡೆಯಲಿದ್ದು, ಅವರನ್ನು ಆಹ್ವಾನಿಸಲಾಗಿದೆ. ಆ ಕಾರ್ಯಕ್ರಮಕ್ಕೆ ರಾಷ್ಟ್ರಪತಿಯವರು ಬಾರದಿದ್ದರೆ, ಜುಲೈ 3ರಂದು ಕರ್ನಾಟಕ ಪ್ರವಾಸ ಕೈಗೊಳ್ಳಲಿರುವ ವೇಳೆ ಬೆಂಗಳೂರಿನ ರಾಜಭವನದಲ್ಲಿ ಪ್ರದಾನ ಮಾಡಲಾಗುವುದು ಎಂದರು.

8,722 ವಿದ್ಯಾರ್ಥಿಗಳಿಗೆ ಪದವಿ

ಘಟಿಕೋತ್ಸವದಲ್ಲಿ 1 ಪಿಎಚ್‌ಡಿ, 44 ಚಿನ್ನದ ಪದಕ, 27 ನಗದು ಬಹುಮಾನ ನೀಡಲಾಗುವುದು. ಒಟ್ಟು 8,722 ಅಭ್ಯರ್ಥಿಗಳು ವಿವಿಧ ಪದವಿ ಪಡೆಯಲು ಅರ್ಹರಾಗಿದ್ದಾರೆ. ಇವರಲ್ಲಿ 5,241 ಮಹಿಳೆಯರು ಹಾಗೂ 3,481 ಪುರುಷರು ಎಂದು ಮಾಹಿತಿ ನೀಡಿದರು

ರಾಷ್ಟ್ರಪತಿ ದ್ರೌಪದಿ ಮುರ್ಮರಿಗೆ ಮೈಸೂರು ಗೌರವ ಡಾಕ್ಟರೇಟ್ ಪ್ರದಾನ ಮಾಡಲು ನಮ್ಮ ವಿವಿ ಹೆಮ್ಮೆ ಪಡುತ್ತದೆ . ಈ ಬಾರಿ ಒಬ್ಬ ಮಹಿಳೆ ರಾಜ್ಯ ಶಾಸ್ತ್ರದಲ್ಲಿ ಪಿ‌ಎಚ್ ಡಿ ಪದವಿ ಪಡೆದಿದ್ದಾರೆ ಎಂದು ಹೇಳಿದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ