Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಸೆಂಬರ್ 9 ರಂದು ರಾಷ್ಟ್ರೀಯ ಲೋಕ ಅದಾಲತ್: ನ್ಯಾ. ವಿಜಯಕುಮಾರ್ ಕನ್ನೂರು

ಯಲಬುರ್ಗಾ,ನ.25:ಡಿಸೆಂಬರ್ 9 ರಂದು ಯಲಬುರ್ಗಾ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ದಾವೆದಾರರು ಹಾಗೂ ಕಕ್ಷಿದಾರರು ಈ ಲೋಕ ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ವಿಜಯಕುಮಾರ್ ಕನ್ನೂರು ಕರೆ ನೀಡಿದರು.

ಇಲ್ಲಿನ ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವಾ ಪ್ರಾಧಿಕಾರ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಶನಿವಾರ ಮಾತನಾಡಿದರು. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ಕಡಿಮೆ ಖರ್ಚಿನಲ್ಲಿ ಇಲ್ಲವೇ ಖರ್ಚು ಇಲ್ಲದೇ ಶೀಘ್ರ ತೀರ್ಮಾನಕ್ಕಾಗಿ ಲೋಕ ಅದಾಲತ್ ಒಂದು ವಿಶೇಷ ಅವಕಾಶವಾಗಿದೆ. ನ್ಯಾಯಾಲಯಗಳಲ್ಲಿ ಉಭಯ ಪಕ್ಷಗಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ. ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸ ಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು. ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು ಎಂದು ಅವರು ಹೇಳಿದರು.

ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರ ಪ್ರಕರಣಗಳಾದ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಮತ್ತು ಇತರ ಸಿವಿಲ್ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು,

ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಮೋಟಾರು ಅಪಘಾತ ಪರಿಹಾರ ನ್ಯಾಯಾಧಿಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳ ಬಗ್ಗೆ ಈ ಲೋಕ ಅದಾಲತ್‌ನಲ್ಲಿ ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.ಪ್

ಪತ್ರಿಕಾಗೋಷ್ಠಿಯಲ್ಲಿ ಕಿರಿಯ ಸಿವಿಲ್ ನ್ಯಾಯಾಧೀಶರಾದ ಆಯಿಷಾಬೀ ಮಜೀದ್,

ವಕೀಲರ ಸಂಘದ ತಾಲೂಕು ಅಧ್ಯಕ್ಷ ಪ್ರಕಾಶ ಬೇಲೇರಿ, ಉಪಾಧ್ಯಕ್ಷ ಹೆಚ್.ಹೆಚ್.ಹಿರೇಮನಿ ಹಾಗೂ ನ್ಯಾಯವಾದಿಗಳು ಇದ್ದರು.

ದೊಡ್ಡಬಸಪ್ಪ ಹಕಾರಿ ಸುದ್ದಿ ಮೂಲ ನ್ಯೂಸ್ ಯಲಬುರ್ಗಾ
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ