Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಸೆಂಬರ್ 9ರಂದು ರಾಷ್ಟ್ರೀಯ ಲೋಕ ಅದಾಲತ್

ಸುದ್ದಿಮೂಲ ವಾರ್ತೆ

ತುಮಕೂರು, ಅ.11 : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಡಿ.9 ರಂದು ತುಮಕೂರು ಜಿಲ್ಲೆಯಾದ್ಯಂತ ಇರುವ ಎಲ್ಲಾ ನ್ಯಾಯಾಲಯಗಳಲ್ಲಿ 4ನೇ ಮತ್ತು ಈ ವರ್ಷದ ಕಡೆಯ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಬಿ.ಗೀತಾ ತಿಳಿಸಿದರು.

ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,

ಲೋಕ ಅದಾಲತ್‌ನ ಮೂಲ ಉದ್ದೇಶ ಪಕ್ಷಗಾರರು ರಾಜೀ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೆ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದ್ದು, ಪಕ್ಷಗಾರರ ಮದ್ಯದಲ್ಲಿರುವ ವೈಮನಸ್ಸು ಕಡಿಮೆ ಮಾಡಿ ಸೌಹಾರ್ಧತೆ ಹೆಚ್ಚಾಗುತ್ತದೆ. ಇದರಿಂದ ನ್ಯಾಯಾಲಯಗಳಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ ಹೆಚ್ಚು ಅವಶ್ಯಕತೆ, ಕಾನೂನಿನ ಸಂಕೀರ್ಣತೆ ಇರುವಂತಹ ಪ್ರಕರಣಗಳಿಗೆ ನ್ಯಾಯಾಧೀಶರು ಹೆಚ್ಚು ಒತ್ತು ಕೊಟ್ಟು ಚಾಲ್ತಿಯಲ್ಲಿರುವ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ ಎಂದರು.

1 ವರ್ಷದ ಅವಧಿಯಲ್ಲಿ ದೇಶದ ಎಲ್ಲಾ ನ್ಯಾಯಾಲಯಗಳಲ್ಲಿ 4 ರಾಷ್ಟ್ರೀಯ ಜನತಾ ನ್ಯಾಯಾಲಯ ಕಾರ್ಯಕ್ರಮ ಆಯೋಜನೆಗೊಳ್ಳುತ್ತಿದ್ದು, ಡಿ.21 ರಂದು ನಡೆಯುವ ಜನತಾ ನ್ಯಾಯಾಲಯ ಈ ವರ್ಷದ ಕೊನೆಯ ಹಾಗೂ 4ನೇ ಕಾರ್ಯಕ್ರಮವಾಗಿರುತ್ತದೆ. ಉಭಯ ಪಕ್ಷಗಾರರು ಲೋಕ ಅದಾಲತ್‌ನ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ