Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಡುಪಿ ಕಾಲೇಜು ವಿಡಿಯೋ ಪ್ರಕರಣ ಎನ್‍ಐಎ ತನಿಖೆಗೆ ವಹಿಸಿ: ರವಿಕುಮಾರ್


ಸುದ್ದಿಮೂಲ ವಾರ್ತೆ





ಬೆಂಗಳೂರು, ಜು.28:  ರಾಜ್ಯದಲ್ಲಿ ಗಾಂಭೀರ್ಯತೆ ಇಲ್ಲದ ಕಾಂಗ್ರೆಸ್ ಸರಕಾರ ಕಾರ್ಯ ನಿರ್ವಹಿಸುತ್ತಿದೆ. ರಾಜ್ಯ ಸರಕಾರದ ಕಾರ್ಯವೈಖರಿ ಖಂಡನೀಯ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಉಡುಪಿಯ ಅರೆವೈದ್ಯಕೀಯ ಕಾಲೇಜಿನ ಶೌಚಾಲಯದೊಳಗೆ ವಿಡಿಯೋ ಚಿತ್ರೀಕರಣ ವಿಚಾರ ರಾಜ್ಯಾದ್ಯಂತ, ದೇಶಾದ್ಯಂತ ಸದ್ದು ಮಾಡುತ್ತಿದೆ. ಆದರೆ, ವಿಡಿಯೋ ಮಾಡಿದ ವಿದ್ಯಾರ್ಥಿನಿಯರಾದ ಶಬನಾಜ್, ಅಲಿಫಾ, ಆಲಿಯಾರನ್ನು ಇನ್ನೂ ಬಂಧಿಸಿಲ್ಲ ಎಂದು ಟೀಕಿಸಿದರು.

ಇದು ತಮಾಷೆಯ ವಿಚಾರವಲ್ಲ. ರಾಜ್ಯದ ಮಹಿಳೆಯರ ಸುಕರ್ಷತೆಯ ದೃಷ್ಟಿಯಿಂದ ಈ ಘಟನೆಯನ್ನು ಎನ್‍ಐಎಗೆ ಕೊಡಿ ಎಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು.

ಬೆಡ್‍ರೂಂ, ಶೌಚಾಲಯ, ಬಾತ್ ರೂಂನಲ್ಲಿ ಯಾರೂ ವಿಡಿಯೋ ಮಾಡುವುದಿಲ್ಲ. ಉಡುಪಿ ಘಟನೆಯ ಆರೋಪಿಗಳನ್ನು ಕರ್ನಾಟಕ ಸರಕಾರ ಯಾಕೆ ಬಂಧಿಸಿಲ್ಲ? ಇದರಲ್ಲೂ ತುಷ್ಟೀಕರಣ ನೀತಿ ಅನುಸರಿಸಲಾಗುತ್ತಿದೆಯೇ ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು.

ತಮಾಷೆಗಾಗಿ ವಿಡಿಯೋ ಮಾಡಿ ಡಿಲೀಟ್ ಮಾಡಿದ್ದಾರೆ. ಇದು ಮಕ್ಕಳಾಟ ಎಂದು ರಾಜ್ಯದ ಗೃಹ ಸಚಿವರು ಹೇಳಿದ್ದಾರೆ. ಇದು ಮಕ್ಕಳಾಟವೇ? ಹೆದರಿಸುವುದು ಮಕ್ಕಳಾಟವೇ? ಸರಕಾರಕ್ಕೆ ಗಾಂಭೀರ್ಯತೆಯೇ ಇಲ್ಲ ಎಂದು ಆಕ್ಷೇಪಿಸಿದರು. ರಾಜ್ಯದ ಅಭಿವೃದ್ಧಿ, ಮಹಿಳಾ ಸುರಕ್ಷತೆ ಬಗ್ಗೆ ರಾಜ್ಯ ಸರಕಾರಕ್ಕೆ ಗಾಂಭೀರ್ಯತೆ ಇಲ್ಲ ಎಂದು ಟೀಕಿಸಿದರು.

ಸರಕಾರ ತಡಮಾಡದೆ ವಿದ್ಯಾರ್ಥಿನಿಯರು, ಜಾಲದಲ್ಲಿರುವ ಯುವಕರನ್ನು ಬಂಧಿಸಬೇಕು ಎಂದು ವಿನಂತಿಸಿದ ಅವರು, ಸರಕಾರ ನಮ್ಮ ಸಾಮಾಜಿಕ ಜಾಲತಾಣದ ಸಕ್ರಿಯ ಕಾರ್ಯಕರ್ತರನ್ನು ಕೇಸು ಹಾಕುವುದಾಗಿ ಹೆದರಿಸುತ್ತಿದೆ. ಬಂಧಿಸುವುದಾಗಿ ತಿಳಿಸುತ್ತಿದೆ. ಇದೇ ಮಾದರಿಯಲ್ಲಿ ಪೋಸ್ಟ್ ಮಾಡುವ ಕಾಂಗ್ರೆಸ್ಸಿನ ಕಾರ್ಯಕರ್ತರನ್ನೂ ಪ್ರಕರಣ ದಾಖಲಿಸಿ ಬಂಧಿಸಿ ಎಂದು ಆಗ್ರಹಿಸಿದರು. ಕಾನೂನು, ಸಂವಿಧಾನ, ಪೊಲೀಸ್ ಠಾಣೆ ಎಲ್ಲರಿಗೂ ಸಮಾನ ತಾನೇ? ಎಂದು ಕೇಳಿದರು.

ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಮುಖ್ಯ ವಕ್ತಾರ ಎಂ.ಜಿ.ಮಹೇಶ್ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.





Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ