Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳನ್ನ ಕರೆದೊಯ್ಯಲು ನಿರಾಕರಣೆ; ಬಸ್ ತಡೆದು ಪ್ರತಿಭಟನೆ

ಸುದ್ದಿಮೂಲ ವಾರ್ತೆ

ಕುಷ್ಟಗಿ,ಸೆ.14:ವಿದ್ಯಾರ್ಥಿಗಳನ್ನು ಸರಿಯಾದ ಸಮಯಕ್ಕೆ ಕರೆದೊಯ್ಯಲು ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ಕುಷ್ಟಗಿ ಘಟಕದ ಬಸ್ಸುಗಳು ನಿರಾಕರಿಸುತ್ತಿರುವ ಹಿನ್ನಲೆಯಲ್ಲಿ ತಾಲೂಕಿನ ನಿಡಶೇಸಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ ಪ್ರಸಂಗ ಗುರುವಾರ ನಡೆದಿದೆ.

ನಿಡಶೇಸಿ ಮಾರ್ಗವಾಗಿ ತಳುವಗೇರಾ, ಚಳಗೇರಾ, ಹನುಮಸಾಗರ ಕಡೆಗೆ ತೆರಳುವ ಬೆಳಗಿನ ಬಸ್ಸುಗಳು ನಿಡಶೇಸಿ ಗ್ರಾಮದ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿಲ್ಲ. ಇದರಿಂದ ಶಾಲೆಗೆ ತೆರಳಲು ಆಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಕುಷ್ಟಗಿ - ಹನುಮಸಾಗರ ಮಾರ್ಗದ ಬಸ್ ತಡೆದು ರಸ್ತೆ ಬಂದ್'ಗೊಳಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮದಿಂದ ತಳುವಗೇರಾ ಗ್ರಾಮದ ಸರ್ಕಾರಿ ಆದರ್ಶ ಶಾಲೆಗೆ ತೆರಳುವ ವಿದ್ಯಾರ್ಥಿಗಳು ಬೆಳಿಗ್ಗೆ ಹತ್ತು ಗಂಟೆ ವರೆಗೂ ಕಾದರೂ ಬಸ್ ಸಿಗುತ್ತಿಲ್ಲ. ಶಾಲೆಯ ತರಗತಿಗಳು 10 ಗಂಟೆಗೆ ಆರಂಭವಾಗುತ್ತವೆ. ಈ ಮಾರ್ಗವಾಗಿ ಸಂಚರಿಸುವ ಬಸ್ಸುಗಳು ತುಂಬಿ ತುಳುಕುತಿದ್ದು, ಚಾಲಕ, ನಿರ್ವಾಹಕರು ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳದೆ ಹಿಂದಿನ ಬಸ್ಸಿಗೆ ಬರುವಂತೆ ಹೇಳುತ್ತಾರೆ. ಇದರಿಂದಾಗಿ ಶಾಲೆಗೆ ನಿಗದಿತ ಸಮಯಕ್ಕೆ ಹೋಗಲು ಆಗದೇ ಬೆಳಗಿನ ತರಗತಿಗಳಿಂದ ವಂಚಿತರಾಗುತ್ತಿದ್ದೇವೆ. ಬೆಳಿಗ್ಗೆ 9.30ಕ್ಕೆ ಬಸ್ಸಿನ ಅನುಕೂಲ ಮಾಡಿಕೊಡಿ ಎಂದು ಸಾಕಷ್ಟು ಬಾರಿ ಸಾರಿಗೆ ಸಂಸ್ಥೆಯ ಕುಷ್ಟಗಿ ಘಟಕದ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಏನು ಪ್ರಯೋಜನವಾಗುತ್ತಿಲ್ಲ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ದೂರಿದರು.

ಬಳಿಕ ಪ್ರತಿಭಟನೆ ವಿಷಯ ತಿಳಿದು ಸ್ಥಳಕ್ಕೆ ದಾವಿಸಿದ ಸಾರಿಗೆ ಸಂಸ್ಥೆಯ ನಿಲ್ದಾಣ ನಿಯಂತ್ರಣಾಧಿಕಾರಿ ಪ್ರಕಾಶ ಜಿಗಳೂರು ಅವರು ವಿದ್ಯಾರ್ಥಿಗಳಿಗೆ ಶಾಲೆಗೆ ತೆರಳಲು ಯಾವುದೇ ರೀತಿಯ ತೊಂದರೆಯಾಗದಂತೆ ಬಸ್ಸಿನಲ್ಲಿ ಸುರಕ್ಷಿತವಾಗಿ ಕರೆದೊಯ್ಯಲು ಚಾಲಕ ಹಾಗೂ ನಿರ್ವಾಹಕರಿಗೆ ಸೂಚಿಸುವುದಾಗಿ ಭರವಸೆ ನೀಡಿದರು. ಬಳಿಕ ಪ್ರತಿಭಟನೆ ಹಿಂಪಡೆದುಕೊಂಡರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ