Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಾಲು ಉತ್ಪಾದಕರ ಸಹಕಾರ ಸಂಘಗಳ ಪ್ರಾದೇಶಿಕ ಸಭೆ

ಸುದ್ದಿಮೂಲ ವಾರ್ತೆ

ಹೊಸಕೋಟೆ, ಆ.13 : ಬೆಂಗಳೂರು ಸಹಕಾರ ಹಾಲು ಒಕ್ಕೂಟದ ವತಿಯಿಂದ ತಾಲ್ಲೂಕಿನಲ್ಲಿ ಪ್ರಾದೇಶಿಕ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಬೆಂಗಳೂರು ಡೈರಿ ಅಧ್ಯಕ್ಷರಾದ ರಾಜ್‌ಕುಮಾರ್‌ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿದ ರಾಜ್‌ಕುಮಾರ್‌, ಹೊಸಕೋಟೆ ತಾಲ್ಲೂಕಿನ ನಿರ್ದೇಶಕರಾದ ಸಿ. ಮಂಜುನಾಥ್‌ 1995 ರಿಂದ ನಿರಂತರವಾಗಿ ಬೆಂಗಳೂರು ಡೈರಿಗೆ ನಿರ್ದೇಶಕರಾಗಿ ಆಯ್ಕೆಯಾಗುತ್ತಿದ್ದಾರೆ.

ದೇಶದಲ್ಲಿಯೇ ಬೆಂಗಳೂರು ಹಾಲು ಒಕ್ಕೂಟ ಎರಡನೇ ಸ್ಥಾನಕ್ಕೇರಲು ಸಿ.ಮಂಜುನಾಥ್‌ರವರ ಪಾತ್ರ ದೊಡ್ಡದು ಎಂದು ತಿಳಿಸಿದರು.

ನಿರ್ದೇಶಕ ಸಿ. ಮಂಜುನಾಥ್‌ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಈ ಮೂರು ತಾಲ್ಲೂಕುಗಳಲ್ಲಿ ಹಾಲಿನ ಗುಣಮಟ್ಟ ಮತ್ತು ಉತ್ಪಾದನೆಯಲ್ಲಿ ಪೈಪೋಟಿ ನಡೆಯುತ್ತಿತ್ತು. ಆದರೆ, ಈಗ ಆ ರೀತಿ ಇಲ್ಲ ರಾಮನಗರ, ಕನಕಪುರ ಭಾಗಗಳಲ್ಲಿ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಹಾಲು ಉತ್ಪಾಧಕರ ಸಹಕಾರ ಸಂಘಗಳಲ್ಲಿ ಹೆಚ್ಚು ವರ್ಷಗಳು ಸೇವೆ ಸಲ್ಲಿಸಿದಂತಹ ಕಾರ್ಯನಿರ್ವಾಹಕರಿಗೆ, ಉತ್ತಮ ಗುಣ ಮಟ್ಟವನ್ನು ಕಾಯ್ದುಕೊಂಡ ಸಂಘಗಳಿಗೆ, ಹೆಚ್ಚು ಹಾಲು ಉತ್ಪಾದಿಸುತ್ತಿರುವ ರೈತರಿಗೆ ಬಹುಮಾನಗಳನ್ನು ನೀಡಿಗೌರವಿಸಲಾಯಿತು. ಪ್ರಶಸ್ತಿಗಳ ವಿತರಣೆಯನ್ನು ಬೆಂಗಳೂರು ಸಹಕಾರ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಎಸ್.ಟಿ. ಸುರೇಶ್‌ರವರು ಮಾಡಿದರು.

ಈ ಸಂದರ್ಭದಲ್ಲಿ ಪ್ರಭಾರ ಪ್ರಧಾನ ವ್ಯವಸ್ಥಾಪಕ ಡಾ. ಎಂ. ಗಂಗಯ್ಯ, ಖರೀದಿ ವಿಭಾಗದ ವ್ಯವಸ್ಥಾಪಕ ಡಾ. ಎಂ. ಶಿವರಾಂ, ಹೊಸಕೋಟೆ ಟೌನ್ ಕೋ ಆಪರೇಟಿವ್ ಬ್ಯಾಂಕ್ ಜೀನತ್ ಉನ್ನಿಸಾ, ಚಂದ್ರಪ್ಪ, ನೌರರ ಸಂಘದ ಅಧ್ಯಕ್ಷರಾದ ಕಾಮಯ್ಯ, ತಾಲ್ಲೂಕಿನ ಎಲ್ಲಾ ಡೈರಿಗಳ ಕಾರ್ಯನಿರ್ವಹಕರು, ಅಧ್ಯಕ್ಷರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ