Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯೋತ್ಸವ ಪ್ರಶಸ್ತಿಯಲ್ಲಿ ಪ್ರಾದೇಶಿಕ, ಸಾಮಾಜಿಕ ನ್ಯಾಯ ಪಾಲಿಸಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.26: ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಪ್ರಾದೇಶಿಕ ನ್ಯಾಯ ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕನ್ನಡದ ಪರವಾಗಿ ಕಾರ್ಯನಿರ್ವಹಿಸಿರುವ ಸಂಘ ಸಂಸ್ಥೆಗಳಿಗೆ ಒಟ್ಟಾರೆ 10 ಪ್ರಶಸ್ತಿಗಳನ್ನು ನೀಡಬೇಕು ಎಂದು ಆಯ್ಕೆ ಸಮಿತಿ ಸದಸ್ಯರು ಅಭಿಪ್ರಾಯ ಪಟ್ಟರು.

ಈ ಬಾರಿ 68 ರಾಜ್ಯೋತ್ಸವ ಪ್ರಶಸ್ತಿಗಳನ್ನು ನೀಡಬೇಕಿದ್ದು, ಕರ್ನಾಟಕ ಸಂಭ್ರಮದ ಪ್ರಯುಕ್ತ ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿಗಳನ್ನು ನೀಡಲು ಸಭೆಯಲ್ಲಿ ತೀರ್ಮಾನ ಮಾಡಲಾಯಿತು.

ಅರ್ಜಿ ಕೊಡುವವವರು ಹೆಚ್ಚಿದ್ದ ಕಾರಣ, ಅದಕ್ಕೆ ಕಡಿವಾಣ ಹಾಕಲು ಏಕೀಕರಣ ಆಗಿ ಎಷ್ಟು ವರ್ಷಗಳಾಯಿತೋ, ಅಷ್ಟು ಪ್ರಶಸ್ತಿ ಗಳನ್ನು ನೀಡಲು ಹಿಂದೆ ನಮ್ಮ ಸರ್ಕಾರವೇ ತೀರ್ಮಾನ ಕೈಗೊಂಡಿತ್ತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಸಚಿವರಾದ ಡಾ: ಜಿ.ಪರಮೇಶ್ವರ್, ಡಾ: ಹೆಚ್.ಸಿ.ಮಹದೇವಪ್ಪ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ನಿರ್ದೇಶಕಿ ಧರಣಿದೇವಿ ಮಾಲಗತ್ತಿ, ಆಯ್ಕೆ ಸಮಿತಿ ಸದಸ್ಯರಾದ ಪ್ರೊ.ಜಾಣಗೆರೆ ವೆಂಕಟರಾಮಯ್ಯ, ಡಾ. ಎಚ್‌.ಎಲ್‌.ಪುಷ್ಪ, ಡಾ:ವೀರಣ್ಣ ದಂಡೆ, ಡಾ: ಮೂಡ್ನಾಕೂಡು ಚಿನ್ನಸ್ವಾಮಿ, ಅಲ್ಲಮಪ್ರಭು ಬೆಟ್ಟದೂರ, ಪಿಂಡಿಪಾಪನಹಳ್ಳಿ ವೆಂಕಟಪ್ಪ, ಟಾಕಪ್ಪ ಕಣ್ಣೂರು, ಪಿಚ್ಚಳ್ಳಿ ಶ್ರೀನಿವಾಸ್‌, ಡಾ| ವಿಠಲ್‌ ಐ.ಬೆಣಗಿ- ಕೃಷಿ, ಡಾ: ಸಣ್ಣರಾಮು, ವೆಂಕಟರಾಮಯ್ಯ, ಡಾ: ಎಂ.ಎಸ್‌.ಮೂರ್ತಿ, ಡಾ: ಗೀತಾ ಶಿವಮೊಗ್ಗ , ಡಾ:ಜಯದೇವಿ ಜಂಗಮ ಶೆಟ್ಟಿ , ಐರೋಡಿ ಗೋವಿಂದಪ್ಪ, ಸಾಧುಕೋಕಿಲ, ಸುಕನ್ಯಾ ಪ್ರಭಾಕರ್‌, ಫ‌ಯಾಜ್‌ ಖಾನ್‌-, ಹೃಷಿಕೇಶ್‌ ಬಹದ್ದೂರ್‌ ದೇಸಾಯಿ, ನರಸಿಂಹಲು ವಡವಾಟಿ, ಡಿ.ಎನ್‌.ನರಸಿಂಹರಾಜು, ಡಾ: ಪುರುಷೋತ್ತಮ ಬಿಳಿಮಲೆ, ಚನ್ನಬಸವಣ್ಣ, ಶೈಲೇಶ್‌ ಚಂದ್ರಗುಪ್ತ, ಜೆ.ಲೋಕೇಶ್‌ ಉಪಸ್ಥಿತರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ