Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಡಾ.ಮಹದೇವಪಪ್ಪನವರ ʻಸಂವಿಧಾನದ ನೆರಳಲ್ಲಿʻ ಕೃತಿ ಬಿಡುಗಡೆ

ಸುದ್ದಿಮೂಲ ವಾರ್ತೆ

ಮೈಸೂರು, ಜು. 23 : ಡಾ. ಬಿ.ಆರ್‌. ಅಂಬೇಡ್ಕರ್‌ ಬರೆದಿರುವ ಸಂವಿಧಾನ ಎಂಬುದು ದೊಡ್ಡ ವೃಕ್ಷ. ಇದರಡಿ ಮಲಗಿ ನಿದ್ದೆ ಮಾಡಬಾರದು. ಮಾಡಿದರೆ ಅಪಾಯ ತಪ್ಪಿದ್ದಲ್ಲ ಎಂದು ಸಂಗೀತ ನಿರ್ದೇಶಕ ಡಾ. ಹಂಸಲೇಖ ಅಭಿಪ್ರಾಯಪಟ್ಟಿದ್ದಾರೆ.

ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ರಚಿಸಿರುವ ಸಾಮಾಜಿಕ ಮತ್ತು ರಾಜಕೀಯ ಕುರಿತ ಬರಹಗಳನ್ನು ಒಳಗೊಂಡ ‘ಸಂವಿಧಾನದ ನೆರಳಲ್ಲಿ’ ಪುಸ್ತಕವನ್ನು ನಗರದಲ್ಲಿ ಬಿಡುಗಡೆ ಮಾಡಿ ಅವರು ಮಾತನಾಡಿದರು.

ನಾವು ಸಂವಿಧಾನದ ನೆರಳಲ್ಲಿ ಇದ್ದೇವಾ ಅಥವಾ ಸಂವಿಧಾನದ ಬಲದಲ್ಲಿ ಇದ್ದೇವಾ ಎಂಬುದನ್ನು ಅರಿಯಬೇಕು. ನೆರಳಿನಲ್ಲಿ ಮಲಗಿ ಕಣ್ಣುಬಿಟ್ಟು ಕನಸು ಕಾಣಬೇಕು. ನಂತರ ಸಾಕಾರಗೊಳಿಸಬೇಕು. ಹೆಚ್ಚಿನ ಶ್ರಮ ವಹಿಸಿ ಜಗತ್ತಿನೊಂದಿಗೆ ಜೀವಂತವಾಗಿ ವ್ಯವಹರಿಸಬೇಕು ಎಂದು ಕಿವಿಮಾತು ಹೇಳಿದರು.

ಒಬ್ಬ ರಾಜಕಾರಣಿ ಅಧಿಕಾರದಿಂದ ಕೆಳಗಿಳಿದಾಗ ಹಾಗೂ ಮತ್ತೆ ಅಧಿಕಾರಕ್ಕೇರಿದಾಗ ತಮಗಾದ ಅನುಭವಗಳನ್ನು ಬರೆದಿಡುವುದು ಬಹುಮುಖ್ಯವಾದ ವಿಚಾರ. ಈ ರೀತಿಯಲ್ಲಿ ಕೆಂಗಲ್ ಹನುಮಂತಯ್ಯ ಮತ್ತು ಡಿ.ದೇವರಾಜ ಅರಸು ಅವರು ತಮ್ಮ ಜೀವಿತ ಕಾಲದ ಅನುಭವಗಳನ್ನು ಹಾಗೂ ಮೌಲ್ಯಗಳನ್ನು ಬರೆಯಲಿಲ್ಲ. ಇದರಿಂದ ಸಮಾಜ ಏನನ್ನೊ ಕಳೆದುಕೊಂಡಿದೆ. ಸಚಿವ ಮಹದೇವಪ್ಪ ಅವರು ತಾವು ಕಂಡದ್ದನ್ನು ಬರೆದಿರುವುದು ಸಂತೋಷದ ವಿಚಾರ ಎಂದು ಶ್ಲಾಘಿಸಿದರು.

ಈ ಪುಸ್ತಕದಲ್ಲಿ ಎಲ್ಲೂ ತೊಡಕುಗಳಿಲ್ಲ, ಕಂಡದ್ದನ್ನು ಮತ್ತು ಅನುಭವಿಸಿದ್ದನ್ನು ದಾಖಲಿಸಿದ್ದಾರೆ. ಒಬ್ಬ ರಾಜಕಾರಣಿ ನೇರಮಾತಿನ ಬಡಿಗೆ ಕೈಗೆತ್ತಿಗೊಂಡು ಸಮಾಜಕ್ಕೆ ಹೇಳುವುದು ಬಹಳ ಪ್ರಮುಖವಾಗಿದೆ.ಎಂದು ಹೇಳಿದರು.

ಕೆಲವು ದಿನಗಳ ಹಿಂದೆ ನಾನು ಊಟದ ವಿಚಾರದಲ್ಲಿ ಒಂದು ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ಕೆಲವರು ವಿರೋಧಿಸಿದ್ದರು. ಆ ಸಂದರ್ಭ ಕುರಿತು ನನ್ನನ್ನು ಸಮರ್ಥಿಸಿಕೊಂಡಿದ್ದು ನನ್ನ ಸಹೋದ್ಯೋಗಿಗಳಲ್ಲ, ನನ್ನ ಬೆನ್ನಿಗೆ ನಿಂತು ಮಹದೇಶ್ವರ ಬೆಟ್ಟದಿಂದ ಬೀದರ್‌ವರೆಗೂ ಒಂದು ಅಲೆ ಎಬ್ಬಿಸಿದ್ದು ಭೀಮ ಪರಿವಾರದವರು. ಸಂವಿಧಾನದ ನೆರಳು ಹಾಗೂ ಭೀಮ ಪರಿವಾರ ಎರಡೂ ನನ್ನನ್ನು ಕಾಪಾಡಿದೆ ಎಂದು ಸ್ಮರಿಸಿದರು.

ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಮಾತನಾಡಿ, ನನ್ನ ಭಾವನೆ, ನಿಲುವು ಮತ್ತು ಅಭಿಪ್ರಾಯಗಳನ್ನು ಅಕ್ಷರ ರೂಪಕ್ಕಿಳಿಸಿದ ಪುಸ್ತಕ ಇದಾಗಿದೆ. ಸಾಹಿತಿಗಳು, ಪ್ರಗತಿಪರ ಚಿಂತಕರು, ರಾಜಕೀಯ ಮುಖಂಡರು, ಯುವ ಸಮುದಾಯ ಹಾಗೂ ಮಹಿಳೆಯರು, ಸಾರ್ವಜನಿಕರು ಈ ಸಮಾರಂಭಕ್ಕೆ ಆಗಮಿಸಿ ಯಶಸ್ವಿಗೊಳಿಸಿದ್ದಾರೆ. ನನಗೆ ವೈಯಕ್ತಿಕವಾಗಿ ಸಂತೋಷವಾಗಿದೆ. ಅದರಂತೆ ಈ ಪುಸ್ತಕವನ್ನು ಎಲ್ಲರೂ ಓದಿ ವಿಮರ್ಶೆ ಮಾಡಬೇಕು ಎಂದು ತಿಳಿಸಿದರು.

ಪುಸ್ತಕ ಕುರಿತು ಮಾತನಾಡಿದ ವಿಮರ್ಶಕ ಡಾ.ಕೆ.ವೈ.ನಾರಾಯಣಸ್ವಾಮಿ ಅವರು, ಸಚಿವರು ತಾವು ಕಂಡಂತ ರಾಜಕೀಯ ಹಾಗೂ ಸಾಮಾಜಿಕ ಸಂಗತಿಗಳನ್ನು ತುಂಬಾ ಪರಿಣಾಮಕಾರಿಯಾಗಿ ಪುಸ್ತಕದಲ್ಲಿ ದಾಖಲಿಸಿದ್ದಾರೆ ಎಂದರು.

ಸಂಸ್ಕೃತಿ ಚಿಂತಕ ಡಾ.ಬಂಜಗೆರೆ ಜಯಪ್ರಕಾಶ್ ಅವರು ಮಾತನಾಡಿ, ರಾಜಕಾರಣಿಗೆ ಬದ್ಧತೆ ಹಾಗೂ ಪ್ರಬುದ್ಧತೆ ಮುಖ್ಯ. ಆ ಸಾಲಿನಲ್ಲಿನ ಅಪರೂಪದ ರಾಜಕಾರಣಿ ಎಚ್.ಸಿ.ಮಹದೇವಪ್ಪ ಅವರು ಕೃತಿಯಲ್ಲಿ ವ್ಯಕ್ತಿಗತವಾಗಿ ಯಾವುದೇ ನಿಂದನಾತ್ಮಕ ಪದ ಬಳಸದೆ, ತತ್ವಕ್ಕೆ ಕೊಡಬೇಕಾದ ಸೂಕ್ತ ಬೆಲೆ ಕೊಟ್ಟಿದ್ದಾರೆ. ಅತ್ಯಂತ ಸೂಕ್ಷ್ಮ ವಿಚಾರಗಳನ್ನು ಪುಸ್ತಕದಲ್ಲಿ ದಾಖಲಿಸಿದ್ದಾರೆ‌ ಎಂದು ವಿಶ್ಲೇಷಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ