Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಗರದೊಳಗಿನ ಕಸ ವಿಲೇವಾರಿ ಘಟಕಗಳ ಸ್ಥಳಾಂತರ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.10: ಜನ ಸಾಮಾನ್ಯರ ತೊಂದರೆ ನಿವಾರಣೆಗೆ ಯಶವಂತಪುರ ವಿಧಾನಸಭೆ ಕ್ಷೇತ್ರ 5, ಬ್ಯಾಟರಾಯನಪುರದ 2, ದಾಸರಹಳ್ಳಿ, ಆನೇಕಲ್, ಮಹದೇವಪುರ ಕ್ಷೇತ್ರದಲ್ಲಿನ ಕಸ ವಿಲೇವಾರಿ ಘಟಕಗಳನ್ನು ಬೆಂಗಳೂರಿನ ಹೊರಭಾಗದಲ್ಲಿ ಜನರಹಿತ ಬೆಟ್ಟ ಗುಡ್ಡ ಪ್ರದೇಶಕ್ಕೆ ಸ್ಥಳಾಂತರಿಸಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಜಲಸಂಪನ್ಮೂಲ, ಅರಣ್ಯ ಇಲಾಖೆ ಮತ್ತು ಬೆಂಗಳೂರು ನಗರಾಭಿವೃದ್ಧಿ ಇಲಾಖೆಗಳ ಸಮನ್ವಯ ಸಭೆ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಅವರು ಮಂಗಳವಾರ ಮಾತನಾಡಿದ ಅವರು, ಕಂದಾಯ ಹಾಗೂ ಅರಣ್ಯ ಇಲಾಖೆಗಳ ಜತೆ ಚರ್ಚಿಸಿ, ಪರ್ಯಾಯ ಜಾಗಗಳನ್ನು ಗುರುತಿಸಲಾಗುತ್ತಿದೆ ಎಂದೂ ಅವರು ತಿಳಿಸಿದರು.

ಬೆಂಗಳೂರು ಅಪಾರವಾಗಿ ಬೆಳದ ಪರಿಣಾಮ ಕಸವಿಲೇವಾರಿ ಘಟಕಗಳು ನಗರದ ಹೃದಯ ಭಾಗಕ್ಕೆ ಬಂದಿವೆ. ಈ ಘಟಕಗಳ ಸುತ್ತಮುತ್ತ ನಾಲ್ಕೈದು ಕಿ.ಮೀ. ವರೆಗೆ ನಾಗರಿಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಬ್ಯಾಟರಾಯಣಪುರ ಶಾಸಕ, ಸಚಿವ ಕೃಷ್ಣಬೈರೇಗೌಡ, ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಮತ್ತಿತರರು ಅವರು ಕಸ ವಿಲೇವಾರಿ ಘಟಕ ಸ್ಥಳಾಂತರದ ವಿಚಾರವಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ನಾನು ಕೂಡ ಖುದ್ದು ಸ್ಥಳ ಪರಿಶೀಲನೆ ನಡೆಸಿದ್ದೆ. ಮುಂದಿನ ದಿನಗಳಲ್ಲಿ ಜನರಿಗೆ ಕಸದ ವಾಸನೆ ಬರಬಾರದು ಎಂಬ ಉದ್ದೇಶದಿಂದ ನಗರದ ಹೊರವಲಯಕ್ಕೆ ಈ ಘಟಕಗಳ ಸ್ಥಳಾಂತರಕ್ಕೆ ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

ಇದಕ್ಕಾಗಿ ನಗರದ ನಾಲ್ಕೂ ಮೂಲೆಗಳಲ್ಲಿ ಅರಣ್ಯ ಪ್ರದೇಶದ ಗಡಿ ಭಾಗಗಳಲ್ಲಿ 100 ಎಕರೆ ಜಾಗ ನೀಡಿ ಎಂದು ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಗೆ ಮನವಿ ಮಾಡಿದ್ದು, ಸರ್ವೇ ಮಾಡಿದ ಬಳಿಕ ಜಾಗ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ನಾವು ಅರಣ್ಯ ಇಲಾಖೆಗೆ ಪರ್ಯಾಯ ಜಾಗ ನೀಡುತ್ತೇವೆ. ಅಥವಾ ಖರೀದಿ ಮಾಡುತ್ತೇವೆ ಎಂದು ತಿಳಿಸಿದರು.

ತಿಪ್ಪಗೊಂಡನಹಳ್ಳಿ ಬಫರ್ ಜೋನ್ ಪುನರ್ ನಿಗದಿ:

ತಿಪ್ಪಗೊಂಡನಹಳ್ಳಿ ನೀರು ಸ್ವಚ್ಛತೆ ಕಾಪಾಡಲು ನಾವು ಆ ಭಾಗದ ಶಾಸಕರ ಜೊತೆ ಚರ್ಚೆ ಮಾಡಿದ್ದೇವೆ. ಮುಂದಿನ ಒಂದೂವರೆ ವರ್ಷಗಳಲ್ಲಿ ನೀರನ್ನು ತರಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಈ ನೀರಿಗೆ ಯಾವುದೇ ಕೊಳಚೆ ನೀರು ಸೇರದಂತೆ ನೋಡಿಕೊಳ್ಳಬೇಕು. ಇಲ್ಲಿನ ಬಫರ್ ಜೋನ್ ಅಂತರ ಕಡಿಮೆ ವಿಚಾರವಾಗಿ 2017ರಲ್ಲಿ ಹಾಗೂ 2021ರಲ್ಲಿ ಸರ್ಕಾರ ಆದೇಶವಾಗಿದ್ದರೂ ನಗರಾಭಿವೃದ್ಧಿ ಇಲಾಖೆ ಮೂಲಕ ಜಾರಿ ಆಗದೆ ಯಾರಿಗೂ ಪ್ಲಾನ್ ಸ್ಯಾಂಕ್ಷನ್ ಮಾಡುತ್ತಿಲ್ಲ. ಇದರಿಂದಾಗಿ ಕಾನೂನು ಬಾಹೀರವಾಗಿ ಮನೆ, ಕಟ್ಟಡಗಳ ನಿರ್ಮಾಣವಾಗಿದೆ. ಈ ಭಾಗದಲ್ಲಿ ಕಟ್ಟುನಿಟ್ಟಾಗಿ ಕಾನೂನು ಜಾರಿ ಮೂಲಕ ನಿರ್ಮಾಣಕ್ಕೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

ನೆಲಮಂಗಲ, ಡಾಬಸ್ ಪೇಟೆ, ಶಿವಗಂಗೆ ಸೇರಿದಂತೆ ಅನೇಕ ಕಡೆಗಳಲ್ಲಿ ಪ್ಲಾನ್ ಗಳಿಗೆ ಅನುಮತಿ ನೀಡುತ್ತಿಲ್ಲ ಎಂದು ಜನ ಗಲಾಟೆ ಮಾಡುತ್ತಿದ್ದಾರೆ. ಕಳೆದ ಸರ್ಕಾರ ತಂದಿರುವ ಕಾನೂನನ್ನೇ ಜಾರಿ ಮಾಡಬೇಕು ಎಂದು ಸಚಿವರಿಗೆ ಮನವಿ ಮಾಡಿದ್ದು, ನಗರಾಭಿವೃದ್ಧಿ ಇಲಾಖೆ, ಅರಣ್ಯ ಇಲಾಖೆ ಹಾಗೂ ಕಾನೂನು ತಂಡ ಒಟ್ಟಾಗಿ ಕೂತು ಚರ್ಚೆ ಮಾಡಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲಾಗುವುದು” ಎಂದರು.

ತಿಪ್ಪಗೊಂಡನಹಳ್ಳಿಯಲ್ಲಿ 300 ಎಕರೆ ಹಾಗೂ ಹೆಸರಘಟ್ಟದಲ್ಲಿ 100 ಎಕರೆ ಜಮೀನು ಇದ್ದು, ಇಲ್ಲಿ ಬಿಡಬ್ಲ್ಯೂಎಸ್ಎಸ್ ಬಿಗೆ ಸ್ವಂತ ಸೌರ ವಿದ್ಯುತ್ ಉತ್ಪಾದನಾ ಘಟಕ ನಿರ್ಮಾಣಕ್ಕೆ ಚಿಂತನೆ ನಡೆಸಿದ್ದೇವೆ. ಇವರು ಈಗ ಯುನಿಟ್ ಗೆ 6 ರೂ.ನಂತೆ ಸಾವಿರ ಕೋಟಿಯಷ್ಟು ಬಿಲ್ ಕಟ್ಟುತ್ತಿದ್ದಾರೆ. ಸೌರ ವಿದ್ಯುತ್ ಘಟಕದಿಂದ ಯುನಿಟ್ ಗೆ 4 ರೂ.ನಂತೆ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳಬಹುದು. ಇದರಿಂದ ನಮ್ಮ ಜಮೀನನ್ನು ಒತ್ತುವರಿಯಿಂದ ಕಾಪಾಡಿಕೊಳ್ಳಬಹುದು, ಸೌರ ವಿದ್ಯುತ್ ಕೂಡ ಉತ್ಪಾದಿಸಬಹುದು. ಈ ವಿಷಯವನ್ನು ಮಾಲೀನ್ಯ ನಿಯಂತ್ರಣ ಮಂಡಳಿಗೆ ತಿಳಿಸಿದ್ದು, ಪರಿಶೀಲನೆ ಮಾಡಲಿದೆ” ಎಂದು ತಿಳಿಸಿದರು.

ಪರ್ಯಾಯ ಜಾಗ:

ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಈ ಭಾಗದ ಜನರಿಗೆ ಪರ್ಯಾಯ ಜಾಗಗಳನ್ನು ಗುರುತಿಸಲಾಗಿದೆ. ಚಾಮರಾಜನಗರ, ಮಂಡ್ಯ, ರಾಮನಗರದಲ್ಲಿ ಜಾಗ ಗುರುತಿಸಲಾಗಿದ್ದು, ಎಲ್ಲಾ ತಯಾರಿ ಮಾಡಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.

ಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ, ಸಂಸದ ಡಿ.ಕೆ. ಸುರೇಶ್, ಶಾಸಕರಾದ ಎಸ್.ಟಿ. ಸೋಮಶೇಖರ್, ಎನ್. ಶ್ರೀನಿವಾಸಯ್ಯ, ವಿಧಾನ ಪರಿಷತ್ ಸದಸ್ಯ ಎಸ್. ರವಿ ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ