Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ, ಡಿಸಿಎಂ ಭೇಟಿ ಮಾಡಿ ಕುತೂಹಲ ಕೆರಳಿಸಿದ ರೇಣುಕಾಚಾರ್ಯ

ಸುದ್ದಿಮೂಲ ವಾರ್ತೆ

ಬೆಂಗಳೂರು, ಆ.25: ಆಪರೇಷನ್ ಹಸ್ತ ಸದ್ದು ಮಾಡುತ್ತಿರುವ ಬೆನ್ನಲ್ಲೇ ಬಿಜೆಪಿ ನಾಯಕ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡುವ ಮೂಲಕ ಕುತೂಹಲ ಕೆರಳಿಸಿದ್ದಾರೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ- ನ್ಯಾಮತಿ ಅವಳಿ ತಾಲೂಕನ್ನು ಬರಪೀಡಿತ ಎಂದು ಘೋಷಿಸುವಂತೆ ಉಭಯ ನಾಯಕರ ಬಳಿ ಮನವಿ ಮಾಡಿದ್ದಾರೆ ಎಂದು ಗೊತ್ತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸರಕಾರಿ ನಿವಾಸದಲ್ಲಿ ಭೇಟಿಯಾಗಿ ಸುಮಾರು 20 ನಿಮಿಷಗಳ ಕಾಲ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಇನ್ನು ಸದಾಶಿವನಗರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನೂ ಸಹ ಭೇಟಿ ಮಾಡಿದ ರೇಣುಕಾಚಾರ್ಯ 15 ರಿಂದ 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.

ಬಿಜೆಪಿ ಬಿಡುವ ಬಗ್ಗೆ ಈ ವರೆಗೂ ಯಾವುದೇ ರೀತಿಯ ನಿರ್ಧಾರ ಮಾಡಿಲ್ಲವಾದರೂ, ವಿಧಾನಸಭಾ ಚುನಾವಣೆ ನಂತರ ಪಕ್ಷದೊಳಗೆ ನಡೆಯುತ್ತಿರುವ ವಿದ್ಯಮಾನದಿಂದ ಬೇಸರಗೊಂಡಿದ್ದಾರೆ ಎನ್ನಲಾಗಿದೆ.

ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿಯ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಒಂದು ವೇಳೆ ರೇಣುಕಾಚಾರ್ಯ ಕಾಂಗ್ರೆಸ್ ಸೇರುವ ನಿರ್ಧಾರ ಮಾಡಿದರೆ ಲೋಕಸಭಾ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ಸಹ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಒಂದು ವೇಳೆ ಬಿಜೆಪಿ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ್ ಅವರಿಗೆ ಪುನಃ ಟಿಕೆಟ್ ನೀಡಿದರೆ, ರೇಣುಕಾಚಾರ್ಯ ಹಾಗೂ ಅವರ ಬೆಂಬಲಿಗರು ಕಾಂಗ್ರೆಸ್ ಕಡೆ ಮುಖ ಮಾಡುವುದು ಖಚಿತ ಎನ್ನಲಾಗುತ್ತಿದೆ. ಸಿದ್ದರಾಮಯ್ಯ ಹಾಗೂ ಡಿ. ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ದಾವಣಗೆರೆ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುವ ಇಂಗಿತವನ್ನು ಹೊರಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಭೇಟಿಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ರೇಣುಕಾಚಾರ್ಯ ಅವರು, ಇದೊಂದು ರಾಜಕೀಯರಹಿತ ಭೇಟಿಯಾಗಿದೆ. ಹೊನ್ನಾಳಿ- ನ್ಯಾಮತಿ ಅವಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡುವಂತೆ ಮುಖ್ಯಮಂತ್ರಿ ,ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಮನವಿ ಪತ್ರ ನೀಡಲಾಗಿದೆ ಎಂದರು.

ನಾನು ಬಿಜೆಪಿಯಲ್ಲಿ ಇದ್ದರೂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರುಗಳ ಜೊತೆಗೆ ಆತ್ಮೀಯ ಸಂಬಂಧ ಇಟ್ಟುಕೊಂಡಿದ್ದೇನೆ. ಈ ಹಿಂದೆ ನಾನು ಹೊನ್ನಾಳಿಯಲ್ಲಿ ರಾಜ್ಯ ಮಟ್ಟದ ಕೃಷಿ ಸಮ್ಮೇಳನ ನಡೆಸಿದಾಗ ಇಬ್ಬರನ್ನೂ ಭೇಟಿಯಾಗಿ ಆಹ್ವಾನ ಕೊಟ್ಟಿದ್ದೆ. ಇದರಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ನಮ್ಮ ತಾಲ್ಲೂಕಿನಲ್ಲಿ ವಾಡಿಕೆಗಿಂತ ಈ ಬಾರಿ ಕಡಿಮೆ ಪ್ರಮಾಣದ ಮಳೆಯಾದ ಪರಿಣಾಮ ರೈತರ ಬೆಳೆಗಳು ಸಂಪೂರ್ಣವಾಗಿ ಹಾಳಾಗಿ ಹೋಗಿವೆ. ಹೀಗಾಗಿ ಬರಪೀಡಿತ ತಾಲ್ಲೂಕು ಎಂದು ಘೋಷಿಸಿ ವಿಶೇಷ ಪ್ಯಾಕೇಜ್ ನೀಡಲು ಮನವಿ ಮಾಡಿರುವುದಾಗಿ ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ