Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಣೆಕಟ್ಟುಗಳಿಗೆ ಭೇಟಿ ನೀಡಲು ಪ್ರಾಧಿಕಾರಕ್ಕೆ ಮನವಿ

ಸುದ್ದಿಮೂಲ ವಾರ್ತೆ

ನವದೆಹಲಿ, ಆ.31: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದವರು ಕರ್ನಾಟಕದ ಕಾವೇರಿ ನದಿಯ ಆಣೆಕಟ್ಟುಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತವಾಂಶ ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದೇವೆ. ಆಗಲಾದರೂ ನಮ್ಮ ಪರಿಸ್ಥಿತಿ ಅವರಿಗೆ ಅರ್ಥವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ನವದೆಹಲಿಯ ಕರ್ನಾಟಕ ಭವನ-1 ರಲ್ಲಿ ಗುರುವಾರ ಕಾನೂನು ತಜ್ಞರು ಹಾಗೂ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

 

ಕಾವೇರಿ ನೀರಿನ ವಿಚಾರವಾಗಿ ನಮ್ಮ ಅಧಿಕಾರಿಗಳ ಹೋರಾಟದ ಪರಿಣಾಮವಾಗಿ ಕಡಿಮೆ ನೀರು ಹರಿಸುವ ಆದೇಶ ಸಿಕ್ಕಿದೆ. ಆದರೂ ಕರ್ನಾಟಕದಲ್ಲಿ ಮಳೆಯ ಕೊರತೆಯಿಂದಾಗಿ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವುದು ಸಾವಾಲಿನ ವಿಚಾರ. ಹೀಗಾಗಿ ಕಾವೇರಿ ನೀರಿನ ವಿಚಾರವಾಗಿ ರಾಜ್ಯದ ಪರ ವಾದ ಮಾಡುತ್ತಿರುವ ಅಡ್ವಕೇಟ್ ಜೆನರಲ್ ಹಾಗೂ ಅವರ ಕಾನೂನು ತಜ್ಞರ ತಂಡ, ಅಧಿಕಾರಿಗಳು, ಕರ್ನಾಟಕ ಪ್ರತಿನಿಧಿಗಳು ಸೇರಿ ಚರ್ಚೆ ಮಾಡುತ್ತಿದ್ದೇವೆ.

ತಮಿಳುನಾಡಿನವರು 24 ಸಾವಿರ ಕ್ಯೂಸೆಕ್ ನೀರು ಕೇಳಿದ್ದರು. ನಮ್ಮ ಅಧಿಕಾರಿಗಳು ವಾಸ್ತವಾಂಶಗಳ ದಾಖಲೆ ಮಂಡಿಸಿದ ಪರಿಣಾಮ ತಮಿಳುನಾಡಿಗೆ ಹರಿಸುವ ನೀರಿನ ಪ್ರಮಾಣ 5 ಸಾವಿರ ಕ್ಯೂಸೆಕ್‌ಗೆ ಇಳಿಸಲಾಗಿದೆ. ರಾಜ್ಯದಲ್ಲಿ ಮಳೆಯ ಕೊರತೆ, ಆಣೆಕಟ್ಟುಗಳಿಗೆ ಒಳಹರಿವಿನ ಪ್ರಮಾಣ ಕುಸಿದಿರುವ ಕಾರಣ, ಈ ಪ್ರಮಾಣದ ನೀರನ್ನು ಬಿಡುವುದು ಕಷ್ಟಕರವಾಗಿದೆ. ನಾವು ತಮಿಳುನಾಡಿನ ಹಕ್ಕಿನ ನೀರಿನ ಬಳಕೆ ಬಗ್ಗೆ ನಾವು ಪ್ರಶ್ನಿಸಲು ಸಾಧ್ಯವಿಲ್ಲ. ನಾವು ಎಷ್ಟು ನೀರು ಬಿಟ್ಟಿದ್ದೇವೆ ಎಂಬುದಕ್ಕೆ ಬಿಳಿಗುಂಡ್ಲುವಿನಲ್ಲಿ ಲೆಕ್ಕ ಇದೆ.

ಸರಿಯಾದ ಪ್ರಮಾಣದಲ್ಲಿ ಮಳೆಯಾಗಿ, ನೀರು ಇದಿದ್ದರೆ ನೀರು ಹರಿಸಲು ಯಾವುದೇ ಅಭ್ಯಂತರ ಇರುತ್ತಿರಲಿಲ್ಲ. ಈ ಹಿಂದೆ ಕೈಗೊಂಡ ನಿರ್ಧಾರಗಳನ್ನು ಗೌರವಿಸಿ ನೀರು ಹರಿಸಿದ್ದೇವೆ. ಪ್ರಾಧಿಕಾರದ ಅಧಿಕಾರಿಗಳು ನಮ್ಮ ಆಣೆಕಟ್ಟುಗಳಿಗೆ ಭೇಟಿ ನೀಡಿ ವಾಸ್ತವಾಂಶವನ್ನು ಕಣ್ಣಾರೆ ನೋಡಿ ಪರಿಶೀಲನೆ ನಡೆಸಲಿ ಎಂದು ಆಹ್ವಾನ ನೀಡಿದ್ದೇವೆ. ಆಗ ಕರ್ನಾಟಕದಲ್ಲಿ ನೀರಿನ ಸಮಸ್ಯೆಯ ತೀವ್ರತೆ ಅರಿವಾಗಲಿದೆ. ಪ್ರಾಧಿಕಾರದವರು ನಮ್ಮ ಮನವಿ ಪುರಸ್ಕರಿಸಿ, ನಮ್ಮ ರಾಜ್ಯ ಹಾಗೂ ರೈತರ ಹಿತ ಕಾಯುತ್ತಾರೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೇವೆ.

ಕರ್ನಾಟಕ ರೈತರ ಹಿತ ಕಾಯುವುದು ನಮ್ಮ ಮೊದಲ ಆದ್ಯತೆ. ನಾಳೆ ಸುಪ್ರೀಂ ಕೋರ್ಟ್ ವಿಚಾರಣೆ ನಡೆಯಲಿದ್ದು, ಈ ವಿಚಾರಣೆ ಮುಂದೂಕ್ಕೆ ಹೋಗುವ ಸಾಧ್ಯತೆ ಇದೆ. ಹೀಗಾಗಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ಬಗ್ಗೆ ನಮ್ಮ ಕಾನೂನು ಪ್ರತಿನಿಧಿಗಳ ಜತೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ.

ಈ ಎಲ್ಲಾ ಯೋಜನೆಗಳಿಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ. ಮೇಕೆದಾಟು ಆಣೆಕಟ್ಟು ಇದ್ದಿದ್ದರೆ ಸಂಕಷ್ಟದ ಸೂತ್ರದ ಮೂಲಕ ತಮಿಳುನಾಡಿಗೆ ನೀರು ಬಿಡಬಹುದಾಗಿತ್ತು. ಮೇಕೆದಾಟು ಯೋಜನೆ ತಮಿಳುನಾಡಿನ ಹಿತವನ್ನು ಕಾಯಲಿದೆ. ಹೀಗಾಗಿ ನಾವು ಈ ವಿಚಾರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸುತ್ತೇವೆ ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ