Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವರ ರಾಜೀನಾಮೆಗೆ ಪಟ್ಟು

ಸುದ್ದಿಮೂಲ ವಾರ್ತೆ

ಬೆಂಗಳೂರು, ಸೆ. 13 : ದಲಿತ ಕುಟುಂಬದ ಭೂಮಿಗೆ ಸಂಬಂಧಪಟ್ಟಂತೆ ದರ್ಪ, ದೌರ್ಜನ್ಯ ಎಸಗಿರುವ ಸಚಿವ ಡಿ.ಸುಧಾಕರ್ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್‌ ಕಾರ್ಯಕರ್ತರು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ದಲಿತರ ಮೇಲೆ ದೌರ್ಜನ್ಯ ಎಸಗಿರುವ ಸಚಿವರ ವಿರುದ್ಧ ಬುಧವಾರ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಜೆಡಿಎಸ್ ನಗರ ಘಟಕದ ಅಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್.ಎಂ.ರಮೇಶ್ ಗೌಡ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯಕರ್ತರು ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿದರಲ್ಲದೆ, ಅವರ ಪ್ರತಿಕೃತಿಯನ್ನು ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಸಚಿವರ ದೌರ್ಜನ್ಯ ಅಮಾನುಷ

ದಲಿತ ಕುಟುಂಬ ಹಾಗೂ ದಲಿತ ಮಹಿಳೆಯ ಮೇಲೆ ಸಚಿವರು, ಮತ್ತವರ ಬಂಟರು ದೌರ್ಜನ್ಯ ಎಸಗಿರುವುದು ಅಮಾನುಷ. ಇದನ್ನು ಜೆಡಿಎಸ್ ಪಕ್ಷ ಉಗ್ರವಾಗಿ ಖಂಡಿಸುತ್ತದೆ ಎಂದು ಹೆಚ್.ಎಂ.ರಮೇಶ್ ಗೌಡ ಹೇಳಿದರು.

ಸಚಿವ ಡಿ.ಸುಧಾಕರ್ ವರ್ತನೆ ತಪ್ಪು. ಅವರ ಭಾಷೆ ಸರಿ ಇಲ್ಲ. ಮಚ್ಚು ಕೊಡಲಿ ಹಿಡಿದು ಓಡಾಡುತ್ತಿದ್ದೆವು ಎಂದು ಹೇಳಿದರೆ ಅರ್ಥವೇನು. ಸಿಎಂ, ಡಿಸಿಎಂ ಸಚಿವರದ್ದು ತಪ್ಪಿಲ್ಲ ಅಂತಾರೆ. ಸಚಿವರ ಮೇಲೆ ಎಫ್ಐಆರ್ ದಾಖಲೆ ನಂತರ ರಾಜೀನಾಮೆ ನೀಡಬೇಕು. ಸಚಿವರಿಗೆ ಕಾನೂನಿನ ಮೇಲೆ ಗೌರವ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಸರ್ಕಾರ ಇದ್ದಾಗ ಸಚಿವರ ವಿರುದ್ಧ ಎಫ್ ಐಆರ್ ದಾಖಲಾದ ತಕ್ಷಣ ಕಾಂಗ್ರೆಸ್ ಪ್ರತಿಭಟನೆ ಮಾಡಿತ್ತು. ದಲಿತ, ಅಲ್ಪಸಂಖ್ಯಾತ, ಹಿಂದುಳಿತ ಉದ್ಧಾರಕ್ಕೆ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಇವರು ಹೇಳುತ್ತಿದ್ದಾರೆ. ಪ‍ರಿಶಿಷ್ಟ ಜಾತಿ, ಪಂಗಡಗಳ ಭೂಮಿ ವರ್ಗಾವಣೆ ನಿಷೇಧ (ಪಿಟಿಸಿಎಲ್‌) ಕಾಯ್ದೆ ಜಾರಿಗೆ ತಂದಿದ್ದೇವೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಆದರೆ, ಈ ಪ್ರಕರಣದಲ್ಲಿ ಸಚಿವರನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರವೇ ಸಚಿವರ ಪರ ನಿಂತರೆ ತನಿಖೆಯ ಗತಿ ಏನು ಎಂದು ರಮೇಶ್ ಗೌಡ ಪ್ರಶ್ನಿಸಿದರು.

ಸಚಿವರು ರಾಜೀನಾಮೆ ನೀಡದಿದ್ದರೆ ನಾವು ರಾಜ್ಯಪಾಲರಿಗೂ ದೂರು ನೀಡುತ್ತೇವೆ. ಅವರು ರಾಜೀನಾಮೆ ನೀಡುವ ತನಕ ಹೋರಾಟ ಮಾಡುತ್ತೇವೆ. ದಲಿತರಿಗೆ ನ್ಯಾಯ ಕೊಡಿಸಲು ಗೃಹ ಸಚಿವರು ವಿಫಲ ಆಗಿದ್ದಾರೆ. ಅಲ್ಲದೆ, ದಲಿತರ ರಕ್ಷಣೆ ಮಾಡಲಾಗದ ಅದೇ ಸಮುದಾಯದ ಗೃಹ ಸಚಿವ ಪರಮೇಶ್ವರ್ ಅವರೂ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯ ಮಾಡಿದರು.

ಸಚಿವ ಡಿ.ಸುಧಾಕರ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಕಾರರನ್ನು ವಶಕ್ಕೆ ಪಡೆದ ಪೊಲೀಸರು, ತದ ನಂತರ ಬಿಡುಗಡೆ ಮಾಡಿದರು.

ಜೆಡಿಎಸ್ ನಗರ ಮುಖಂಡರಾದ ನಾರಾಯಣ ಸ್ವಾಮಿ, ಪ್ರವೀಣ ಕುಮಾರ್, ಹರೀಶ್, ರೇವಣ್ಣ, ಚಂದ್ರಶೇಖರ್ ಸೇರಿದಂತೆ ಹಲವಾರು ಹಿರಿಯ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ