Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಾದ್ಯಂತ ಭೂಮಿಯ ಮರು ಸರ್ವೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ನ.15: ಶತಮಾನಗಳ ಭೂ ವ್ಯಾಜ್ಯಕ್ಕೆ ತೆರೆ ಎಳೆಯಲು ಸರ್ಕಾರ ಯತ್ನಿಸುತ್ತಿದೆ. ಶೀಘ್ರದಲ್ಲೇ ರಾಜ್ಯಾದ್ಯಂತ ಭೂ ಮರು ಮಾಪನ ನಡೆಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ರಾಮನಗರದಲ್ಲಿ ಪ್ರಾಯೋಗಿಕ ಭೂ ಮರು ಮಾಪನಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 1925ರಲ್ಲಿ ಕೊನೆಯ ಬಾರಿ ಸರ್ವೆ ನಡೆಸಲಾಗಿತ್ತು. ಭೂ ಸರ್ವೆ ವಿಚಾರದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಪರಿಣಾಮ ರೈತರೂ ಸಹ ತಮ್ಮದಲ್ಲದ ತಪ್ಪಿಗೆ ಸಾಕಷ್ಟು ನೋವನ್ನು ಅನುಭವಿಸಿದ್ದಾರೆ. ಹೀಗಾಗಿ ರೈತರ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ಸಲುವಾಗಿ ಶತಮಾನಗಳ ನಂತರ ಭೂ ಮರು ಸರ್ವೆ ಪ್ರಾಯೋಗಿಕ ಪರೀಕ್ಷೆಗೆ ಇಂದು‌ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಸರ್ವೇ ನಂಬರ್ ಡಿಸ್ಪ್ಯೂಟ್ ಎಂಬುದು ಇತ್ತೀಚೆಗೆ ರೈತರ ಪಾಲಿನ ಸಾಮಾನ್ಯ ಸಮಸ್ಯೆಯಾಗಿದೆ. ತಮ್ಮದಲ್ಲದ ತಪ್ಪಿಗೆ ದಿನಂಪ್ರತಿ ಸರ್ಕಾರಿ ಕಚೇರಿಯನ್ನು ಅಲೆಯುವಂತಾಗಿದೆ ಎಂದು ವಿಷಾದಿಸಿದರು.

ಅಲ್ಲದೆ, ರೈತರ ಈ ಪರಿಸ್ಥಿತಿಗೆ ಸರ್ವೇ ಇಲಾಖೆಯಲ್ಲಿನ ಸಮಸ್ಯೆಯೇ ಕಾರಣ. ಬ್ರಿಟೀಷರ ಕಾಲದಲ್ಲಿ 1925 ರಲ್ಲಿ ನಡೆದ ಭೂ ಸರ್ವೇಯನ್ನೇ ಆಧಾರವಾಗಿಟ್ಟುಕೊಂಡು ನಾವು ಈಗಲೂ ವ್ಯವಹರಿಸುತ್ತಿದ್ದೇವೆ. ಇದೇ ಕಾರಣಕ್ಕೆ ಇದೀಗ ಭೂ ರೀ ಸರ್ವೆಗೆ ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿದ್ದು, ಇದು ಯಶಸ್ವಿಯಾದರೆ ರಾಜ್ಯಾದ್ಯಂತ ಎಲ್ಲಾ ಕೃಷಿ ಮತ್ತು ಅರಣ್ಯ ಭೂಮಿಯನ್ನು ರೀ ಸರ್ವೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ರೀ ಸರ್ವೇ ಲಾಭವೇನು?:

ಪ್ರತಿ ಹಳ್ಳಿಯ ಹಿಡುವಳಿ ಭೂಮಿ, ಗೋಮಾಳ, ಹುಲ್ ಬನ್ನಿ, ಸರ್ಕಾರಿ ಖರಾಬು, ಇನಾಮು ಮತ್ತು ಕೆರೆ ಭೂಮಿಗಳಿಗೆ ಸಂಬಂಧಿಸಿದಂತೆ ಈಗ ಸರ್ಕಾರದ ಬಳಿ ಇರುವುದು ನೂರು ವರ್ಷಗಳ ಹಳೆಯ ದಾಖಲೆ. ಆದರೆ ಈ ನೂರು ವರ್ಷದಲ್ಲಿ ಕೃಷಿ ಮತ್ತು ಜನವಸತಿ ಪ್ರದೇಶಗಳಲ್ಲಿ ಸಾಕಷ್ಟು ಬದಲಾವಣೆಯಾಗಿವೆ. ಪ್ರತಿಯೊಂದು ಗ್ರಾಮಠಾಣಾ ಹಾಗೂ ಸರ್ವೇ ನಂ ಗಡಿಯಲ್ಲೂ ವ್ಯತ್ಯಾಸಗಳಿವೆ. ಈ ಬಗ್ಗೆ ಸರ್ಕಾರಿ ದಾಖಲೆಗಳಲ್ಲಿ ನಿಖರ ವಿವರಣೆ ಇಲ್ಲ.

ಇದಲ್ಲದೆ, ಸರ್ಕಾರಿ ಭೂ ಒತ್ತುವರಿ ಜಮೀನು ಯಾವುದು? ಹಾಗೂ ಅರಣ್ಯ ಪ್ರದೇಶದ ಗಡಿಯ ಬಗ್ಗೆಯೂ ಸಾಕಷ್ಟು ಗೊಂದಲ ಇದೆ. ಈ ಎಲ್ಲಾ ಗೊಂದಲಗಳಿಗೂ ತೆರೆ ಎಳೆಯುವ ಸಲುವಾಗಿಯೇ ಇದೀಗ ತಾಂತ್ರಿಕ ಭೂ ಮರು ಸರ್ವೇಗೆ ಚಾಲನೆ ನೀಡಲಾಗಿದೆ ಎಂದು ವಿವರಿಸಿದರು.

ಡ್ರೋನ್ ತಂತ್ರಜ್ಞಾನದ ಮೂಲಕ ಭೂ ರೀ ಸರ್ವೆ ನಡೆಸಲಾಗುತ್ತಿದೆ. ಡ್ರೋನ್ ಪ್ರತಿ ಚ.ಕಿಲೊಮೀಟರ್ ಗೆ 4000 ಕ್ಕೂ ಅಧಿಕ ಫೋಟೊ ತೆಗೆಯುತ್ತದೆ. ಈ ಫೋಟೊಗಳ ಆಧಾರದಲ್ಲಿ ವೈಜ್ಞಾನಿಕವಾಗಿ ಹಿಡುವಳಿ ಭೂಮಿ, ಗೋಮಾಳ, ಹುಲ್ ಬನ್ನಿ, ಸರ್ಕಾರಿ ಖರಾಬು, ಇನಾಮು ಮತ್ತು ಕೆರೆ ಭೂಮಿಗಳನ್ನು ಗುರುತಿಸಲಾಗುವುದು. ಈ ಮೂಲಕ ರೈತರ ಸರ್ವೇ ಡಿಸ್ಪ್ಯೂಟ್ ಗಳಿಗೆ ಶಾಶ್ವತ ಪರಿಹಾರ ಹಾಗೂ ಸರ್ಕಾರಿ ಭೂಮಿ ಗುರುತಿಸಿ ಒತ್ತುವರಿ ತೆರವು ಮಾಡಲು ಸಹಕಾರಿಯಾಗುವುದು ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ