ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ
ಸುದ್ದಿಮೂಲ ವಾರ್ತೆ
ಅ.9: ಕಂದಾಯ ಇಲಾಖೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ನಡೆಸಲಾಯಿತು. ಸಭೆಯಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳೂ ಪಾಲ್ಗೊಂಡಿದ್ದರು.
ಸಭೆಯಲ್ಲಿ ತಕರಾರು ಅರ್ಜಿಗಳ ವಿಲೇವಾರಿ ಪ್ರಗತಿಯ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು. ಅಲ್ಲದೆ, 21 ಜಿಲ್ಲೆಗಳನ್ನು ಎರಡನೇ ಹಂತದಲ್ಲಿ ಬರ ಪೀಡಿತ ತಾಲೂಕು ಘೋಷಣೆಗೆ ರಾಜ್ಯ ಸರ್ಕಾರ ಸಿದ್ದತೆ ನಡೆಸುತ್ತಿದ್ದು, ಬೆಳೆ ಪರಿಶೀಲನೆಯನ್ನು ತ್ವರಿತಗತಿಯಲ್ಲಿ ಮುಗಿಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಯಿತು.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.