Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಹನ ಬಿಟ್ಟು ಪ್ರಾಣ ಉಳಿಸಿಕೊಂಡ ಸವಾರರು

ಸುದ್ದಿಮೂಲ ವಾರ್ತೆ

ಕೆ.ಆರ್.ಪುರ.ನ7:ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ವಿಜಿನಾಪುರದಿಂದ ಟಿನ್ ಫ್ಯಾಕ್ಟರಿ ಕಡೆಗೆ ಸಂಪರ್ಕ ಕಲ್ಪಿಸುವ ವಿಜಿನಾಪುರದ ಎಫ್.ಸಿ.ಐ ಗೋದಾಮು ಬಳಿಯ ರೈಲ್ವೆ ಕೆಳಸೇತುವೆ ಜಲವೃತಗೊಂಡು ವಾಹನ ಸವಾರರು ಪರದಾಡಿದರು.

ಮಳೆ ನೀರು ಶೇಖರಣೆಗೊಂಡು ಕೇಳಸೇತುವೆ ಹೊಳೆಯಂತಾದ ಪರಿಣಾಮ ರೈಲ್ವೆ ಕೆಳಸೇತುವೆಯಲ್ಲಿ ನಾಲ್ಕು ಅಡಿಗೂ ಹೆಚ್ಚು ಮಳೆ ನೀರು ಸಂಗ್ರಹಗೊಂಡು ಒಂದು ಬೈಕ್ ಮತ್ತು ಕಾರ್ ನೀರಿನ ಅಡಿ ಸಿಲುಕಿಕೊಂಡವು. ಪ್ರಾಣ ಉಳಿಸಿಕೊಳ್ಳಲು ವಾಹನ ಸವಾರರು ಸ್ಥಳದಲ್ಲಿಯೇ ವಾಹನಗಳನ್ನು ಕೇಳ ಸೇತುವೆಯಲ್ಲಿ ಬಿಟ್ಟು ಪ್ರಾಣ ಉಳಿಸಿಕೊಂಡರು.

ರೈಲ್ವೆ ಸೇತುವೆ ಕೆಳಗೆ ಅಪಾರ ಪ್ರಮಾಣದ ನೀರು ತುಂಬಿಕೊಂಡು ಸರಗವಾಗಿ ಹರಿಯದೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಮಂಗಳವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಅಗ್ನಿ ಶಾಮಕ ದಳದ ಸಿಬ್ಬಂದಿ ಮೋಟಾರ್ ಗಳ ಮೂಲಕ ನೀರು ಹೊರಹಾಕಿದರು. ಆದರೂ ನೀರಿನ ಪ್ರಮಾಣ ಕಡಿಮೆ ಆಗದೆ ವಾಹನ ಸವಾರರಿಗೆ ಈ ರಸ್ತೆಯಲ್ಲಿ ಸಂಚಾರ ಸಾಧ್ಯವಾಗದೆ ಬೇರೆ ಮಾರ್ಗದ ಮೂಲಕ ತೆರಳಿದ ದೃಶ್ಯ ಸಾಮಾನ್ಯವಾಗಿತ್ತು.

ಹತ್ತಾರು ವರ್ಷಗಳಿಂದ ಈ ಸಮಸ್ಯೆ ಇದೆ. ಪ್ರತಿ ಸಾರಿ ಮಳೆ ಬಂದಾಗ ರೈಲ್ವೆ ಸೇತುವೆ ಬಳಿ ಪ್ರವಾಹ ಸೃಷ್ಟಿಯಾಗುತ್ತದೆ. ನೀರು ಸಂಗ್ರಹಗೊಂಡು ತೊಂದರೆ ಆದಾಗ ಮಾತ್ರ ಅ ಕ್ಷಣಕ್ಕೆ ಬಿಬಿಎಂಪಿ ಅಧಿಕಾರಿಗಳು ಕಾಟಚಾರಕ್ಕೆ ನೀರು ತೆರವುಗೊಳಿಸಿ ಕೈತೊಳೆದುಕೊಳ್ಳುತ್ತಾರೆ. ಕೆಳ ಸೇತುವೆ ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಮಳೆ ನೀರು ಚರಂಡಿ ಮೂಲಕ ಹರಿದು ಹೋಗಲು ಸಮರ್ಪಕ ವ್ಯವಸ್ಥೆ ಇಲ್ಲ. ಹೀಗಾಗಿ ಮಳೆ ನೀರು ನಾಲ್ಕು ಅಡಿಗೂ ಹೆಚ್ಚು ಶೇಖರಣೆಗೊಳ್ಳುತ್ತದೆ ಎಂದು ವಾಹನ ಸವಾರ ಪ್ರದೀಪ್ ಹೇಳಿದರು.

ಕೆಳಸೇತುವೆ ಸಂಪರ್ಕವು ವಿಜಿನಾಪುರಪುರದಿಂದ ಹೆಬ್ಬಾಳ, ಮಾರುತ್ತಹಳ್ಳಿ, ವೈಟ್ ಫಿಲ್ಡ್, ಹಲಸೂರು ಕಡೆಗೆ ಸಂಪರ್ಕ ಹೊಂದಿದೆ. ಸಾವಿರಾರು ವಾಹನ ಸವಾರರು ಈ ಕೆಳ ಸೇತುವೆಯನ್ನೆ ನೆಚ್ಚಿಕೊಂಡಿದ್ದಾರೆ. ಮಳೆ ಬಂದಾಗಲೆಲ್ಲ ಕೆಳ ಸೇತುವೆ ಜಲವೃತಗೊಂಡು ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ಸೋಮವಾರ ರಾತ್ರಿ ಸುರಿದ ಮಳೆಗೆ ವಾಹನ ಸವಾರರು ವಾಹನಗಳನ್ನು ನಡುನೀರಿನಲ್ಲಿ ಬಿಟ್ಟು ಪ್ರಾಣ ಉಳಿಸಿಕೊಳ್ಳಲು ಪರದಾಡಿದ್ದಾರೆ. ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಎಷ್ಟು ಬಾರಿ ಮನವಿ ಮಾಡಿಕೊಂಡರು ಶಾಶ್ವತ ಪರಿಹಾರಕ್ಕೆ ಮುಂದಾಗಿಲ್ಲ ಎಂದು ಸ್ಥಳೀಯ ರಮೇಶ್ ದೂರಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ