Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಗ್ರಾಮಾಂತರ ಅಭ್ಯರ್ಥಿಯಿಂದ ರೋಡ್ ಶೋ

ಸುದ್ದಿಮೂಲ ವಾರ್ತೆ

ಶಿವಮೊಗ್ಗ,ಏ.26: ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಾರನಹಳ್ಳಿಯಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಬಿ.ಅಶೋಕ ನಾಯ್ಕ ಅವರು ಚುನಾವಣಾ ಪ್ರಚಾರ, ರೋಡ್ ಶೋ ಹಾಗೂ ಮನೆ ಮನೆಗಳಿಗೆ ತೆರಳಿ ಪ್ರಚಾರ ನಡೆಸಿದರು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.



ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತ ದೇಶ ಶ್ರೇಷ್ಠ ಮಾರ್ಗದಲ್ಲಿ ಮುನ್ನಡೆದಿದೆ. ಧರ್ಮ ರಕ್ಷಣೆ ಮತ್ತು ದೇಶದ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ಪಕ್ಷ ಬಿಜೆಪಿ. ಬಿಜೆಪಿ ನೇತೃತ್ವದ ಸರ್ಕಾರವನ್ನು ಮತ್ತೊಮ್ಮೆ ಆಡಳಿತಕ್ಕೆ ತರಬೇಕು. ಗ್ರಾಮಾಂತರ ಕ್ಷೇತ್ರದಲ್ಲಿ ಕೆ.ಬಿ.ಅಶೋಕ ನಾಯ್ಕ ಅವರನ್ನು ಮತ್ತೊಮ್ಮೆ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ಚುನಾವಣಾ ಉಸ್ತುವಾರಿ ಕುಲದೀಪ್ ಸಿಂಗ್ ಕುಮಾರ ಹೇಳಿದರು.

ಹಾರನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ರೋಡ್ ಶೋ ಸಂದರ್ಭದಲ್ಲಿ ಗ್ರಾಮಸ್ಥರನ್ನು ಉದ್ದೇಶಿಸಿ ಪಕ್ಷದ ಮುಖಂಡರು ಮಾತನಾಡಿದರು. ನಂತರ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಬಿ.ಅಶೋಕ ನಾಯ್ಕ್ ಮಾತನಾಡಿ, ಐದು ವರ್ಷಗಳಲ್ಲಿ ಹಿಂದಿನ ಅವಧಿಗಳಲ್ಲಿ ಆಗದಷ್ಟು ಅಭಿವೃದ್ಧಿ ಕೆಲಸಗಳನ್ನು ನಡೆಸಲಾಗಿದೆ. ಅಭಿವೃದ್ಧಿ ಎಂದರೆ ಬಿಜೆಪಿ, ಬಿಜೆಪಿಯೇ ಭರವಸೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಗ್ರಾಮಾಂತರ ಕ್ಷೇತ್ರದ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದು, ಹೆಚ್ಚಿನ ಅನುದಾನವನ್ನು ಕ್ಷೇತ್ರಕ್ಕೆ ನೀಡಿದ್ದಾರೆ. ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅವರ ನೆರವಿನಿಂದಲೂ ಕೋಟ್ಯಾಂತರ ರೂ. ಅನುದಾನ ಗ್ರಾಮಾಂತರ ಕ್ಷೇತ್ರಕ್ಕೆ ಲಭಿಸಿದೆ. ಅಭಿವೃದ್ಧಿ ಪರ್ವ ನಿರಂತರವಾಗಿ ಮುಂದುವರೆಯಲು ಬಿಜೆಪಿ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರಬೇಕು. ಹೆಚ್ಚಿನ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ರೋಡ್ ಶೋಗೂ ಮುನ್ನ ಚೌಕಿ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳ ಗದ್ದುಗೆಗೆ ಭೇಟಿ ನೀಡಿದರು. ನಂತರ ಹಾರನಹಳ್ಳಿ ಶ್ರೀ ರಾಮಲಿಂಗೇಶ್ವರ ಮಠದ ಶ್ರೀ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ರೋಡ್ ಶೋಗೆ ಚಾಲನೆ ನೀಡಲಾಯಿತು.

ಶಿವಮೊಗ್ಗ ಗ್ರಾಮಾಂತರ ಪ್ರವಾಸಿ ಪ್ರಭಾರಿ ಮುಖೇಶ್ ಸಿಂಗ್ ಕೋಲಿ, ಕ್ಷೇತ್ರ ಪ್ರಭಾರಿ ಎಸ್.ದತ್ತಾತ್ರಿ, ಮಂಡಲ ಅಧ್ಯಕ್ಷ ರತ್ನಾಕರ ಶೆಣೈ, ಚುನಾವಣಾ ಸಮಿತಿ ಸಂಚಾಲಕ ಸಿಂಗನಹಳ್ಳಿ ಸುರೇಶ್, ಶಿವಮೊಗ್ಗ ಗ್ರಾಮಾಂತರ ಅಭ್ಯರ್ಥಿ ಪ್ರಮುಖ್ ವೀರೂಪಾಕ್ಷಪ್ಪ, ಸ್ವರೂಪ್, ಜಗದೀಶ್, ತಮ್ಮಡಿಹಳ್ಳಿ ನಾಗರಾಜ್, ಸೌಮ್ಯ, ಹಾರನಹಳ್ಳಿ ಮಹಾಶಕ್ತಿ ಕೇಂದ್ರದ ರಮೇಶ್, ಕಿರಣ್, ಗಿರೀಶ್ ಮತ್ತಿತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ