Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುಟುಂಬ ಸಮೇತ ನಂಜನಗೂಡಿನ ಶ್ರೀಕಂಠೇಶ್ವರ ದರ್ಶನ ಪಡೆದ ರಾಕಿಂಗ್‌ ಸ್ಟಾರ್‌ ಯಶ್‌

ಸುದ್ದಿಮೂಲ ವಾರ್ತೆ

ಮೈಸೂರು, ಜೂ. 21 : ರಾಕಿಂಗ್ ಸ್ಟಾರ್ ಯಶ್ ಮತ್ತು ನಟಿ ರಾಧಿಕಾ ಪಂಡಿತ್ ತಮ್ಮ ಮಕ್ಕಳೊಂದಿಗೆ ಕುಟುಂಬ ಸಮೇತ ಬುಧವಾರ ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಕ್ಕಳು ಹಾಗೂ ಅತ್ತೆ ಮಾವ ಸಮೇತ ದೇವಸ್ಥಾನಕ್ಕೆ ಆಗಮಿಸಿದ್ದ ಯಶ್ ಕೆಲ ಹೊತ್ತು ದೇವರ ಸನ್ನಿಧಿಯಲ್ಲಿ ಕಾಲ ಕಳೆದರು.

ಕಳೆದ ಮೂರು ದಿನಗಳಿಂದ ಅವರು ನಾಗರಹೊಳೆ, ಬಂಡೀಪುರ ಅರಣ್ಯದಲ್ಲಿ ಸಫಾರಿಗೆ ತೆರಳಿದ್ದರು. ಇಂದು ಶ್ರೀಕಂಠೇಶ್ವರ ದೇವರಿಗೆ ಪೂಜೆ ಸಲ್ಲಿಸಿದರು. ಹಾಸನ ಅವರ ಹುಟ್ಟೂರಾದರೂ ಬೆಳೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿ. ಹೀಗಾಗಿ ಮೈಸೂರಿಗೆ ಹೋದಾಗೆಲ್ಲ ಯಶ್ ಹೀಗೆ ಪ್ರವಾಸ ಮಾಡುತ್ತಲೇ ಇರುತ್ತಾರೆ. ಇದೇ 22 ರಿಂದ ನಡೆಯುವ ಕಲ್ಯಾಣೋತ್ಸವದ ಹಿನ್ನೆಲೆಯಲ್ಲಿ ಶ್ರೀಕಂಠೇಶ್ವರನ ದರ್ಶನ ಪಡೆದರು.

ಹುಲಿ ಕಾಣಿಸಲಿಲ್ಲ

ನಂಜುಂಡೇಶ್ವರನ ದರ್ಶನ ಪಡೆದ ನಂತರ ಮಾತನಾಡಿದ ಯಶ್‌, ಶ್ರೀಕಂಠೇಶ್ವರ ನಮ್ಮ ಮನೆದೇವರು. ಸಿನಿಮಾಗಳ ಕೆಲಸದ ಒತ್ತಡಲ್ಲಿ ಇಲ್ಲಿಗೆ ಬರಲು ಸಾಧ್ಯವಾಗಿರಲಿಲ್ಲ. ಈಗ ಕಳೆದ ಮೂರು ದಿನಗಳಿಂದ ಈ ಭಾಗದಲ್ಲಿ ಪ್ರವಾಸ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ದೇವಾಲಯ ದರ್ಶನ ಮಾಡಲು ಬಂದಿದ್ದೇನೆ. ಯಾವುದೇ ವಿಶೇಷ ಹರಕೆ ಇಲ್ಲ. ಮೈಸೂರು ಭಾಗದ ಪ್ರವಾಸ ತುಂಬಾ ಚೆನ್ನಾಗಿ ಆಯ್ತು. ಕಾಡಿನ ಸೌಂದರ್ಯ ತುಂಬಾ ಸುಂದರವಾಗಿದೆ ಎಂದರು.

ಸಫಾರಿಯಲ್ಲಿ ಜಿಂಕೆ, ಕರಡಿ, ಆನೆ ಎಲ್ಲೂ ಕಂಡವು.ಹುಲಿಯೊಂದು ಸಿಗಲಿಲ್ಲ ಎಂದು ಬೇಜಾರಾಯ್ತು.ಇವತ್ತೂ ಸಫಾರಿ ಮಾಡಬೇಕಿತ್ತು. ಮಳೆ ಕಾರಣಕ್ಕೆ ಹೋಗಲಿಲ್ಲ. ಮುಂದೆ ಮತ್ತೆ ಸಫಾರಿ ಮಾಡಿ ನೋಡಿದ್ರಾಯ್ತು ಅಂತ ವಾಪಸ್ ಬಂದೆವು ಎಂದು ಹೇಳಿದರು.

ಶೀಘ್ರದಲ್ಲೇ ಮುಂದಿನ ಸಿನಿಮಾ ಘೋಷಣೆ

ಶ್ರೀಘ್ರದಲ್ಲೇ ಮುಂದಿನ ಚಿತ್ರ ಅನೌನ್ಸ್ ಮಾಡುವೆ. ದೇವರ ಸನ್ನಿದಿಯಲ್ಲಿ ಇದ್ದೀನಿ ಸುಖಾ ಸುಮ್ಮನೆ ತೇಲಿಸುವ ಮಾತುಗಳನ್ನು ಆಡುವುದಿಲ್ಲ ಜನರು ಉಚಿತವಾಗಿ ಸಿನಿಮಾ ನೋಡುವುದಿಲ್ಲ ದುಡ್ಡು ಕೊಟ್ಟು ಸಿನಿಮಾವನ್ನು ವೀಕ್ಷಿಸುತ್ತಾರೆ. ಅವರು ಕೊಡುವ ದುಡ್ಡಿಗೆ ನ್ಯಾಯ ಒದಗಿಸುವಂತಹ ಸಿನಿಮಾ ಮಾಡಬೇಕು.

ನಾನು ಒಂದು ಕ್ಷಣವನ್ನೂ ವ್ಯರ್ಥ ಮಾಡುತ್ತಿಲ್ಲ. ಸಿನಿಮಾಗಾಗಿ ನಿಂತರ ಕೆಲಸ ಮಾಡುತ್ತಿದ್ದೇನೆ ಆದಷ್ಟು ಬೇಗ ಹೊಸ ಚಿತ್ರದ ಮಾಹಿತಿ ನೀಡುತ್ತೇನೆ. ಬಾಲಿವುಡ್‌ಗೆ ನಾನು ಹೋಗುವುದಿಲ್ಲ. ಮುಂದಿನ ದಿನಗಳಲ್ಲಿ ನಾನು ಇರುವ ಕಡೆಯೇ ಎಲ್ಲರನ್ನೂ ಕರೆಸಿಕೊಳ್ಳುತ್ತೇನೆ ಎಂದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ