Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕಬಳ್ಳಾಪುರದಲ್ಲಿ ಕ್ಲಿನಿಕ್‌ ಆನ್‌ ವೀಲ್ ಚಾಲನೆ

ಸುದ್ದಿಮೂಲ ವಾರ್ತೆ

ಚಿಕ್ಕಬಳ್ಳಾಪುರ,ಜು.23:ಬಡವರ ಮನೆ ಬಾಗಿಲಿಗೆ ಉಚಿತ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ, ಪ್ರತಿಯೊಂದು ಜಿಲ್ಲೆಯಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯ ಒದಗಿಸಲು ಸಂಚಾರಿ ವೈದ್ಯಕೀಯ ವಾಹನ - ಕ್ಲಿನಿಕ್‌ ಆನ್‌ ವೀಲ್ ಗೆ ಚಾಲನೆ ನೀಡಿದೆ.

ಚಿಕ್ಕಬಳ್ಳಾಪುರದ ಎಂ.ಜಿ. ರಸ್ತೆಯ ಮುಹಮದ್ದೀಯ ಶಾಲೆ ಆವರಣದಲ್ಲಿ ಸಂಚಾರಿ ವಾಹನಕ್ಕೆ ಸಪ್ತಗಿರಿ ಆಸ್ಪತ್ರೆಯ ವ್ಯವಸ್ಥಾಪಕರಾದ ಜಿ.ಡಿ. ಮನೋಜ್‌ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಪ್ರತಿಯೊಂದು ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ವೈದ್ಯರ ತಂಡವಿರುವ ಈ ವಾಹನ ಸಂಚರಿಸಿ ಆರೋಗ್ಯ ತಪಾಸಣೆ ಮಾಡಲಿದೆ. ವಿವಿಧ ಆರೋಗ್ಯ ಸಮಸ್ಯೆಗಳನ್ನು ಪತ್ತೆ ಮಾಡಿ ಸಾಧ್ಯವಾದರೆ ಸ್ಥಳದಲ್ಲಿಯೇ ಚಿಕಿತ್ಸೆ ನೀಡಲಾಗುವುದು. ಅಗತ್ಯವಿದ್ದರೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗುವುದು. ಈ ಎಲ್ಲಾ ಚಿಕಿತ್ಸೆ ಸಂಪೂರ್ಣವಾಗಿ ಉಚಿತವಾಗಿದ್ದು, ಸಂಚಾರಿ ವೈದ್ಯಕೀಯ ವಾಹನದಲ್ಲಿ ಇಬ್ಬರು ವೈದ್ಯರು, ಒಬ್ಬರು ನರ್ಸ್‌ ಇರುತ್ತಾರೆ. ಗ್ರಾಮೀಣ ಭಾರತ ಕಾರ್ಯಕ್ರಮದಡಿ ಆರೋಗ್ಯ ಸೇವೆಯನ್ನು ಗ್ರಾಮಗಳಿಗೆ ಕೊಂಡೊಯ್ಯುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಐಎಂಎಸ್ ಪ್ರತಿಷ್ಠಾನ ಮತ್ತು ಹೋಪ್ ಫೌಂಡೇಶನ್ ಸಹಯೋಗದಲ್ಲಿ 1000 ಜನರಿಗೆ ಬೃಹತ್‌ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಸುಮಾರು ಹಮ್ಮಿಕೊಳ್ಳಲಾಗಿತ್ತು. ತಜ್ಞ ವೈದ್ಯರ ತಂಡ ಹೃದ್ರೋಗ, ಸ್ತ್ರೀರೋಗ, ಮೂಳೆ, ಹರ್ನಿಯಾ, ನೇತ್ರ ತಪಾಸಣೆ, ನರರೋಗ, ಮೂತ್ರಪಿಂಡ, ನರರೋಗ, ಕಿವಿ, ಮೂಗು, ಗಂಟಲು ಮತ್ತಿತರೆ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸೂಕ್ತ ಚಿಕಿತ್ಸೆ ನೀಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ