Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆಮ್ಮರವಾಗಿ ಬೆಳೆದಿರುವ ಆರ್ ವಿ ಶಿಕ್ಷಣ ಸಮೂಹ: ಅಶ್ವತ್ಥ ನಾರಾಯಣ





ಸುದ್ದಿಮೂಲ ವಾರ್ತೆ

ಬೆಂಗಳೂರು, ಏ.8: ಸಮಾಜದ ಅವಶ್ಯಕತೆಗಳನ್ನು ಮನಗಂಡು ಅವನ್ನು ಪೂರೈಸಲು ಮಾಡಿದ ಪ್ರಯತ್ನದ ಫಲವಾಗಿ ಆರ್ ವಿ ಶಿಕ್ಷಣ ಸಮೂಹವು ಇಂದು ಹೆಮ್ಮರವಾಗಿ ಬೆಳದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಶುಕ್ರವಾರ ಹೇಳಿದ್ದಾರೆ.

ಸಂಸ್ಥೆಯ ಸುವರ್ಣೋತ್ಸವದ ಅಂಗವಾಗಿ ಏರ್ಪಡಿಸಿದ್ದ "ಮೈಲ್ ಸ್ಟೋನ್ ಸೆಲೆಬ್ರೇಶನ್" ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಮಾಜದ ಸಮಸ್ಯೆಗಳಿಗೆ ಶಿಕ್ಷಣವೇ ಪರಿಹಾರವಾಗಿದೆ. ಆರ್ ವಿ ಶಿಕ್ಷಣ ಸಮೂಹವು ಹಲವಾರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದೆ ಎಂದು ಅವರು ಮೆಚ್ಚುಗೆಯ ಮಾತುಗಳನ್ನು ನುಡಿದರು.

21ನೇ ಶತಮಾನವು ಜ್ಞಾನಾಧಾರಿತ ಸಮಾಜವಾಗಿದೆ. ಈ ಜ್ಞಾನದ ಮಹತ್ವ ಮನಗಂಡು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ಶಿಕ್ಷಣ ನೀತಿ 2020ನ್ನು ಜಾರಿಗೊಳಿಸಿದ್ದಾರೆ ಎಂದು ಅವರು ವಿವರಿಸಿದರು.

ಹಿಂದಿನ ಶಿಕ್ಷಣ ನೀತಿಗೆ ಹೋಲಿಸಿದರೆ ಈ ಶಿಕ್ಷಣ ನೀತಿ ಎಷ್ಟು ಉನ್ನತ ಮಟ್ಟದಲ್ಲಿದೆ ಎಂಬುದು ಯಾರಿಗಾದರೂ ಗೊತ್ತಾಗುತ್ತದೆ. ಕಲಿಕೆ ಮತ್ತು ಕೌಶಲ್ಯಕ್ಕೆ ಉತ್ತೇಜನ ನೀಡುವ ಸಲುವಾಗಿ ಈ ಶಿಕ್ಷಣ ನೀತಿಯಲ್ಲಿ ಹೆಚ್ಚಿನ ಸಡಿಲಿಕೆ ತರಲಾಗಿದೆ ಎಂದು ಅಶ್ವತ್ಥನಾರಾಯಣ ಹೇಳಿದರು.

ದೇಶಗಳಿಗೆ ಭೌತಿಕ ಗಡಿ ಇರುತ್ತದೆ. ಆದರೆ ಸ್ಪರ್ಧೆಗೆ ಇಂತಹ ಗಡಿ ಇಲ್ಲ. ನಮ್ಮ ಯುವಕರು ಇಡೀ ಜಗತ್ತಿನೊಂದಿಗೆ ಸ್ಪರ್ಧಿಸಬೇಕಾಗುತ್ತದೆ. ಇದನ್ನು ಮನವರಿಕೆ ಮಾಡಿಕೊಂಡು ನಾವು ಜ್ಞಾನ ಹಾಗೂ ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷರಾದ ಶಾಮ್, ಪದಾಧಿಕಾರಿಗಳಾದ ಹಯಗ್ರೀವ ಮತ್ತಿತರರು ಉಪಸ್ಥಿತರಿದ್ದರು.



RV Education Group that has grown into pride: Aswattha Narayan



Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ