Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್.ವಿ.ರಸ್ತೆ-ಬೊಮ್ಮನಹಳ್ಳಿ ಮೆಟ್ರೋ ಡಿಸೆಂಬರ್‌ಗೆ ಪ್ರಾರಂಭ

ಸುದ್ದಿಮೂಲ ವಾರ್ತೆ

ಬೆಂಗಳೂರು, ಆ.15: ನಮ್ಮ ಮೆಟ್ರೋ ಸೇವೆಯನ್ನು ಡಿಸೆಂಬರ್ ವೇಳೆಗೆ ನಾಗಸಂದ್ರ-ಮಾದಾವರವರೆಗೆ ವಿಸ್ತರಣೆ ಮಾಡಲಾಗುವುದು ಮತ್ತು ಆರ್.ವಿ.ರಸ್ತೆ-ಬೊಮ್ಮನಹಳ್ಳಿ ಹೊಸಮಾರ್ಗ ಕಾರ್ಯಾಚರಣೆ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ರಾಜ್ಯ ಸರ್ಕಾರದಿಂದ ಫೀಲ್ಡ್‌ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಬೆಂಗಳೂರಿನ ಕನಸುಗಳನ್ನು ಬಿಚ್ಚಿಟ್ಟರು.

ಬೆಂಗಳೂರು ಮೆಟ್ರೋ ಪ್ರಸ್ತುತ 69.66 ಕಿ.ಮೀ. ಕಾರ್ಯಾಚರಣೆ ನಡೆಸುತ್ತಿದ್ದು, ಪ್ರತಿದಿನ 6.1 ಲಕ್ಷ ಪ್ರಯಾಣಿಕರು ಮೆಟ್ರೋ ರೈಲು ಸೇವೆಯನ್ನು ಪಡೆಯುತ್ತಿದ್ದಾರೆ. 2023ರ ಸೆಪ್ಟೆಂಬರ್‍ನಲ್ಲಿ ಬೈಯಪ್ಪನಹಳ್ಳಿ-ಕೃಷ್ಣರಾಜಪುರ ಮಾರ್ಗ, ಕೆಂಗೇರಿ-ಚಲ್ಲಘಟ್ಟ ವಿಸ್ತರಣೆ, ಡಿಸೆಂಬರ್ ವೇಳೆಗೆ ನಾಗಸಂದ್ರ-ಮಾದಾವರ ವಿಸ್ತರಣೆ, ಆರ್.ವಿ.ರಸ್ತೆ-ಬೊಮ್ಮನಹಳ್ಳಿ ಹೊಸಮಾರ್ಗ ಕಾರ್ಯಾಚರಣೆ ಪ್ರಾರಂಭಿಸಲಾಗುವುದು. 2026ರ ವೇಳೆಗೆ ಬೆಂಗಳೂರಿನಲ್ಲಿ 175.55 ಕಿ.ಮೀ. ಮೆಟ್ರೋ ಜಾಲ ಕಾರ್ಯಾಚರಣೆ ನಡೆಸಲಿದೆ. ಈಗ ಬೆಂಗಳೂರಿನ ಮೆಟ್ರೋ ಜಾಲವು ದೇಶದಲ್ಲಿ ಎರಡನೆ ಸ್ಥಾನದಲ್ಲಿದೆ ಎಂದು ಹೇಳಿದರು.

ಬೆಂಗಳೂರಿನ ಜನದಟ್ಟಣೆಯನ್ನು ಕಡಿಮೆಗೊಳಿಸಲು ನಗರದ ಹೊರವಲಯದಲ್ಲಿ ಜನರು ಪ್ರತಿದಿನ ಪ್ರಯಾಣಿಸಲು ಅನುಕೂಲವಾಗುವಂತೆ ರಸ್ತೆ, ರೈಲು ಸಂಪರ್ಕದೊಂದಿಗೆ ಉಪನಗರಗಳನ್ನು ಅಭಿವೃದ್ಧಿ ಪಡಿಸಲಾಗುವುದು. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿಗಳಲ್ಲಿ ಉಪನಗರ ಟೌನ್‍ಶಿಪ್‍ಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದರು.

ಬ್ರ್ಯಾಂಡ್ ಬೆಂಗಳೂರು:

'ಬ್ರ್ಯಾಂಡ್ ಬೆಂಗಳೂರು' ಪರಿಕಲ್ಪನೆಯಡಿ ಬೆಂಗಳೂರು ನಗರವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಏರಿಸಲು ನಮ್ಮ ಸರ್ಕಾರ ಮುಂದಾಗಿದೆ. ನಗರದ ಸಂಚಾರ ವ್ಯವಸ್ಥೆ, ಪರಿಸರ, ಘನತ್ಯಾಜ್ಯ ನಿರ್ವಹಣೆ, ಸಾರ್ವಜನಿಕ ಸ್ಥಳಗಳ ಸದ್ಬಳಕೆ, ಆರೋಗ್ಯ, ಪ್ರಾಣಿಗಳ ಆರೋಗ್ಯ, ಜನಸ್ನೇಹಿ ಇ-ಆಡಳಿತ ವ್ಯವಸ್ಥೆ, ನೀರಿನ ಭದ್ರತೆ ಹಾಗೂ ಪ್ರವಾಹ ನಿರ್ವಹಣೆಯ ಸವಾಲುಗಳನ್ನು ಎದುರಿಸಲು ಒತ್ತು ನೀಡಲಾಗಿದೆ ಎಂದು ಹೇಳಿದರು.

ನಗರ ಪ್ರದೇಶದ ಬಡವರು, ವಲಸೆ ಕಾರ್ಮಿಕರು, ಶ್ರಮಿಕರ ಕ್ಷೇಮಾಭಿವೃದ್ಧಿಗೆ ಕೂಡ ನಮ್ಮ ಸರ್ಕಾರ ಕಾಳಜಿ ವಹಿಸಿದೆ. ಇದಕ್ಕಾಗಿ ಕಾರಣಾಂತರಗಳಿಂದ ಸ್ಥಗಿತಗೊಂಡಿದ್ದ ಇಂದಿರಾ ಕ್ಯಾಂಟೀನ್‍ಗಳನ್ನು ಮರು ಪ್ರಾರಂಭ ಮಾಡಲಾಗುತ್ತಿದೆ. ಇದಕ್ಕಾಗಿ 100 ಕೋಟಿ ರೂ. ಮೀಸಲಿಡಲಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಮನಗಂಡು ಸರ್ಕಾರವು ಪ್ರತಿ ಪ್ಲೇಟ್‍ಗೆ 5 ರಿಂದ 10 ರೂ. ಗಳಷ್ಟು ಹೆಚ್ಚುವರಿ ಮೊತ್ತ ನೀಡಿ, ಜನರಿಗೆ ಹಿಂದಿನ ದರದಲ್ಲಿಯೆ ಉತ್ತಮ ಆಹಾರವನ್ನು ಒದಗಿಸಲು ತೀರ್ಮಾನಿಸಿದೆ.

ನಗರ ಪ್ರದೇಶದ ಕೆರೆಗಳು ಮತ್ತಿತರ ಜಲಮೂಲಗಳ ಸಂರಕ್ಷಣೆ ಮಾಡುವುದರೊಂದಿಗೆ ಜನರಿಗೆ ಸ್ವಚ್ಛ ಕುಡಿಯುವ ನೀರು ಒದಗಿಸಲು ರಾಜ್ಯ ಸರ್ಕಾರವು 3400 ಕೋಟಿ ರೂ.ಗಳ ಯೋಜನೆಯನ್ನು ರೂಪಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಅಲೋಕ್ ಮೋಹಮ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ