Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆನೂರು ಮತ್ತು ಮಳಮಾಚನಹಳ್ಳಿ ಗ್ರಾಮ ಪಂಚಾಯಿತಿಗೆ ಕೇಂದ್ರದ ಹಣಕಾಸು ಇಲಾಖೆಯ ಜಂಟಿ ಕಾರ್ಯದರ್ಶಿ ಸಮೀರ್ ಶುಕ್ಲ ಭೇಟಿ, ಕಾಮಗಾರಿಗಳ ಪರಿಶೀಲನೆ


ಸುದ್ದಿಮೂಲ ವಾರ್ತೆ




ಶಿಡ್ಲಘಟ್ಟ,ಸೆ. 13 :  ತಾಲೂಕಿನ ಆನೂರು ಮಳಮಾಚನಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಕೇಂದ್ರದ ಹಣಕಾಸು ಇಲಾಖೆಯ ಜಂಟಿ ಕಾರ್ಯದರ್ಶಿ ಸಮೀರ್ ಶುಕ್ಲಾ ನೇತೃತ್ವದ ಅಧಿಕಾರಿಗಳ ತಂಡ ನರೇಗಾ ಹಾಗೂ ಜಲ ಶಕ್ತಿ, ಜಲ ಜೀವನ್ ಯೋಜನೆಯ ಕಾಮಗಾರಿಗಳನ್ನು ವೀಕ್ಷಿಸಿದರು.


ಮೊದಲಿಗೆ ಆನೂರು ಗ್ರಾಮಪಂಚಾಯಿತಿ ಕೇಂದ್ರ ಸ್ಥಾನದಲ್ಲಿನ ಮಾದರಿ ಅಂಗನವಾಡಿ ಕೇಂದ್ರ, ಡಿಜಿಟಲ್ ಲೈಬ್ರರಿ, ಹಿತ್ತಲಹಳ್ಳಿಯ ಶುದ್ಧ ಕುಡಿಯುವ ನೀರಿನ ಘಟಕ, ಬೆಳ್ಳೂಟಿ ಕೆರೆಯಲ್ಲಿನ ನಡುಗಡ್ಡೆಯಲ್ಲಿ ನಾಟಿದ ಸಸಿಗಳು, ತಾದೂರು ಬಳಿ ರಸ್ತೆ ಬದುಗಳಲ್ಲಿ ಬೆಳೆಸಿದ ಸಸಿಗಳನ್ನು ವೀಕ್ಷಿಸಿದರು.


ಈ ವೇಳೆ ಮಾತನಾಡಿದ ಸಮೀರ್ ಶುಕ್ಲಾ ಅವರು, ಕೇಂದ್ರದ ಮಜಿನರೇಗಾ ಹಾಗೂ ಜಲ ಶಕ್ತಿ ಯೋಜನೆಯಡಿ ಕೈಗೊಂಡ ಕಾಮಗಾರಿಗಳ ಸ್ಥಿತಿ ಗತಿಗಳನ್ನು ವೀಕ್ಷಿಸಿ ಕೇಂದ್ರಕ್ಕೆ ವರದಿ ನೀಡಲು ಭೇಟಿ ನೀಡಲಾಗಿದೆ. ಈ ಭಾಗದಲ್ಲಿ ನೀರಿನ ಲಭ್ಯತೆ ಪ್ರಮಾಣ ಕಡಿಮೆ ಇದ್ದರೂ ಆ ನೀರನ್ನು ಹಿಡಿದಿಟ್ಟು ಭೂಮಿಗೆ ಇಂಗಿಸುವ ಮತ್ತು ಸಿಗುವ ನೀರಿನ ಸದ್ಬಳಕೆ ಇತರರಿಗೂ ಮಾದರಿಯಾಗುವಂತೆ ಕಾಣುತ್ತಿದೆ. ಇದನ್ನೇ ವರದಿ ಮಾಡುತ್ತೇವೆ ಎಂದು ಹೇಳಿದರು.


ಜಲಶಕ್ತಿ ಯೋಜನೆಯನ್ನು ಕೆಲ ಭಾಗದಲ್ಲಿ ಆರಂಭಿಸಿದ್ದು ಮತ್ತೆ ಕೆಲ ಭಾಗದಲ್ಲಿ ಇನ್ನೂ ಆರಂಭಿಸುವ ಹಂತದಲ್ಲಿದೆ. ಮನ್ರೇಗಾ ಯೋಜನೆಯನ್ನು ಈ ಭಾಗದಲ್ಲಿ ಹೆಚ್ಚು ಸದ್ಬಳಕೆ ಮಾಡಿಕೊಂಡಿರುವುದು ಎದ್ದು ಕಾಣುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.


ಪರಿಸರ ಪ್ರೇಮಿ ಬೆಳ್ಳೂಟಿ ಸಂತೋಷ ಮಾತನಾಡಿ, ಗ್ರಾಮ ಪಂಚಾಯಿತಿ ಮಟ್ಟದ ಪ್ರತಿ ಮನೆಗೂ ಮಳೆ ನೀರು ಕೊಯ್ಲು ಪದ್ದತಿ ಅನುಷ್ಠಾನ, ಇಂಗು ಗುಂಡಿಗಳು ಹೊಂದಿರಬೇಕೆಂದು ಕಡ್ಡಾಯಗೊಳಿಸಬೇಕು.  ಜೊತೆಗೆ ಪರಿಸರವನ್ನು ಸಂರಕ್ಷಣೆ ಮಾಡಲು ಜಿಲ್ಲಾ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಬದಿಯಲ್ಲಿ ಮರಗಿಡಗಳನ್ನು ಬೆಳೆಸಲು ಗ್ರಾಮಸ್ಥರು ಮತ್ತು ಗ್ರಾಮ ಪಂಚಾಯಿತಿಗಳ ಸದಸ್ಯರು ಸಹಕಾರ ನೀಡಬೇಕೆಂದು ವಿನಂತಿಸಿದರು.


ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ತಾಲೂಕು ಪಂಚಾಯಿತಿ ಇಓ ಮಂಜುನಾಥ್, ಪಂಚಾಯತ್ ರಾಜ್ ಇಲಾಖೆಯ ಎಇಇ ರಮೇಶ್, ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಚಂದ್ರಪ್ಪ, ಅರಣ್ಯ ಇಲಾಖೆಯ ನಾಗಾರ್ಜುನ್, ಆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಿತ್ತಲಹಳ್ಳಿ ವೆಂಕಟೇಶ್, ಗ್ರಾ. ಪಂ. ಸದಸ್ಯ ವಿಶ್ವಾಸ್, ಪ್ರಗತಿಪರ ಕೃಷಿಕ ಹೆಚ್.ಕೆ. ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.






Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ