Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ ಸಂಗಣ್ಣ ಕರಡಿ

ಸುದ್ದಿಮೂಲವಾರ್ತೆ
ಕೊಪ್ಪಳ,ಜೂ.2: 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಲಿ ಸಂಸದರಿಗೆ ಟಿಕೆಟ್ ನೀಡುವುದಿಲ್ಲ ಎಂಬ ವರದಿಯಾಗಿದೆ. ಈ ಬಗ್ಗೆ ಸಂಸದ ಸಂಗಣ್ಣ ಕರಡಿ ಕೇಳಿದರೆ ಪಕ್ಷದ ನಿರ್ಧಾರಕ್ಕೆ ಬದ್ದ. ಒಂದು ವೇಳೆ ಟಿಕೆಟ್ ನೀಡದಿದ್ದರೆ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ಆದರೆ ಸಕ್ರೀಯ ರಾಜಕೀಯದಲ್ಲಿರುತ್ತೇನೆ ಎಂದಿದ್ದಾರೆ.
ಇಂದು ಮಾಧ್ಯಮಗಳಲ್ಲಿ ಬಿಜೆಪಿಯ 12 ಜನ ಹಾಲಿ ಸಂಸದರಿಗೆ ಟಿಕೆಟ್ ಇಲ್ಲ ಎಂಬ ವರದಿ ಪ್ರಸಾರವಾಗಿವೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಸದಸ್ಯ ಸಂಗಣ್ಣ ಕರಡಿಗೂ ಸಹ ಟಿಕೆಟ್ ಇಲ್ಲ ಎಂಬ ವರದಿ ಇದೆ.‌ಇದಕ್ಕೆ ಪ್ರತಿಕ್ರಿಯಿಸಿದ ಅವರು ಪಕ್ಷದ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಅದನ್ನು ಸ್ವಾಗತಿಸುತ್ತೇನೆ.ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ದವಾಗಿರುತ್ತೇನೆ ಎಂದರು.
ಇತ್ತೀಚಿಗೆ ಬಿಜೆಪಿ ಸಂಸದರ ಸಭೆ ಕರೆಯಲಾಗಿತ್ತು. ಆಗಲೂ ಈ ಬಗ್ಗೆ ಚರ್ಚೆಯಾಗಿಲ್ಲ.ಪಕ್ಷದವರು ನಮ್ಮ ಬಳಿ ಅದರ ಬಗ್ಗೆ ಏನು ಚರ್ಚೆ ಮಾಡಿಲ್ಲ. ಪಕ್ಷ ಒಂದು ವೇಳೆ ಸ್ಪರ್ಧಿಸಿ ಎಂದರೆ ಸ್ಪರ್ಧಿಸುವೆ, ಬೇಡ ಎಂದರೆ ಬಿಡುವೆ ಎಂದರು.
ಈಗ ನನ್ನದು ನಿವೃತ್ತಿ ವಯಸ್ಸು ಟಿಕೆಟ್‌ ಇಲ್ಲ ಎಂದಾಗ ರಿಟೈರ್ಡ್‌ ಆಗುತ್ತೇನೆ. ಸಕ್ರೀಯ ರಾಜಕಾರಣದಲ್ಲಿದ್ದು ನಮ್ಮ ಕೈಯಿಂದ ಏನು ಕೆಲಸ ಮಾಡಲು ಆಗುವುದು ಅದನ್ನು ಮಾಡುವೆ ಎಂದರು‌.
ಕಳೆದ 10 ವರ್ಷಗಳಿಂದ ಕೊಪ್ಪಳದ ಸಂಸದರಾಗಿರುವ ಸಂಗಣ್ಣ ಕರಡಿಗೆ ಈಗ 72 ವಯಸ್ಸು. ಬಿಜೆಪಿಯಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಟಿಕೆಟ್ ನೀಡುವುದಿಲ್ಲ ಎಂಬ ನಿಯಮವಿದೆ. ಈ ನಿಯಮ ಪಾಲನೆಯ ಹಿನ್ನಲೆಯಲ್ಲಿ ಸಂಗಣ್ಣರಿಗೆ ಟಿಕೆಟ್ ತಪ್ಪುವ ಸಾಧ್ಯತೆ ಇದೆ.
2013 ರಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಸೋಲಿನ ನಂತರ 2014 ರಲ್ಲಿ ಸಂಗಣ್ಣ ಕರಡಿಗೆ ಲೋಕಸಭೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಕಳೆದ 2019 ರ ಚುನಾವಣೆಯಲ್ಲಿಯೂ ಅವರು ಜಯ ಗಳಿಸಿದ್ದಾರೆ. ಈ ಮಧ್ಯೆ 2018 ರಲ್ಲಿ ಮಗನಿಗೆ ಟಿಕೆಟ್. 2019 ರಲ್ಲಿ ತಮಗೆ ಟಿಕೆಟ್ ಕೊಡಬೇಕೆಂದು ಪಟ್ಟು ಹಿಡಿದಿದ್ದರು. ಬಿಜೆಪಿ ಸಂಗಣ್ಣರಿಗೆ ಮಣಿದು ಒಮ್ಮೆ ಮಗ ಅಮರೇಶ ಕರಡಿಗೆ . 2023 ರಲ್ಲಿ ಸೋಸೆ ಮಂಜುಳಾ ಕರಡಿಗೆ ಟಿಕೆಟ್ ಕೊಡಿಸಿದ್ದರು.
1978 ರಿಂದ ಸಕ್ರೀಯ ರಾಜಕೀಯದಲ್ಲಿರುವ ಸಂಗಣ್ಣ ಕರಡಿ ಈಗ ಚುನಾವಣಾ ನಿವೃತ್ತಿಯಾಗುವ ಹಂತಕ್ಕೆ ಬಂದಿದ್ದಾರೆ. ಪಕ್ಷ ಟಿಕೆಟ್ ನೀಡದಿದ್ದರೆ ರಾಜಕೀಯ ರಿಲೀಫ್ ಸಿಗುತ್ತದೆ ಎಂದು ಹೇಳಿದ್ದಾರೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ