Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಜಯ್ ಸಿಂಗ್ ಬಂಧನ ಸಂವಿಧಾನದ ಕಗ್ಗೊಲೆ: ಮುಖ್ಯಮಂತ್ರಿ ಚಂದ್ರು

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.5:'ಇಂಡಿಯಾ' ಒಕ್ಕೂಟದ ಪ್ರಹಾರದಿಂದ ಕಂಗಾಲಾಗಿರುವ ಪ್ರಧಾನಿ ನರೇಂದ್ರ ಮೋದಿ ಇ.ಡಿ, ಸಿಬಿಐ, ಐಟಿ ದಾಳಿಯ ಮೂಲಕ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಸಾಕ್ಷ್ಯಾಧಾರಗಳಿಲ್ಲದೆ ಸಂಸದ ಸಂಜಯ್‌ ಸಿಂಗ್‌ ಅವರನ್ನು ಬಂಧಿಸಿರುವುದು ಅಕ್ಷಮ್ಯ. ಇದು ಪ್ರಜಾಪ್ರಭುತ್ವದ ಕಗ್ಗೊಲೆಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಬಕಾರಿ ನೀತಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಎಎಪಿ ಸಂಸದ ಸಂಜಯ್‌ ಸಿಂಗ್‌ ಅವರನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿ ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಮುಂಬರುವ ಐದು ವಿಧಾನಸಭೆ ಚುನಾವಣೆಗಳು ಸೇರಿದಂತೆ 2024ರ ಲೋಕಸಭೆ ಚುನಾವಣೆಯಲ್ಲಿ ಸೋಲುವ ಭೀತಿ ಶುರುವಾಗಿದೆ. ಅದಕ್ಕಾಗಿಯೇ ಸರ್ವಾಧಿಕಾರದ ಅಮಲಿನಲ್ಲಿ ಕೇಂದ್ರ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಅವರು ಎಷ್ಟೇ ದಾಳಿ ನಡೆಸಿದರೂ ನಾವು ಹೆದರುವುದಿಲ್ಲ. ಭೀತಿ ಎಂಬುದು ಕೇವಲ ತಪ್ಪಿತಸ್ಥರ ಎದೆಯಲ್ಲಿರುತ್ತದೆ. ನಮ್ಮ ಎದೆಯಲ್ಲಿ ಹೋರಾಟದ ಕಿಚ್ಚಿದೆ ಎಂದರು.

ಅಬಕಾರಿ ಹಗರಣದ ತನಿಖೆಯನ್ನು ಸುಮಾರು 15 ತಿಂಗಳಿಂದ ನಡೆಸಲಾಗುತ್ತಿದೆ. ನೂರಾರು ಅಧಿಕಾರಿಗಳು ಹಗಲು ರಾತ್ರಿ ಶೋಧ ನಡೆಸುತ್ತಿದ್ದಾರೆ. ಸುಮಾರು 1 ಸಾವಿರ ಸ್ಥಳಗಳ ಮೇಲೆ ದಾಳಿ ಮಾಡಿದ್ದಾರೆ. ನಮ್ಮ ಮುಖಂಡರಾದ ಸತ್ಯೇಂದ್ರ ಜೈನ್‌, ಮನೀಶ್‌ ಸಿಸೋಡಿಯಾ ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ. ಕಸ್ಟಡಿಯಲ್ಲಿಟ್ಟು ಕಿರುಕುಳ ನೀಡಿದ್ದಾರೆ. ಸಲ್ಲದ ಆರೋಪಗಳನ್ನು ಮಾಡಿ ಹಿಂಸಿಸಿದ್ದಾರೆ. ಆದರೆ ಇದುವರೆಗೆ ಒಂದೇ ಒಂದು ಪೈಸೆ ಭ್ರಷ್ಟಾಚಾರದ ಹಣವನ್ನು ವಶಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಸಂಜಯ್‌ ಸಿಂಗ್‌ ಅವರ ನಿವಾಸದಲ್ಲೂ ಒಂದು ರೂಪಾಯಿ ಸಿಕ್ಕಿಲ್ಲ. ನಡೆದಿರದ ಭ್ರಷ್ಟಾಚಾರವನ್ನು ನಡೆದಿದೆ ಎಂದು ಆರೋಪ ಹೊರಿಸಿ ಎಷ್ಟು ಹುಡುಕಿದರೆ ಏನು ಪ್ರಯೋಜನ? ಎಂದು ವಾಗ್ದಾಳಿ ನಡೆಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ