Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಸಿರುಮಯ ಜಿಲ್ಲೆಗಳನ್ನಾಗಿಸಲು ಸಂಕಲ್ಪ: ಧನುಂಜಯ

ಸುದ್ದಿಮೂಲ ವಾರ್ತೆ

ಚಿಕ್ಕಬಳ್ಳಾಪುರ,ಆ.3: ಕೋಲಾರ ಮತ್ತು ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳು ರೇಷ್ಮೆ, ಹೈನುಗಾರಿಕೆ ಹಾಗೂ ಹೂ ಹಣ್ಣು ಉತ್ಪಾದನೆಯಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿವೆ. ಅದೇ ರೀತಿಯಲ್ಲಿ ಸಮಾಜದಲ್ಲಿರುವ ಪ್ರತಿಯೊಬ್ಬರು ಸುತ್ತಮುತ್ತಲಿನ ಪ್ರದೇಶದಲ್ಲಿ ಗಿಡಗಳನ್ನು ನೆಟ್ಟು ಪೋಷಣೆ ಮಾಡಿ ಇಡೀ ಅವಳಿ ಜಿಲ್ಲೆಯನ್ನು ಹಸಿರುಮಯ ಮಾಡಲು ಸಂಕಲ್ಪ ಮಾಡಬೇಕೆಂದು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಸಂಸ್ಥೆಯ ಸಂಯೋಜನಾಧಿಕಾರಿ ಧನಂಜಯ್ ಕರೆ ನೀಡಿದರು.

ತಾಲೂಕಿನ ಬೀಡಾಗನಹಳ್ಳಿ ಕೆರೆ ಅಂಗಳದಲ್ಲಿ ಗಿಡ ನಾಟಿ ಮಾಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮನುಷ್ಯ ಬದುಕಲು ಹೇಗೆ ಆಹಾರ ಮುಖ್ಯವೋ ಅದೇ ರೀತಿಯಲ್ಲಿ ಶುದ್ಧಗಾಳಿಯೂ ಮುಖ್ಯ. ಹೀಗಾಗಿ. ಮರಗಳು ಸಮೃಧ್ಧವಾಗಿ ಬೆಳೆದರೆ ಪ್ರಾಕೃತಿಕವಾಗಿ ನಮಗೆ ಉತ್ತಮ ಗಾಳಿ ಸೇವಿಸಲು ಸಾಧ್ಯವಾಗುತ್ತದೆ. ಜೊತೆಗೆ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಎಲ್ಲರೂ ಕೈಜೋಡಿಸಬೇಕೆಂದು ಮನವಿ ಮಾಡಿದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜಲಮೂಲಗಳಾದ ಕೆರೆಗಳನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಶ್ರೀಗಳ ಮಾರ್ಗದರ್ಶನದಲ್ಲಿ 19 ಕೆರೆಗಳನ್ನು ಜನರ ಸಹಭಾಗಿತ್ವದಿಂದ ಪುನಶ್ಚೇತನಗೊಳಿಸಿ ಅಭಿವೃಧ್ಧಿಗೊಳಿಸಿದ್ದೇವೆ. ಅದರಿಂದ ಕೆರೆಗಳಲ್ಲಿ ಮಳೆಯ ನೀರು ಶೇಖರಣೆಯಾಗುವ ಜೊತೆಗೆ ಅಂರ್ತಜಲಮಟ್ಟ ವೃದ್ಧಿಯಾಗಿ ಕೆರೆಯ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಕೊಳವೆಬಾವಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಹಕಾರಿಯಾಗಲಿದೆ ಎಂದರು.

ಪ್ರಾಚೀನ ಕಾಲದಲ್ಲಿ ಜನರ ಕಲ್ಯಾಣಕ್ಕಾಗಿ ರೂಪಿಸಿರುವ ಯೋಜನೆಗಳು ಮತ್ತು ಕೆರೆಗಳನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಜಾಗೃತರಾಗಬೇಕು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಜಲಮೂಲಗಳನ್ನು ಸಂರಕ್ಷಣೆ ಮಾಡಿ ಅಭಿವೃಧ್ಧಿಗೊಳಿಸಲು ಸಾಥ್ ನೀಡಬೇಕೆಂದರಲ್ಲದೆ ಜಿಲ್ಲೆಯಲ್ಲಿ ಪ್ರಾಕೃತಿಕ ಸಂಪತ್ತು ಉಳಿಸಲು ಮತ್ತು ಅರಣ್ಯೀಕರಣವನ್ನು ಹೆಚ್ಚಿಸಲು ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕನಿಷ್ಠ 5 ಸಾವಿರ ಗಿಡ ನೆಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಗ್ರಾಮ ಪಂಚಾಯಿತಿ ಪ್ರತಿನಿಧಿಗಳು, ಸಂಘ ಸಂಸ್ಥೆಗಳು, ರೈತ ಸಂಘದವರು ಸಹಕಾರ ನೀಡಬೇಕೆಂದು ಕೋರಿದರು.

ಈ ಸಂದರ್ಭದಲ್ಲಿ ದೊಡ್ಡಮರುಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್, ಕೆರೆ ಸಮಿತಿ ಉಪಾಧ್ಯಕ್ಷ ವೆಂಕಟೇಶ್, ಕೆರೆ ಸಮಿತಿ ಸದಸ್ಯರಾದ ನಾರಾಯಣಸ್ವಾಮಿ, ರಘು, ಮಧು, ಯಲುವಳ್ಳಿ ಅಶೋಕ್, ವಲಯ ಮೇಲ್ವಿಚಾರಕಿ ನೇತ್ರಾ, ಕೃಷಿ ಮೇಲ್ವಿಚಾರಕ ಮಂಜುನಾಥ್, ಸೇವಾ ಪ್ರತಿನಿಧಿಗಳಾದ ಸುಮಾ ಲಾವಣ್ಯ, ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ