Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ರಿಕಾ ವಿತರಕರಿಗೆ ವೈದ್ಯಕೀಯ ನೆರವು : ಸಚಿವ ಸಂತೋಷ್‌ ಲಾಡ್‌

ಸುದ್ದಿಮೂಲ ವಾರ್ತೆ

ಬೆಂಗಳೂರು,ನ.28: ಪತ್ರಿಕಾ ವಿತರಕರು ಶ್ರಮಜೀವಿಗಳಾಗಿದ್ದು, ಅವರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಹೊಸದಾಗಿ ಯೋಜನೆ ರೂಪಿಸಿ, ಅಪಘಾತದಲ್ಲಿ ಮೃತಪಟ್ಟ ಪತ್ರಿಕಾ ವಿತರಕರಿಗೆ 2 ಲಕ್ಷ ವೈದ್ಯಕೀಯ ನೆರವಿಗೆ 1 ಲಕ್ಷ ರೂ ನೆರವಿನ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಪತ್ರಿಕಾ ವಿತರಕರ ಸಮಸ್ಯೆಗೆ ಸ್ಪಂಧಿಸಿ ಯೋಜನೆಯನ್ನು ಜಾರಿಗೊಳಿಸಿದ್ದಕ್ಕಾಗಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಅಸಂಘಟಿತ ವಲಯದಲ್ಲಿರುವ ಎಲ್ಲರಿಗೂ ಸಾಮಾಜಿಕ ಭದ್ರತೆ ಕಲ್ಪಿಸಬೇಕು ಎನ್ನುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದ್ದು, ಮೊದಲ ಹಂತವಾಗಿ ಪತ್ರಿಕಾ ವಿತರಕರಿಗೆ ಯೋಜನೆಯನ್ನು ಜಾರಿಗೆ ನೀಡಲಾಗಿದೆ ಎಂದರು.

ಸದುದ್ದೇಶಕ್ಕಾಗಿ ರೂಪಿಸಿರುವ ಯೋಜನೆ ದುರ್ಬಳಕೆ ಆಗಬಾರದು. ನಿಜವಾದ ಪತ್ರಿಕಾ ವಿತರಕರಿಗೆ ನೆರವಾಗುವಂತೆ ಮಾಡಲು ಸರ್ಕಾರ ನೀತಿ ನಿಯಮಾವಳಿ ರೂಪಿಸಲಿದ್ದು, ಅದಕ್ಕಾಗಿ ನಿಮ್ಮೆಲ್ಲರ ಸಹಕಾರವೂ ಮುಖ್ಯವಾಗಿದೆ. ಯೋಜನೆಯನ್ನು ಜಾರಿಗೆ ನೀಡಲು ಸಿಎಂ ಸಿದ್ದರಾಮಯ್ಯ ಅವರ ಸಹಕಾರ ಕಾರಣ. ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಕಾಳಜಿ ವಹಿಸಿದ್ದರು ಎಂದರು.

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ, ಪ್ರಧಾನ ಕಾರ್ಯದರ್ಶಿ ಸಂಗಮ್ ಸುರೇಶ್, ಕಾರ್ಮಿಕ ಇಲಾಖೆ ತಂದ ಈ ಯೋಜನೆಯಿಂದ ಪತ್ರಿಕಾ ವಿತರಕರಿಗೆ ಸರ್ಕಾರದಿಂದ ದೊಡ್ಡ ಭರವಸೆ ದೊರೆತಂತಾಗಿದೆ ಎಂದು ಶ್ಲಾಸಿ, ವಿತರಕರ ಪರವಾಗಿ ಕಾರ್ಮಿಕ ಸಚಿವರನ್ನು ಅಭಿನಂದಿಸಿದರು.

ರಾಜ್ಯ ಪತ್ರಿಕಾ ವಿತರಕರ ಸಂಘದ ಪದಾಧಿಕಾರಿಗಳಾದ ಎಂ.ಟಿ.ಗೋಪಾಲ್,ಎಂ.ಆರ್. ಶ್ರೀನಿವಾಸ್, ಎನ್.ದೇವರಾಜ್, ಶಿವಶಾಂತ್, ನಾರಾಯಣಸ್ವಾಮಿ, ಬಿಯುಡಬ್ಲೂೃಜೆ ಉಪಾಧ್ಯಕ್ಷ ಜುಕ್ರಿಯಾ ಮತ್ತಿತರರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ